ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಯಾರಿಗೂ ಬೇಕಿಲ್ಲ


Team Udayavani, Nov 3, 2019, 3:00 AM IST

rajyadalli

ಕೆ.ಆರ್‌.ನಗರ: ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಯಾರೊಬ್ಬರಿಗೂ ಮಧ್ಯಂತರ ಚುನಾವಣೆ ನಡೆಯುವುದು ಬೇಕಾಗಿಲ್ಲ ಎಂದು ಶಾಸಕ ಸಾ.ರಾ.ಮಹೇಶ್‌ ತಿಳಿಸಿದರು. ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ಶನಿವಾರ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರಕ್ಕೆ ಜೆಡಿಎಸ್‌ ಬೆಂಬಲ ನೀಡುತ್ತದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಅವರು, ಸರ್ಕಾರದ‌ ಅವಧಿ ಇನ್ನೂ ಮೂರೂವರೆ ವರ್ಷಗಳಿದ್ದು, ಅವಧಿ ಪೂರ್ಣಗೊಳಿಸಲಿ ಎಂಬುದು ಸಾರ್ವಜನಿಕರು ಮತ್ತು ಎಲ್ಲಾ ಶಾಸಕರ ಅಭಿಪ್ರಾಯವಾಗಿದೆ ಎಂದರು.

ರಾಜ್ಯದಲ್ಲಿ ಭೀಕರ ನೆರೆ ಸಂಭವಿಸಿದ್ದು, ಜನತೆ ಸಂಕಷ್ಟದ ಪರಿಸ್ಥಿಯನ್ನು ಎದುರಿಸುತ್ತಿದ್ದಾರೆ. ಸಂತ್ರಸ್ತರು ಈಗ ತಾನೇ ಚೇತರಿಸಿಕೊಳ್ಳುತ್ತಿದ್ದು, ಸರ್ಕಾರ ಮತ್ತು ಚುನಾಯಿತ ಜನಪ್ರತಿನಿಧಿಗಳು ಅವರ ನೆರವಿಗೆ ಧಾವಿಸಬೇಕಿದೆ. ಆದ್ದರಿಂದ ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುವ ಯಾವುದೇ ಮುನ್ಸೂಚನೆ ಕಂಡು ಬರುತ್ತಿಲ್ಲ. ಈ ಉದ್ದೇಶದಿಂದ ನಮ್ಮ ರಾಜ್ಯ ನಾಯಕರು ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲವೆಂದು ಹೇಳಿದ್ದಾರೆ ಎಂದು ತಿಳಿಸಿದರು.

ಯಾರೂ ಜೆಡಿಎಸ್‌ ಬಿಡಲ್ಲ: ಜೆಡಿಎಸ್‌ ಪಕ್ಷದ ಯಾವುದೇ ವಿಧಾನ ಪರಿಷತ್‌ ಸದಸ್ಯರು ಮತ್ತು ಶಾಸಕರು ಬಿಜೆಪಿಗೆ ಸೇರುವುದಿಲ್ಲ. ಆದರೆ, ಕೆಲವು ದೃಶ್ಯ ಮಾಧ್ಯಮಗಳು ಉಹಾಪೋಹಗಳ ಸುದ್ದಿಯನ್ನು ಹಬ್ಬಿಸುವುದರ ಮೂಲಕ ಜನರ ಗ‌ಮನವನ್ನು ಬೇರೆಡೆಗೆ ಸೆಳೆಯುವ ಕೆಲಸ ಮಾಡುತ್ತಿವೆ. ನೆರೆಗೆ ತತ್ತರಿಸಿರುವ ಜನ ಸಾಮಾನ್ಯರಿಗೆ ತಲಪಬೇಕಾದ ಪರಿಹಾರದ ಬಗ್ಗೆ ಪ್ರಚಾರ ಮಾಡಿ ಗ‌ಮನ ಸೆಳೆಯಬೇಕಾದ ದೃಶ್ಯ ಮಾಧ್ಯಮಗಳು ರಾಜಕೀಯ ಸುದ್ದಿಯನ್ನು ಬಿತ್ತರಿಸುವಲ್ಲಿ ಕಾರ್ಯೋನ್ಮುಖರಾಗಿರುವುದು ವಿಷಾದನೀಯ ಎಂದರು.

ಟಿಪ್ಪು ಪಠ್ಯ ಕೈಬಿಡುವುದು ಸರಿಯಲ್ಲ: ಟಿಪ್ಪುಸುಲ್ತಾನ್‌ ಸೇರಿದಂತೆ ಯಾವುದೇ ಮಹನೀಯರ ಜೀವನ ಚರಿತ್ರೆಯನ್ನು ಪಠ್ಯ ಪುಸ್ತಕದಿಂದ ರದ್ದುಪಡಿಸುವುದು ಸರಿಯಲ್ಲ. ಇದಕ್ಕಾಗಿ ಒಂದು ತಜ್ಞರ ಸಮಿತಿ ರಚಿಸಿ, ವರದಿ ಬಂದ ನಂತರ ಸೂಕ್ಷ್ಮವಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಮೈಸೂರು ಹುಲಿ ಎಂಬ ಖ್ಯಾತಿ ಪಡೆದಿರುವ ಟಿಪ್ಪು ಸುಲ್ತಾನ್‌ ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆದು ಹಾಕಲು ಮುಂದಾಗಿರುವ ಬಿಜೆಪಿ ಸರ್ಕಾರದ ತೀರ್ಮಾನ ಒಂದು ಸಮುದಾಯದವರಿಗೆ ನೋವುಂಟು ಮಾಡಲಿದೆ.

ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು. ಪ್ರಯಾಣಿಕರು ಕಲುಷಿತ ನೀರು ಕುಡಿದು ರೋಗ ರುಜಿನಗಳಿಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಘ‌ಟಕಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ನೀರಿನ ಘಟಕವನ್ನು ಹಾಳು ಮಾಡದಂತೆ ಎಚ್ಚರಿಕೆಯಿಂದ ಉಪಯೋಗಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ನವನಗರ ಅರ್ಬನ್‌ ಕೋ-ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ಬಸಂತ್‌, ಜೆಡಿಎಸ್‌ ಮುಖಂಡರಾದ ಮುಬಾರಕ್‌ ಉಲ್ಲಾಖಾನ್‌, ಮೂರ್ತಿ, ಕೇಶವ, ಅತಿಕ್‌, ವಿಷ್ಣುವರ್ಧನ, ನಾಗೇಶ, ಘಟಕ ವ್ಯವಸ್ಥಾಪಕ ಪಾಪನಾಯಕ, ಸಂಚಾರ ನಿಯಂತ್ರಕ ರಮೇಶ್‌ ಇತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.