ಕಬಿನಿ ಜಲಾಶಯಕ್ಕೆ ಕಚೇರಿ ಮುತ್ತಿಗೆ
Team Udayavani, Jul 1, 2017, 11:47 AM IST
ಎಚ್.ಡಿ.ಕೋಟೆ: ತಾಲೂಕಿನ ಕಬಿನಿ ಜಲಾಶಯ ತುಂಬುವ ಮುನ್ನವೆ ತಮಿಳುನಾಡಿಗೆ 2 ಸಾವಿರಗೂ ಹೆಚ್ಚು ನೀರನ್ನು ಹೊರ ಬಿಟ್ಟಿರುವ ಹಿನ್ನೆಲೆಯಲ್ಲಿ ಅಚ್ಚುಕಟ್ಟು ಪ್ರದೇಶದ ರೈತರುಗಳು ಕಬಿನಿ ಜಲಾಶಯದ ಕಚೇರಿಗೆ ಮುತ್ತಿಗೆ ಹಾಕಿ ಜಲಾಶಯದ ನೀರನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಮಾತನಾಡಿ, ಜಲಾಶಯದಲ್ಲಿ ಈಗ ಕೇವಲ 60 ಅಡಿಗಳಷ್ಟು ಮಾತ್ರ ನೀರು ಸಂಗ್ರಹವಿದ್ದು, ಭರ್ತಿಯಾಗಲು ಇನ್ನೂ 25 ಅಡಿ ನೀರಿನ ಕೊರತೆ ಎದುರಿಸುತ್ತಿದೆ, ಇನ್ನೂ ಜಲಾಶಯಕ್ಕೆ ಒಳ ಹರಿವು ಕೂಡ 6 ಸಾವಿರ ಕ್ಯುಸೆಕ್ ಹರಿದು ಬರುತ್ತಿದ್ದು, ಮಳೆ ಪ್ರಮಾಣ ಕೂಡ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಎಂದರು.
ಈ ಭಾಗದ ರೈತರು ಜಲಾಶಯ ಇನ್ನೂ ಭರ್ತಿಯಾಗದೆ ಅತಂತ್ರದಲ್ಲಿದ್ದು ಇಂತಹ ಸಂದರ್ಭದಲ್ಲಿ ರೈತರ ಹಿತಕಾಯಬೇಕಿದ್ದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಮ್ಮ ಹಿತಕ್ಕಾಗಿ ಸುಭಾಷ್ ವಿದ್ಯುತ್ ಘಟಕದ ಮೂಲಕ ನೀರು ಹೊರ ಬಿಟ್ಟಿರುವುದು ಸರಿಯಲ್ಲ ಎಂದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಕಬಿನಿ ಜಲಾಶಯದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕಬಿನಿ ಶಿವಲಿಂಗ, ರಘು, ಬಸ್ಸು, ಕೇಶವ, ಆಕಾಶ್, ಶಿವರಾಮ್, ರಾಜೇಶ್, ಗಣೇಶ್ ಪ್ರಸಾದ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.