ಸಭೆಯಲ್ಲಿ ದಸಂಸದಿಂದ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ತರಾಟೆ

Team Udayavani, Oct 25, 2022, 4:16 PM IST

ಸಭೆಯಲ್ಲಿ ದಸಂಸದಿಂದ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ತರಾಟೆ

ತಿ.ನರಸೀಪುರ: ಅಬಕಾರಿ ಇಲಾಖೆ ಮೇಲೆ ದಸಂಸ ಮುಖಂಡರಿಂದ ಪ್ರಶ್ನೆಗಳ ಸುರಿಮಳೆ, ಪ್ರಶ್ನೆಗಳಿಗೆ ಉತ್ತರ ನೀಡಲಾಗದೆ ಅಬಕಾರಿ ಉಪ ನೀರಿಕ್ಷಕ ಎಚ್‌.ಜಿ.ಶ್ರೀನಿವಾಸ್‌ ತಬ್ಬಿಬ್ಟಾದ ಘಟನೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ನಡೆಯಿತು.

ಪಟ್ಟಣದ ತಾಪಂ ಸಭಾಂಗಣದಲ್ಲಿ ತಹಶೀ ಲ್ದಾರ್‌ ಸಿ.ಜಿ.ಗೀತಾ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅಬಕಾರಿ ಇಲಾಖೆಯ ಲೋಪಗಳ ಬಗ್ಗೆ ಒಬ್ಬರಾದ ಮೇಲೊಬ್ಬರಂತೆ ಪ್ರಶ್ನೆ ಕೇಳುವ ಮೂಲಕ ಅಧಿಕಾರಿಗೆ ಚಳಿ ಬಿಡಿಸಿದರು.

ದಸಂಸ ಜಿಲ್ಲಾ ಸಂಚಾಲಕ ಸೋಸಲೆ ಶಶಿಕಾಂತ್‌ ಮಾತನಾಡಿ, ನರಸೀಪುರ ಪಟ್ಟಣದಲ್ಲಿ ವೈನ್‌ಶಾಪ್‌ ಗಳು ಅಬಕಾರಿ ನಿಯಮ ಪಾಲನೆ ಮಾಡುತ್ತಿಲ್ಲ ತಿಬ್ಟಾದೇವಿ ರೆಸಾರ್ಟ್‌, ಶಿವಶಕ್ತಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಗಳು ಕೊಠಡಿಗಳಲ್ಲಿ ಮದ್ಯಪಾನಕ್ಕೆ ವ್ಯವಸ್ಥೆ ಮಾಡಬೇಕು ಆದರೆ ರಸ್ತೆ ಮತ್ತು ಅಕ್ಕಪಕ್ಕದ ಸ್ಥಳಗಳಲ್ಲಿ ಮದ್ಯಪಾನ ಮಾಡಿಸುತ್ತಿದ್ದಾರೆ. ತಿಬ್ಟಾದೇವಿ ರೆಸಾರ್ಟ್‌ ನಲ್ಲಿ ಸಂಜೆ 6 ಗಂಟೆ ಆಗುತ್ತಿದ್ದಂತೆ ರೆಸಾರ್ಟ್‌ ಅಕ್ಕ ಪಕ್ಕದ ಮಾಳದಲ್ಲಿ ಹೆದ್ದಾರಿ ಅಂಚಿನಲ್ಲಿ ಮದ್ಯಾಪಾನ ಮಾಡುವುದನ್ನು ನಿತ್ಯ ಕಾಣಬಹುದು ಬೇಕಿದ್ದರೆ ಅಧಿಕಾರಿಗಳು ಪರಿಶೀಲನೆ ಮಾಡಬಹುದು ಎಂದರು.

ತಾಲೂಕಿನ ಅಬಕಾರಿ ಅಧಿಕಾರಿ ಯಾವುದೇ ವೈನ್‌ಶಾಪ್‌ಗ್ಳ ಮೇಲೆ ನಿಯಮ ಏರಿ ಸನ್ನದ್ದುರಾರ ಮೇಲೆ ಕ್ರಮವಾಗಿರುವ ಬಗ್ಗೆ ನಿರ್ದೇಶನವಿಲ್ಲ ಇವರು ಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ. ಅಕ್ರಮ ಮದ್ಯ ಮಾರಾಟ ಮತ್ತು ಮದ್ಯಪಾನದ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ. ಹಾಗಾಗಿ ಮೊದಲು ಅಬಕಾರಿ ಇಲಖೆ ಅಧಿಕಾರಿಗಳ ಮೇಲೆ ಕ್ರಮವಾಗಬೇಕು ಎಂದು ಒತ್ತಾಯಿಸಿದರು.

