ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಉದ್ಯೋಗ ಮೇಳ
Team Udayavani, Apr 11, 2023, 2:27 PM IST
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ 15 ದಿನ ಪ್ಲೇಸ್‌ಮೆಂಟ್ ಉತ್ಸವ-2023 (ಉದ್ಯೋಗ ಮೇಳ) ಆಯೋಜಿಸಲಾಗಿದೆ ಎಂದು ಕೆಎಸ್‌ಒಯು ವಿವಿ ಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ ತಿಳಿಸಿದರು.
ವಿಶ್ವವಿದ್ಯಾಲಯ ಆವರಣದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮುಕ್ತ ವಿವಿ ವಿದ್ಯಾ ರ್ಥಿಗಳ ಅನುಕೂಲಕ್ಕಾಗಿ ಪ್ರೊಫೈಲ್ ಇನ್ ಸಂಸ್ಥೆಯ ಸಹಯೋಗದಲ್ಲಿ ಏ.15ರಿಂದ 15 ದಿನ ಉದ್ಯೋಗ ಮೇಳವನ್ನು ಆನ್‌ಲೈನ್ ಮೂಲಕ ಆಯೋಜಿಸಲಾಗಿದೆ ಎಂದು ಹೇಳಿದರು. ಇದು ಮುಕ್ತ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಮೇಳ ಹಮ್ಮಿಕೊಂಡಿದ್ದು, ಎಂಬಿಎ, ಎಂಕಾಂ ಪದವೀಧರರಿಗೆ ಹೆಚ್ಚಿನ ಅವಕಾಶಗಳಿವೆ. ಅಂದಾಜು 10 ಕಂಪನಿಗಳಿಂದ 2 ಸಾವಿರ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತಿದೆ. ವಾರ್ಷಿಕ 3 ರಿಂದ 6 ಲಕ್ಷ ರೂ. ವರೆಗೆ ಅಧಿಕ ವೇತ ನದ ಉದ್ಯೋಗಗಳಿವೆ ಎಂದು ವಿವರಿಸಿದರು.
ಹತ್ತಿರದ ಸ್ಥಳದಲ್ಲಿ ಸಂದರ್ಶನ: ಮೂರು ಹಂತದಲ್ಲಿ ಪ್ರಕ್ರಿಯೆ ನಡೆಯಲಿದ್ದು, ಡಿಜಿಟಲ್ ಬಯೋಡಾಟಾ ಸಿದ್ಧಪಡಿಸಲು ಅಭ್ಯರ್ಥಿಗಳಿಗೆ ಸಹಾಯ ಮಾಡುವುದು, ಕಂಪನಿಗಳಿಗೆ ಅವಶ್ಯಕ ವಿರುವ ವಿದ್ಯಾರ್ಥಿಗಳ ದಾಖಲಾತಿಗಳ ಪರಿಶೀಲನೆ ಮಾಡುವುದು ಹಾಗೂ ಪ್ರಾಥಮಿಕ ಹಂತದ ಸಂದರ್ಶನ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆ ಯಾದ ಅಭ್ಯರ್ಥಿಗಳಿಗೆ ಅವರ ಹತ್ತಿರದ ಸ್ಥಳದಲ್ಲಿ ಮುಖಾಮುಖೀ ಸಂದರ್ಶನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
535 ಜನರಿಗೆ ಉದ್ಯೋಗ: ವಿವಿಧ ಭಾಗದಲ್ಲಿರುವ ಮುಕ್ತ ವಿವಿ ವಿದ್ಯಾರ್ಥಿಗಳು ತಮ್ಮ ಸ್ಥಳದಿಂದಲೇ ಆನ್‌ಲೈನ್ ಮೂಲಕ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು. ಇದಕ್ಕೆ ಉಚಿತ ಪ್ರವೇಶ ಇದೆ. 2021ರಲ್ಲಿ ಆನ್‌ಲೈನ್ ಮೂಲಕ ಉದ್ಯೋಗ ಮೇಳ ಮಾಡಲಾಗಿತ್ತು. ಅದರಲ್ಲಿ 2,900 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಈ ಪೈಕಿ 535 ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಮಾಹಿತಿ ನೀಡಿದರು.
27ಕ್ಕೆ ನ್ಯಾಕ್ ಭೇಟಿ: ಮುಕ್ತ ವಿಶ್ವವಿದ್ಯಾಲಯಕ್ಕೆ ನ್ಯಾಕ್ ಸಮಿತಿ ಏ.27ಕ್ಕೆ ಭೇಟಿ ನೀಡಲಿದ್ದು, ಮೂರು ದಿನ ಪರಾಮರ್ಶೆ ನಡೆಸಲಿದೆ. ನ್ಯಾಕ್ ಸಮಿತಿ ಭೇಟಿಗೂ ಮುನ್ನವೇ ಆಂತರಿಕವಾಗಿ ಕಲ್ಪಿತ ಪರಿಶೀಲನಾ ಕಾರ್ಯ ನಡೆಯಲಿದ್ದು, ಶಿವಮೊಗ್ಗ, ತುಮಕೂರು, ಮೈಸೂರು ವಿವಿಯ ಪ್ರಾಧ್ಯಾಪಕರನ್ನು ಕರೆಸಿಕೊಂಡು ಇದನ್ನು ಕೈಗೊಳ್ಳಲಾಗುವುದು ಎಂದರು.
ಅಧ್ಯಯನ ಕೇಂದ್ರ ತೆರೆಯಲು ಚಿಂತನೆ: ಹೊಸ ಕೋರ್ಸ್ ಪ್ರಾರಂಭಿಸಲು ಯುಜಿಸಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ದೊರೆತರೆ ಡಾಟಾ ಸೈನ್ಸ್, ಎಂಸಿಎ, ಸೈಬರ್ ಸೆಕ್ಯೂರಿಟಿ, ಬಿಎಸ್‌ಡಬ್ಲ್ಯು, ಎಂಎಸ್‌ಡಬ್ಲ್ಯು, ಭೂವಿಜ್ಞಾನ ಕೋರ್ಸ್ ಆರಂಭಿಸಲಾಗುವುದು. ವಿವಿ ಶೈಕ್ಷಣಿಕ ಚಟುವಟಿಕೆಗಳನ್ನು ವಿಸ್ತರಣೆಗಾಗಿ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಪ್ರಾದೇಶಿಕ ಕೇಂದ್ರ ತೆರೆಯಲಾಗು ವುದು. ಜತೆಗೆ, ಮೂಲಸೌಕರ್ಯ ಇರುವ ವಿದ್ಯಾಸಂಸ್ಥೆಯಲ್ಲಿ ಅಧ್ಯಯನ ಕೇಂದ್ರ ತೆರೆಯಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮುಕ್ತ ವಿವಿ ಕುಲಸಚಿವ ಪ್ರೊ. ಕೆ.ಎಲ್.ಎನ್.ಮೂರ್ತಿ, ಉದ್ದಿಮೆ ಸಂಸ್ಥೆ ಸಮನ್ವಯ ಘಟಕದ ಸಂಯೋಜಕಿ ಡಾ.ಎಚ್.ರಾಜೇಶ್ವರಿ, ಉದ್ಯೋಗ ಘಟಕದ ನಿರ್ದೇಶಕಿ ಡಾ.ಆರ್.ಎಚ್ .ಪವಿತ್ರಾ, ಪ್ರೊಫೈಲ್ ಇನ್ ಸಂಸ್ಥೆಯ ವೆಂಕಟೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.