ಸಕ್ರಿಯವಾಗದ ಕಾವೇರಿ ಕುಟುಂಬ: ವಿಷಾದ
Team Udayavani, Sep 8, 2017, 11:24 AM IST
ಮೈಸೂರು: ರಾಜಕೀಯ ಕಾರಣಗಳಿಗಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರು ಹಂಚಿಕೆ ಕಗ್ಗಂಟಾಗಿರುವಾಗ ಎರಡೂ ರಾಜ್ಯಗಳ ರೈತರ ನಡುವೆ ಬಾಂಧವ್ಯ ಹಾಗೂ ಸಂವಹನ ಹೆಚ್ಚಿಸುವ ನಿಟ್ಟಿನಲ್ಲಿ ಇಶಾ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್ ಅವರು ಕಾವೇರಿ ನದಿ ತೀರದ ರೈತರ ಸಭೆ ನಡೆಸಲು ಮುಂದಾಗಿರುವುದು ಕುತೂಹಲ ಮೂಡಿಸಿದೆ.
ದಶಕಗಳ ಹಿಂದೆ ರೈತಸಂಘಟನೆಗಳ ಮುಖಂಡರು ಸೇರಿ ಇಂತಹದೊಂದು ಪ್ರಯತ್ನ ನಡೆಸಿದ್ದರು. ಆದರೆ, ಕೆಲ ಕಾರಣಗಳಿಂದಾಗಿ ನ್ಯಾಯಾಲಯದ ಹೊರಗೆ ಸೌಹಾರ್ದಯುತವಾಗಿ ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಬೇಕು ಎಂಬ ರೈತ ಮುಖಂಡರ ಪ್ರಯತ್ನ ಸಫಲವಾಗಿರಲಿಲ್ಲ.
ಕಾವೇರಿ ಕುಟುಂಬ: 2003ರಲ್ಲಿ ಕಾವೇರಿ ನದಿ ಪಾತ್ರದಲ್ಲಿ ಬರುವ ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ ರಾಜ್ಯಗಳ ರೈತ ಮುಖಂಡರನ್ನೊಳಗೊಂಡ 24 ಜನರ ಕಾವೇರಿ ಕುಟುಂಬ ರಚಿಸಿಕೊಳ್ಳಲಾಗಿತ್ತು. ಕರ್ನಾಟಕದಿಂದ ಶಾಸಕರಾದ ರೈತ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ, ಪೊ›.ಕೆ.ಸಿ.ಬಸವರಾಜು, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ, ರೈತ ಮುಖಂಡರಾದ ಕೆ.ಬೋರಯ್ಯ, ಸುನಂದಜಯರಾಂ, ಪೊ›.ಎಚ್.ಎಲ್.ಕೇಶವಮೂರ್ತಿ,
ಕೊಡಗಿನ ಸುಬ್ಬಯ್ಯ, ರಂಗನಾಥ್, ಸಿ.ಡಿ.ಮಹದೇವಯ್ಯ, ಮಲ್ಲಯ್ಯ, ಪ್ರಕಾಶ್ ಕಮ್ಮರಡಿ ಸೇರಿದಂತೆ 11 ಜನ ಸದಸ್ಯರು, ನಂತರದ ದಿನಗಳಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಕುರುಬೂರು ಶಾಂತಕುಮಾರ್ ಅವರನ್ನೂ ಈ ಕುಟುಂಬದ ಸದಸ್ಯರನ್ನಾಗಿ ಸೇರಿಸಿಕೊಳ್ಳಲಾಗಿತ್ತು. ತಮಿಳುನಾಡಿನಿಂದ 11 ಜನ, ಕೇರಳ ಮತ್ತು ಪುದುಚೇರಿ ರಾಜ್ಯಗಳಿಂದ ತಲಾ ಒಬ್ಬರು ಈ ಕುಟುಂಬದ ಸದಸ್ಯರಾಗಿದ್ದರು. ತಮಿಳುನಾಡಿನಿಂದ ರಾಮಸ್ವಾಮಿ ಅಯ್ಯಂಗಾರ್, ಕರ್ನಾಟಕದಿಂದ ಭವಾನಿಶಂಕರ್ ಕುಟುಂಬದ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು.
