ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಅಧಿಕಾರಿಗಳ ತಡೆ ಖಂಡಿಸಿ ಕತ್ತು ಕೊಯ್ದುಕೊಂಡ ಯುವಕ!
Team Udayavani, Dec 4, 2021, 3:08 PM IST
ಮೈಸೂರು: ಇಲ್ಲಿನ ಪಡುವಾರಹಳ್ಳಿಯ ಮಾತೃ ಮಂಡಳಿ ವೃತ್ತದಲ್ಲಿ ಅನುಮತಿ ಇಲ್ಲದೆ ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲು ಮುಂದಾದ ಯುವಕರನ್ನು ಅಧಿಕಾರಿಗಳು ತಡೆದ ಘಟನೆ ನಡೆದಿದೆ.
ಅನುಮತಿ ಇಲ್ಲದೆ ಪ್ರತಿಮೆ ನಿರ್ಮಾಣ ಮಾಡುವುದನ್ನು ಪೊಲೀಸರು ತಡೆದಿದ್ದು, ಮಹಾನಗರ ಪಾಲಿಕೆ ಸಿಬ್ಬಂದಿಗಳು ಪ್ರತಿಮೆಯನ್ನು ವಶಕ್ಕೆ ಪಡೆದರು. ಇದನ್ನು ಖಂಡಿಸಿ ಪಡುವಾರಹಳ್ಳಿಯ ನಿವಾಸಿ ಸತೀಶ್ (29 ವ) ಕತ್ತು ಕೊಯ್ದುಕೊಂಡ ಪ್ರಸಂಗ ನಡೆಯಿತು. ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಇದನ್ನೂ ಓದಿ:ಶಿವರಾಮ್ ನಟರಷ್ಟೇ ಅಲ್ಲ, ಸ್ಟಾರ್ ನಟರ ಸಿನಿಮಾ ನಿರ್ಮಾಪಕ, ನಿರ್ದೇಶಕರೂ ಆಗಿ ಮನಗೆದ್ದಿದ್ರು…
ಕಾಂಗ್ರೆಸ್ ವಿರೋಧ: ಪಡುವಾರಹಳ್ಳಿಯ ಮಾತೃ ಮಂಡಳಿ ವೃತ್ತದಲ್ಲಿದ್ದ ಅಂಬೇಡ್ಕರ್ ಪ್ರತಿಮೆಯನ್ನು ತೆರವುಗೊಳಿಸಿರುವುದನ್ನು ಖಂಡಿಸುತ್ತೇವೆ. ಈ ಬೆಳವಣಿಗೆ ಬಿಜೆಪಿಯ ದಲಿತ ವಿರೋಧಿ ನೀತಿಗೆ ಸಾಕ್ಷಿಯಾಗಿದೆ. ಸರ್ಕಾರದ ಅಧಿಕಾರಿಗಳು ಬಲವಂತವಾಗಿ ಅಂಬೇಡ್ಕರ್ ಪ್ರತಿಮೆಯನ್ನು ತೆರವು ಮಾಡಿರುವುದು ಸರಿಯಲ್ಲ. ಪ್ರತಿಮೆಯನ್ನು ಪುನರ್ ಸ್ಥಾಪಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.