Mysore; ಹೊಸ ಬಾರ್ ಲೈಸೆನ್ಸ್ ಕೊಡಲ್ಲ, ಇದರ ಬಗ್ಗೆ ಚರ್ಚೆಯೇ ಬೇಡ: ಸಿಎಂ ಸಿದ್ದರಾಮಯ್ಯ
Team Udayavani, Oct 7, 2023, 12:25 PM IST
ಮೈಸೂರು: ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಹೊಸ ಬಾರ್ ಲೈಸನ್ಸ್ ಕೊಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ಡಿ.ಕೆ ಶಿವಕುಮಾರ್ ಎಲ್ಲೂ ಕೂಡ ಹೊಸ ಲೈಸನ್ಸ್ ಕೊಡುತ್ತೇವೆಂದು ಹೇಳಿಲ್ಲ. ಸದ್ಯಕ್ಕೆ ಆ ವಿಚಾರದಲ್ಲಿ ಯಾವ ಚರ್ಚೆಗಳು ಬೇಡ ಎಂದು ಹೇಳಿದ್ದಾರೆ.
ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಹೊಸ ಮದ್ಯದಂಗಡಿ ತೆರೆಯುವುದಿಲ್ಲ ಎಂದಿದ್ದರು. ಆದರೆ ಮತ್ತೊಂದೆಡೆ ಡಿಕೆ ಶಿವಕುಮಾರ್ ಅವರು, ಇದು ಹಣಕಾಸು ಇಲಾಖೆಯ ನಿರ್ಧಾರ. ಕಳೆದ ಮೂವತ್ತು ವರ್ಷಗಳಿಂದ ಹೊಸ ಮದ್ಯದಂಗಡಿ ಅನುಮತಿ ನೀಡಿಲ್ಲ. ಉದ್ಯೋಗ ಸೃಷ್ಠಿ ಕಾರಣದಿಂದ ಅನುಮತಿ ನೀಡುತ್ತೇವೆ ಎಂದಿದ್ದರು.
ಇಂದು ಮೈಸೂರಿನಲ್ಲಿ ಮಾತನಾಡಿದ ಸಿಎಂ, “ಜನರ ಭಾವನೆಗಳನ್ನು ಕೇಳಬೇಕು, ಗೌರವಿಸಬೇಕು. ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಹೊಸ ಲೈಸನ್ಸ್‌ಗಳು ಯಾವುದು ಇಲ್ಲ” ಎಂದರು.
ಮಹಿಷ ದಸರವನ್ನು ಸರ್ಕಾರ ಮಾಡಿಲ್ಲ. ನಾವು ಹಿಂದೆಯೂ ಮಾಡಿಲ್ಲ ಈಗಲೂ ಮಾಡುತ್ತಿಲ್ಲ. ಯಾರೋ ಹಿಂದಿನಿಂದ ಮಹಿಷ ದಸರಾ ಮೈಸೂರಿನಲ್ಲಿ ಮಾಡುತ್ತಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಏನು ಮಾಡಿಲ್ಲ. ಈಗ ಆ ವಿಚಾರದಲ್ಲಿ ಜಿಲ್ಲಾಡಳಿತ ತೀರ್ಮಾನ ಕೈಗೊಳ್ಳುತ್ತದೆ ಎಂದರು.
ಇದನ್ನೂ ಓದಿ:Tollywood: ರಾಮ್ ಪೋತಿನೇನಿ – ಅನುಪಮಾ ಪರಮೇಶ್ವರನ್ ವಿವಾಹ? ನಟಿಯ ತಾಯಿ ಸ್ಪಷ್ಟನೆ
ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ನಾನು ಈ ವಿಚಾರದಲ್ಲಿ ಯಾವ ಪ್ರತಿಕ್ರಿಯೆಯನ್ನು ನೀಡಲ್ಲ ಎಂದರು.
ಕೇಂದ್ರದಿಂದ ಬರ ಅಧ್ಯಯನ ವಿಚಾರಕ್ಕೆ ಮಾತನಾಡಿ, ಎಲ್ಲಾ ಹಳ್ಳಿಯ ಜನರನ್ನು ಖುದ್ದಾಗಿ ಭೇಟಿ ಮಾಡಿ ಸಮಸ್ಯೆ ಆಲಿಸಿ ಎಂದು ಕೇಂದ್ರದ ತಂಡಕ್ಕೆ ಕೇಳಿಕೊಂಡಿದ್ದೇನೆ. ಬರ ಪ್ರವಾಸದ ಯೋಜನೆ ಅವರೇ ಮಾಡಿಕೊಂಡಿದ್ದಾರೆ. ಆ ಕಡೆ ಹೋಗಿ ಈ ಕಡೆ ಬನ್ನಿಯೆಂದು ನಾವು ನಿರ್ಧರಿಸಲು ಸಾಧ್ಯವಿಲ್ಲ. ಹೊಲದಲ್ಲಿ ಹಸಿರು ಇದ್ದ ಕಾರಣಕ್ಕೆ ಅದು ಫಲ ಎಂಬ ಅರ್ಥವಲ್ಲ. ಬೆಳೆ ಬರಬೇಕು ಹೀಗಾಗಿ ಹಸಿರನ್ನು ನೋಡಿ ತೀರ್ಮಾನವಾಗಬಾರದು. ನಾವು 4500 ಕೋಟಿ ಬರ ಪರಿಹಾರ ಕೇಳಿದ್ದೇವೆ. ಕೇಂದ್ರ ತಂಡ ಇಲ್ಲಿಂದ ಹೋಗಿ ವರದಿ ಕೊಡುತ್ತದೆ. ಆನಂತರ ಅಧ್ಯಯನದ ವರದಿ ಬರುತ್ತದೆ. ಬರಕ್ಕೂ ಗ್ಯಾರಂಟಿ ಯೋಜನೆಗಳಿಗೂ ಸಂಬಂಧ ಇಲ್ಲ. ಬರದ ಪರಿಸ್ಥಿತಿ ಇದ್ದರೂ ಗ್ಯಾರಂಟಿಗಳು ಎಂದಿನಂತೆ ನಡೆಯುತ್ತವೆ ಎಂದರು.
ಜಾತಿ ಗಣತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನವೆಂಬರ್ ನಲ್ಲಿ ಕರ್ನಾಟಕದ ಜಾತಿಗಣತಿ ವರದಿ ನನ್ನ ಕೈ ಸೇರಬಹುದು, ಆನಂತರ ಪರಿಶೀಲಿಸಿ ತೀರ್ಮಾನ ಮಾಡುತ್ತೇವೆ. ಜಾತಿಗಣತಿ ಸಮಾಜವನ್ನು ವಿಂಗಡಿಸುವುದಿಲ್ಲ. ಯಾವ ಸಮುದಾಯ ಎಷ್ಟಿದೆ ಎಂಬುದು ಅಂಕಿ ಅಂಶಗಳು ಸರ್ಕಾರಕ್ಕೆ ಬೇಕು. ಯೋಜನೆಗಳ ಸಿದ್ಧಪಡಿಸಲು ಈ ಯೋಜನೆಗಳು ಅವಶ್ಯ ಎಂದರು.
ಪ್ರಧಾನಿ ಬಾಯಲ್ಲಿ ಮಾತ್ರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅನ್ನುತ್ತಾರೆ. ಆದರೆ ಅವರ ನಡೆನುಡಿಗೆ ಬಹಳ ವ್ಯತ್ಯಾಸಗಳಿವೆ. ಹೀಗಾಗಿ ಜಾತಿ ಗಣತಿ ವಿರೋಧಿಸುತ್ತಾರೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.