ಕಾವೇರಿ ಕುಟುಂಬದ ಸದಸ್ಯರು ಎರಡೂ ರಾಜ್ಯಗಳ ನದಿ ಪಾತ್ರದ ಅಚ್ಚುಕಟ್ಟು ಪ್ರದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡು ಸಮಸ್ಯೆ ಮನವರಿಕೆ ಮಾಡಿಕೊಂಡಿದ್ದರು. ಈ ಸಂಬಂಧ ಸುಮಾರು 14 ಸಭೆಗಳು ನಡೆದಿದ್ದು ವಿಶೇಷ. ಅರಣ್ಯ ನಾಶ, ಹವಾಮಾನ ವೈಪರಿತ್ಯದಿಂದ ವರ್ಷದಿಂದ ವರ್ಷಕ್ಕೆ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದ್ದು, ನೀರಿನ ಕೊರತೆ ಎದುರಾಗಿದೆ.
ಹೀಗಾಗಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕಿರುವುದರಿಂದ ಕಾವೇರಿ ನದಿ ಪಾತ್ರದ ರೈತರು ಬೆಳೆ ಪದ್ಧತಿ ಬದಲಿಸಿಕೊಳ್ಳಬೇಕು, ಬೆಳೆ ರಜೆಯನ್ನೂ ಘೋಷಿಸಬೇಕು ಎಂಬ ಬಗ್ಗೆಯೂ ಚರ್ಚೆ ನಡೆದಿತ್ತು. ಎರಡೂ ರಾಜ್ಯಗಳಲ್ಲಿ ಹಲವು ಸುತ್ತಿನ ಸಭೆಗಳನ್ನು ನಡೆಸಿ ಚರ್ಚಿಸಿದ ಬಳಿಕ ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಜೆ.ಜಯಲಲಿತಾ, ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ದುಂಡುಮೇಜಿನ ಸಭೆ ನಡೆಸಿ ಕಾವೇರಿ ನೀರು ಹಂಚಿಕೆ ಸಂಬಂಧದ ಶತಮಾನಗಳ ಸಮಸ್ಯೆಗೆ ನ್ಯಾಯಾಲಯದ ಹೊರಗೆ ಪರಿಹಾರ ಕಂಡುಕೊಳ್ಳುವ ಗಂಭೀರ ಪ್ರಯತ್ನ ನಡೆದಿತ್ತು.
ಆದರೆ, ಮುಖ್ಯಮಂತ್ರಿಗಳ ಭೇಟಿ ಮಾಡುವ ವಿಚಾರದಲ್ಲಿ ತಮಿಳುನಾಡಿನ ಕೆಲವರು ಅಡ್ಡಗಾಲು ಹಾಕಿದ್ದರಿಂದ ನಮ್ಮ ಪ್ರಯತ್ನ ಕೈಗೂಡಲಿಲ್ಲ ಎನ್ನುತ್ತಾರೆ ಕಾವೇರಿ ಕುಟುಂಬದ ಸದಸ್ಯರಾಗಿರುವ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ. ಈಗಲೂ ಕಾವೇರಿ ಕುಟುಂಬ ಜೀವಂತವಾಗಿದೆ. ಆದರೆ, ನ್ಯಾಯಾಲಯದ ಆದೇಶದಿಂದ ಕರ್ನಾಟಕಕ್ಕೆ ಹಿನ್ನಡೆ ಉಂಟಾಗಿರುವುದರಿಂದ ಸಕ್ರಿಯವಾಗಿಲ್ಲ ಎನ್ನುತ್ತಾರೆ ಅವರು.
