ಒಂದೇ ದಿನದಲ್ಲಿ ನೆಗೆಟಿವ್ ವರದಿ ಕಡ್ಡಾಯ ಆದೇಶ ವಾಪಸ್ ಪಡೆದ ಜಿಲ್ಲಾಧಿಕಾರಿ
Team Udayavani, Apr 10, 2021, 12:46 PM IST
ಮೈಸೂರು: ಜಿಲ್ಲಾದ್ಯಂತ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಗುರುವಾರ ಹೊರಡಿಸಲಾಗಿದ್ದ ಆದೇಶವನ್ನು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಿಂಪಡೆದಿದ್ದಾರೆ. ಜತೆಗೆ ಕೋವಿಡ್ ತಡೆಗಾಗಿ ಕಠಿಣ ನಿಯಮ ಜಾರಿಗೊಳಿಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಕೋವಿಡ್ ಟಫ್ ರೂಲ್ಸ್ ನಿಯಮ ಜಾರಿ ಸಂಬಂಧ ಗುರುವಾರ ಸುದ್ದಿಗೋಷ್ಠಿ ನಡೆಸಿದ್ದ ಜಿಲ್ಲಾಧಿಕಾರಿ ಕೋವಿಡ್ ಹೆಚ್ಚಳ ಹಿನ್ನೆಲೆ, ಏ.10 ರಿಂದ 20ರವೆರೆಗೆ ಮೈಸೂರಿನ ಪ್ರವಾಸಿ ತಾಣಗಳು, ದೇಗುಲ, ರೆಸಾರ್ಟ್, ಹೋಟೆಲ್, ಚಿತ್ರಮಂದಿರಗಳಿಗೆ ಕೋವಿಡ್ ಟೆಸ್ಟ್ ರಿಪೋರ್ಟ್ ಕಡ್ಡಾಯ ಎಂದು ಆದೇಶಿಸಿದ್ದರು. ಹಾಗೆಯೇ ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್ -19 ನೆಗೆಟಿವ್ ರಿಪೋರ್ಟ್ ಹೊಂದಿರುವುದು ಸೂಕ್ತ ಎಂದು ಸಲಹೆ ನೀಡಿದ್ದರು.
ಇದರ ಬೆನ್ನಲ್ಲೇ ಕೋವಿಡ್ ಕಠಿಣ ನಿಯಮಗಳ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆ ಹೊರಡಿಸಿದ ಹಿನ್ನೆಲೆ
ಮೈಸೂರು ಡೀಸಿ ರೋಹಿಣಿ ಸಿಂಧೂರಿ ಅವರು ತಮ್ಮ ಆದೇಶ ಹಿಂಪಡೆದಿದ್ದಾರೆ. ತಮ್ಮ ಆದೇಶ ಹಿಂಪಡೆದ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಜಿಲ್ಲಾಧಿಕಾರಿ ಸಿಂಧೂರಿ, ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್-19 ನೆಗೆಟಿವ್ ರಿಪೋರ್ಟ್ ಹೊಂದಿರಲು ಸಲಹಾ ಸೂಚನೆ ನೀಡಲಾಗಿತ್ತು. ಸಾರ್ವಜನಿಕರಲ್ಲಿ ಸಲಹಾ ಸೂಚನೆ ಬಗ್ಗೆ ಗೊಂದಲ ಉಂಟಾಗಿದೆ. ಅಲ್ಲದೆ ಸರ್ಕಾರದ ಸುತ್ತೋಲೆಯಲ್ಲಿ ಕೊವಿಡ್ -19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತ್ಯೇಕ ಆದೇಶಗಳನ್ನು ಹೊರಡಿಸದಂತೆ ಹೇಳಿದೆ. ಈಗಾಗಲೇ ಇಂತಹ ಆದೇಶ, ಸೂಚನೆ ಹೊರಡಿಸಿದ್ದಲ್ಲಿ ತಕ್ಷಣವೇ ಹಿಂಪಡೆಯಲು ನಿರ್ದೇಶಿಸಿದೆ.
ಆದ್ದರಿಂದ ಹೊರಡಿಸಲಾಗಿರುವ ಸಲಹಾ ಸೂಚನೆಯನ್ನು ತಕ್ಷಣದಿಂದ ಹಿಂಪಡೆಯಲಾಗಿದೆ. ಸರ್ಕಾರದ ಸಲಹಾ ಸೂಚನೆಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಕೋರಿ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.