ದಸಂಸ ಮುಖಂಡ ಸೋಸಲೆ ರಾಜಶೇಖರ್‌ ಮಾತನಾಡಿ, ತಲಕಾಡು ಮುಖ್ಯ ರಸ್ತೆಯ ತೋಟಗೇರಿ ಮಾರಮ್ಮನ ದೇವಸ್ಥಾನದ ಸನಿಹದಲ್ಲಿ ತೆರದಿರುವ ಎಂಎಸ್‌ಐಎಲ್ ವೈನ್‌ ಶಾಪ್‌ ನಿಯಮಬಾಹಿರವಾಗಿ ತೆರೆದಿದೆ ಪದವಿ ಮತ್ತು ಪದವಿ ಪೂರ್ವ ಕಾಲೇಜು, ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯ, ಕಸಬಾ ರೈತ ಸಂಪರ್ಕ ಕೇಂದ್ರ, ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಉದ್ಘಾಟನೆ ಹಂತದಲ್ಲಿರುವ ಲೋಕೋಪ ಯೋಗಿ ಇಲಾಖೆ ಮತ್ತು ಅತಿಥಿ ಗೃಹ ಇಷ್ಟಲ್ಲದೆ ದೇವಸ್ಥಾನಗಳು ಸಹ ಇದ್ದರು ಸಹ ಸನಿಹದಲ್ಲೇ ಎಂಎಸ್‌ಐಎಲ್‌ ಬಾರ್‌ ತೆರೆದಿರುವುದು ನಿಯಮ ಬಾಹಿರವಲ್ಲವೇ ಎಂದು ಪ್ರಶ್ನೆ ಮಾಡಿದರು.

ಪುರಸಭೆ ನಾಮ ನಿರ್ದೇಶಿತ ಸದಸ್ಯ ಗಣೇಶ್‌ ಮಾತನಾಡಿ, ಪಟ್ಟಣದ ಭ ಗವಾನ್‌ ಚಿತ್ರ ಮಂದಿರದ ಬಳಿ ಇರುವ ಅನಂತು ಬಾರ್‌ ಮಾಲೀಕರು ಸೇರಿದಂತೆ ಬಹುತೇಕ ಬಾರ್‌ನವರು ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಅದರಲ್ಲೂ ಜನ ನಿಬಿಡ ಸ್ಥಳವಾದ ಭಗವಾನ್‌ ಚಿತ್ರಮಂದಿರದ ಬಳಿ ಇರುವ ವೈನ್‌ಶಾಪ್‌ನವರು ಸ್ಥಳದಲ್ಲೇ ಮದ್ಯಪಾನ ಮಾಡಿಸುತ್ತಿದ್ದಾರೆ. ಇದರಿಂದ ಈ ರಸ್ತೆಯಲ್ಲಿ ಮಹಿಳೆಯರು ಮಕ್ಕಳು, ವಿದ್ಯಾರ್ಥಿಗಳು ಓಡಾಡಬೇಕಾದರೆ ಜೀವ ಮತ್ತು ಮಾನ ಕೈಯಲ್ಲಿಡಿದು ಓಡಾಡ ಬೇಕಾಗಿದೆ ಅಬಕಾರಿ ಅಧಿಕಾರಿ ಕಣ್ಣಿದ್ದು ಕುರುಡುತನ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಸಭೆಯಲ್ಲಿ ಸ್ಮಶಾನ ಒತ್ತುವರಿ, ಬಂಗಾರಪ್ಪ ಬಡಾವಣೆ ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ತಹಶೀಲ್ದಾರ್‌ ಸಿ.ಜಿ.ಗೀತಾ, ತಾಪಂ ಇಒ ಸಿ.ಕೃಷ್ಣ, ಸಮಾಜ ಕಲ್ಯಾಣ ಅಧಿಕಾರಿ ರಾಮೇಗೌಡ, ಪೋಲೀಸ್‌ ಇನ್ಸ್‌ಪೆಕ್ಟರ್‌ ಕೃಷ್ಣಪ್ಪ, ಉಪ ತಹಶೀಲ್ದಾರ್‌ ಜೆ.ಕೆ.ಪ್ರಭುರಾಜ್, ಪುರಸಭೆ ಮುಖ್ಯಾಧಿಕಾರಿ ಬಸವರಾಜು, ಜಿಪಂ ಎಇಇ ಲಕ್ಷ್ಮಣ್‌ರಾವ್‌, ತಾಲೂಕು ವೈದ್ಯಾಧಿಕಾರಿ ರವಿಕುಮಾರ್‌, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ಸಂಘದ ಅಧ್ಯಕ್ಷ ಮಹದೇವಯ್ಯ, ಮುಖಂಡರಾದ ತುಂಬಲ ಮಂಜುನಾಥ್‌, ಆಲಗೂಡು ಶಿವಕುಮಾರ್‌, ಶಿವಣ್ಣ, ಬಡ್ಡು ಶಿವಕುಮಾರ್‌, ಮಿಥುನ್‌, ಉಮಾಮಹದೇವ, ಬನ್ನೂರು ಚಿಕ್ಕಣ್ಣ, ಆಲಗೂಡು ನಾಗರಾಜು, ಗದ್ದೆ ಮೋಳೆ ಹೊನ್ನನಾಯಕ, ಘಟಕ ಮಹದೇವ್‌, ಕೇತುಪುರ ಶಿವಕುಮಾರ್‌ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.