ವಿರೋಧ ಪಕ್ಷಗಳ ವಾಚ್‌ಡಾಗ್‌ಗಳಾಗಿರುವ ಮಾಧ್ಯಮಗಳು
Team Udayavani, Apr 28, 2017, 12:38 PM IST
ಮೈಸೂರು: ಆಳುವವರ ವೈಫಲ್ಯಗಳನ್ನು ಹುಡುಕಿ ಜನತೆಯ ಮುಂದಿಡುವ ಕಾವಲು ನಾಯಿ (ವಾಚ್‌ಡಾಗ್ಸ್) ಗಳಾಗಬೇಕಿದ್ದ ಮಾಧ್ಯಮಗಳಿಂದು ವಿರೋಧ ಪಕ್ಷದ ತಪ್ಪುಗಳನ್ನೇ ಎತ್ತಿತೋರಿಸುತ್ತಿವೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಜಾಗೃತ ರಾಗಬೇಕು ಎಂದು ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ ಸಮಿತಿಯ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಪಾಳ್ಯ ಸುರೇಶ್ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿ, 2010ರ ಅಣ್ಣಾ ಹಜಾರೆಯ ಚಳವಳಿ ನಂತರ ಎಲ್ಲಾ ಮಾಧ್ಯಮಗಳೂ ಕಾಂಗ್ರೆಸ್ ವಿರುದ್ಧವೇ ಮಾತನಾಡುತ್ತಿವೆ. ಕಾಂಗ್ರೆಸ್ ಪಕ್ಷ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಟೀಕೆ ಮಾಡುವುದೇ ಕೆಲಸವಾಗಿದೆ ಎಂದರು.
ಕೇಂದ್ರದಲ್ಲಿ ನರೇಂದ್ರಮೋದಿ ಅವರ ಸರ್ಕಾರ ಬಂದು ಮೂರು ವರ್ಷವಾಯಿತು. ಆ ಸರ್ಕಾರದ ವೈಫಲ್ಯಗಳನ್ನು ಹುಡುಕುವ ಬದಲಿಗೆ, ರಾಹುಲ್ ಗಾಂಧಿ ಎಲ್ಲಿ ಹೋದರು, ಸಂಸತ್‌ನಲ್ಲಿ ರಾಹುಲ್ ಏನು ಮಾಡುತ್ತಾರೆ ಎಂಬುದನ್ನಷ್ಟೇ ಮಾಡುತ್ತಿವೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಜಾಗೃತರಾಗಿ ನಮ್ಮ ಪಕ್ಷದ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಬೇಕಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದ್ದ ಪ್ರಣಾಳಿಕೆಯ ಭರವಸೆಗಳ ಪೈಕಿ ಕಳೆದ ನಾಲ್ಕು ವರ್ಷಗಳಲ್ಲಿ ಶೇ.85ರಷ್ಟು ಭರವಸೆಗಳನ್ನು ಈಡೇರಿಸಿದೆ. ಆದರೆ, ಮೋದಿ ಸರ್ಕಾರ ಬಂದು ಮೂರು ವರ್ಷ ವಾದರೂ ಪ್ರಣಾಳಿಕೆಯ ಶೇ.5ರಷ್ಟೂ ಭರವಸೆ ಈಡೇರಿಲ್ಲ. ಬದಲಿಗೆ ವಾಲ್ ಪೋಸ್ಟರ್ ಬದಲಾಯಿಸಿದಂತೆ ದಿನಕ್ಕೊಂದು ಹೊಸ ವಿಚಾರ ಹೇಳುತ್ತಾ ಹೊರಟಿದ್ದಾರೆ ಎಂದು ಟೀಕಿಸಿದರು.
ಯಡಿಯೂರಪ್ಪ ಅವರ ಮಿಷನ್ 150 ಹೇಗೆ ಸಾಧ್ಯ ಎಂದು ಬಿಜೆಪಿ ಹೈಕಮಾಂಡ್ ವರದಿ ಕೇಳಿದ್ದು, ಅದೀಗ ಮಿಷನ್ 50 ಆಗಿದೆ. ಹೀಗಾಗಿ ಮುಂದೆ ಯಡಿಯೂರಪ್ಪ ಅವರು ವಿರೋಧಪಕ್ಷದ ನಾಯಕರಾಗಬೇಕಾಗುತ್ತದೆ ಎಂದು ಲೇವಡಿ ಮಾಡಿದರು.
ಸಂಸದ ಆರ್. ಧ್ರುವನಾರಾಯಣ್ ಮಾತನಾಡಿ, ಪಕ್ಷದ ಮುಖಂಡರು, ಕಾರ್ಯ ಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ನಮ್ಮ ಪರವಾದ ಫಲಿತಾಂಶ ಬಂದೇ ಬರುತ್ತದೆ ಎಂಬುದಕ್ಕೆ ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಗಳ ಫಲಿತಾಂಶವೇ ಸಾಕ್ಷಿ. ಸಂಘಟಿತ ಪ್ರಯತ್ನದ ಫಲವಾಗಿ ಈ ಉಪ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು. ಜತೆಗೆ ಅಭ್ಯರ್ಥಿ ಆಯ್ಕೆ ಕೂಡ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು ಎಂದರು.
ಕಾಂಗ್ರೆಸ್‌ನಲ್ಲಿ ಸಾಕಷ್ಟು ವಿಭಾಗಗಳಿವೆ. ಕಷ್ಟಪಟ್ಟು ಕೆಲಸ ಮಾಡಿದರೆ ಪಕ್ಷದ ಸಂಘಟನೆ ಸಾಧ್ಯ. ಪಕ್ಷಕ್ಕಿಂತ ನಾವ್ಯಾರೂ ದೊಡ್ಡವರಲ್ಲ. ಪಕ್ಷ ಕಟ್ಟಿದರೆ ಅವಕಾಶಗಳು ಸಿಕ್ಕೇ ಸಿಗುತ್ತವೆ ಎಂದು ಹೇಳಿದರು. ವಿಧಾನಪರಿಷತ್ ಸದಸ್ಯ ಆರ್. ಧರ್ಮಸೇನ, ರಾಜ್ಯ ಕಾಂಗ್ರೆಸ್ ಕಾನೂನು ಮತ್ತು ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಧನಂಜಯ, ಕರ್ನಾಟಕ ಬಾರ್ ಕೌನ್ಸಿಲ್ ಅಧ್ಯಕ್ಷ ಸಿ.ಎಂ. ಜಗದೀಶ್, ಮುಖಂಡರಾದ ಮಂಜುಳಾ ಮಾನಸ, ಕವೀಶ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ.ಜೆ.ವಿಜಯಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ
Network Problem: ಇಲ್ಲಿ ಟವರ್ ಇದೆ, ಆದರೆ ನೆಟ್ವರ್ಕ್ ಸಿಗಲ್ಲ!
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.