ಫೆ.1ರಂದು ಮೈಸೂರಲ್ಲಿ ಆದಿವಾಸಿಗಳ ಬೃಹತ್ ಸಮಾವೇಶ
Team Udayavani, Jan 28, 2017, 12:46 PM IST
ಮೈಸೂರು: ಸರ್ಕಾರದ ಸವಲತ್ತುಗಳನ್ನು ಆದಿವಾಸಿ ಜನಾಂಗದ ಫಲಾನುಭವಿಗಳಿಗೆ ವಿತರಿಸಲು ಫೆಬ್ರವರಿ 1ರಂದು ಆದಿವಾಸಿಗಳ ರಾಜ್ಯಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ತಿಳಿಸಿದರು.
ನಗರದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಮಾವೇಶದ ಪೂರ್ವಸಿದ್ಧತಾ ಸಭೆ ನಡೆಸಿ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆಯಲಿರುವ ಸಮಾವೇಶವನ್ನು ಅಂದು ಮಧ್ಯಾಹ್ನ 2ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮೊದಲಾದವರು ಭಾಗವಹಿಸಲಿದ್ದಾರೆ. ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಂದ ಸುಮಾರು 12 ಸಾವಿರ ಆದಿವಾಸಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಆದಿವಾಸಿಗಳಿಗೆ ಸರ್ಕಾರದ ಯೋಜನೆಗಳ ಮಾಹಿತಿ ಮೊದಲು ತಲುಪಬೇಕು ಎಂಬ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗುತ್ತಿದ್ದು, ವಿವಿಧ ಇಲಾಖೆಗಳಿಂದ ದೊರಕುವ ಸೌಲಭ್ಯಗಳ ಮಾಹಿತಿಯನ್ನು ಕ್ರೋಢೀಕರಿಸಿ ಉತ್ತಮ ರೀತಿಯಲ್ಲಿ ಸಮಾವೇಶದಲ್ಲಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ವಿವಿಧ ಜಿಲ್ಲೆಗಳಿಂದ ಆದಿವಾಸಿಗಳು ಫೆ.1ರಂದು ಮಧ್ಯಾಹ್ನ 12ಕ್ಕೆ ಆಗಮಿಸುವ ವ್ಯವಸ್ಥೆ ಮಾಡಿಕೊಳ್ಳಬೇಕು. ಪ್ರತಿ ಜಿಲ್ಲೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ, ನೋಡಲ್ ಅಧಿಕಾರಿಗಳು ತಮ್ಮ ಜಿಲ್ಲೆಯಿಂದ ಆಗಮಿಸುವ ಆದಿವಾಸಿ ಜನಾಂಗದವರ ಪಟ್ಟಿ ಮಾಡಿಕೊಳ್ಳಬೇಕು. ಜಿಲ್ಲಾ ಕೇಂದ್ರದಲ್ಲಿ ಅವರನ್ನು ಒಗ್ಗೂಡಿಸಿ ಕಾರ್ಯಕ್ರಮಕ್ಕೆ ಕರೆತರಬೇಕು. ದೂರದ ಜಿಲ್ಲೆಗಳಿಂದ ಆಗಮಿಸುವವರಿಗೆ ಸಮಾಜ ಕಲ್ಯಾಣ ಇಲಾಖೆ/ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಸತಿ ನಿಲಯಗಳಲ್ಲಿ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸಬೇಕು ಎಂದರು.
ಜಿಲ್ಲೆಗಳಲ್ಲಿರುವ ಆದಿವಾಸಿ ಜನಾಂಗದ ಮುಖ್ಯಸ್ಥರಿಂದ ಅವರಿಗೆ ಇರುವ ತೊಂದರೆಗಳ ಬಗ್ಗೆ ಮನವಿ ಪಡೆದುಕೊಂಡು ಕ್ರೋಢೀಕರಿಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸುವುದು ಉತ್ತಮ ಎಂದು ಅಧಿಕಾರಿಗಳಿಗೆ ತಿಳಿಸಿದರು. ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಕಾರ್ಯಕ್ರಮಕ್ಕೆ ವೇದಿಕೆ ಹಾಗೂ ಬ್ಯಾರಿಕೇಡಿಂಗ್ ನಿರ್ಮಾಣ ಮಾಡುವ ಮೊದಲು ನಗರ ಪೊಲೀಸ್ ಆಯುಕ್ತರೊಂದಿಗೆ ಸ್ಥಳ ಪರಿಶೀಲನೆ ಮಾಡಿ ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನ ನಿಲುಗಡೆ ಸ್ಥಳ, ಗಣ್ಯರ ವಾಹನ ನಿಲುಗಡೆ ಸ್ಥಳ ನಿಗಧಿ ಮಾಡಿಕೊಳ್ಳುವಂತೆ ಗಿರಿಜನ ಸಮಗ್ರ ಅಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಅರಣ್ಯ ಹಕ್ಕು ಪತ್ರ, ಪೌಷ್ಟಿಕ ಆಹಾರ ವಿತರಣೆ, ಬಹುಮಾನ ಮೊತ್ತ ವಿತರಣೆ ಹಾಗೂ ಇನ್ನಿತರೆ ಸೌಲಭ್ಯಗಳ ಪತ್ರಗಳನ್ನು ವಿತರಿಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳಿಗೆ ವೇದಿಕೆಯಲ್ಲಿ ಸಾಂಕೇತಿಕವಾಗಿ ಪ್ರಮಾಣ ಪತ್ರ ವಿತರಿಸಲಾಗುವುದು. ಇವರಿಗೆ ಗುರುತಿನ ಚೀಟಿ ನೀಡಿ ವೇದಿಕೆಯ ಮೇಲೆ ಕರೆತರಲು ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಹೇಳಿದರು.
ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ಜಿಲ್ಲಾಮಟ್ಟದ ಅಧಿಕಾರಿಗಳನ್ನೊಳಗೊಂಡ ಆಹಾರ, ಭದ್ರತೆ, ಸ್ವಚತೆ, ವೇದಿಕೆ ಹಾಗೂ ಇನ್ನಿತರ ಸಮಿತಿಗಳನ್ನು ರಚಿಸುವಂತೆ ತಿಳಿಸಿದರು. ಸಭೆಯಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ನಿರ್ದೇಶಕ ರೇವಣ್ಣಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಶಿವಶಂಕರ್, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಬಸವನಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.