ಒಂದೊಮ್ಮೆ ತಮಿಳುನಾಡಿನ ಕೆಲ ರೈತ ಮುಖಂಡರು ಅಡ್ಡಗಾಲು ಹಾಕದಿದ್ದರೆ ಅಂದೇ ಸಮಸ್ಯೆ ಬಗೆಹರಿಯುತ್ತಿತ್ತು. ಇದು ಸಾಧ್ಯವಾಗಿದ್ದರೆ, ಕಾವೇರಿ ನ್ಯಾಯಾಧೀಕರಣ ಕರ್ನಾಟಕಕ್ಕೆ ಕೊಟ್ಟಿದ್ದಕ್ಕಿಂತ 15 ಟಿಎಂಸಿ ನೀರು ಹೆಚ್ಚುವರಿಯಾಗಿ ಸಿಗುತ್ತಿತ್ತು ಎಂದು ಬಡಗಲಪುರ ನಾಗೇಂದ್ರ “ಉದಯವಾಣಿ’ ಜತೆಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
ಸದ್ಗುರು ರಾಷ್ಟ್ರಯಾತ್ರೆ ಇಂದು ಮೈಸೂರಿಗೆ: ನದಿಗಳನ್ನು ರಕ್ಷಿಸಿ ಅಭಿಯಾನ ಕೈಗೊಂಡಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ರಾಷ್ಟ್ರಯಾತ್ರೆ ಶುಕ್ರವಾರ ಮೈಸೂರು ತಲುಪಲಿದೆ. ರಾಷ್ಟ್ರಯಾತ್ರೆ ಅಂಗವಾಗಿ ಸಂಜೆ 6ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದ್ದು, ರಾಜವಂಶಸ್ಥರಾದ ಡಾ.ಪ್ರಮೋದಾದೇವಿ ಒಡೆಯರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ನಟ ಗಣೇಶ್, ಸಂಸದ ಪ್ರತಾಪ್ ಸಿಂಹ, ಶಾಸಕ ವಾಸು ಭಾಗವಹಿಸಲಿದ್ದಾರೆ. ಸುಮಾರು 10 ಸಾವಿರ ಮಂದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ರೈತರ ಸಭೆ: ಇದಕ್ಕೂ ಮುನ್ನ ಕೆಆರ್‌ಎಸ್ ಜಲಾಶಯದ ಹಿನ್ನೀರಿನ ಮೀನಾಕ್ಷಿಪುರದಲ್ಲಿ ಬೆಳಗ್ಗೆ 8.30ರಿಂದ 10ಗಂಟೆವರೆಗೆ ಕರ್ನಾಟಕ ಮತ್ತು ತಮಿಳುನಾಡು ಕಾವೇರಿ ನದಿ ಪಾತ್ರದ ರೈತರ ಸಭೆಯನ್ನು ಸದ್ಗುರು ನಡೆಸಲಿದ್ದಾರೆ.
ಸದ್ಗುರು ಅಭಿಯಾನದ ಉದ್ದೇಶವಿದು: ಭಾರತದ ನದಿಗಳು ದುಃಸ್ಥಿತಿಗೆ ತಲುಪಿದ್ದು, ಒಂದೊಮ್ಮೆ ವರ್ಷಪೂರ್ತಿ ಹರಿಯುತ್ತಿದ್ದ ನದಿಗಳು ಇಂದು ಮಳೆಗಾಲದಲ್ಲಿ ಹರಿಯುವ ನದಿಗಳಾಗಿವೆ. ಅದೆಷ್ಟೋ ಚಿಕ್ಕಪುಟ್ಟ ನದಿಗಳು ಹೇಳಹೆಸರಿಲ್ಲದಂತೆ ಮಾಯವಾಗಿವೆ. ಮುಂದಿನ 15 ವರ್ಷಗಳಲ್ಲಿ ನಮಗೆ ಬದುಕಲು ಅವಶ್ಯವಿರುವಷ್ಟು ನೀರೂ ಸಿಗುವುದಿಲ್ಲ.
ಮುಖ್ಯ ನದಿಗಳಾದ ಗಂಗಾ, ಕೃಷ್ಣಾ, ನರ್ಮದಾ, ಕಾವೇರಿ ಬಹು ಬೇಗನೆ ಬತ್ತಿ ಹೋಗುತ್ತಿವೆ. ಹೀಗಾಗಿ ನದಿಗಳನ್ನು ರಕ್ಷಿಸಿಕೊಳ್ಳಬೇಕಿರುವುದರಿಂದ ದೇಶಾದ್ಯಂತ ಜನ ಜಾಗೃತಿ ಮೂಡಿಸಲು ಇಶಾ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್ ಅವರು ಕನ್ಯಾಕುಮಾರಿಯಿಂದ ಹಿಮಾಲಯದವರೆಗೆ ರಾಷ್ಟ್ರಯಾತ್ರೆ ಕೈಗೊಂಡಿದ್ದಾರೆ.
* ಗಿರೀಶ್ ಹುಣಸೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.