![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 11, 2021, 3:31 PM IST
ಮೈಸೂರು: ಯುಗಾದಿ ಹಬ್ಬದ ಅಂಗವಾಗಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯಿಂದ ಮನೆ ಮನೆಗೆ ಒಂಟಿಕೊಪ್ಪಲ್ ಪಂಚಾಂಗ ಅಭಿಯಾನ ನಡೆಸಲಾಯಿತು.
ನಗರದ ರಾಮಾನುಜ ರಸ್ತೆಯಲ್ಲಿರುವ ರಾಜಾರಾಮ್ ಅಗ್ರಹಾರದಲ್ಲಿ ಮೈಸೂರು ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷಡಿ.ಟಿ. ಪ್ರಕಾಶ್ ಮನೆ ಮನೆಗಳಿಗೆ ಕ್ಯಾಲೆಂಡರ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಿ, ಸೌರಮಂಡಲದ ಆಧಾರಿತದಮೇಲೆ ಭೂಮಿಯಲ್ಲಿ ನಡೆಯುವ ಬದಲಾವಣೆಯನ್ನು ತಿಳಿಸುವುದೇ ಪಂಚಾಂಗ, ಯುಗಾದಿ ವರ್ಷಾಚರಣೆ ಬೇವು-ಬೆಲ್ಲವು ಕಹಿ, ಸಿಹಿಯ ಸಂಕೇತ. ಸಮ ಬಾಳಿನ ಜೀವನವನ್ನು ಸರಿಯಾದ ಸಂದರ್ಭದಲ್ಲಿ ನಡೆಸಬೇಕಾದರೆ ಪಂಚಾಂಗದ ನಿರ್ಧಾರ ಮುಖ್ಯವಾಗುತ್ತದೆ. ಸಂವತ್ಸರ ಮಾಸ, ತಿಥಿ, ನಕ್ಷತ್ರ, ರಾಶಿಯ ಕಾಲದ ಘಳಿಗೆಯ ಮಾಹಿತಿ ಮೊದಲು ತಿಳಿದುಕೊಳ್ಳಬಹುದು ಎಂದು ತಿಳಿಸಿದರು.
ನಂತರ ಕಾಂಗ್ರೆಸ್ ಯುವ ಮುಖಂಡ ಎನ್.ಎಂ. ನವೀನ್ ಕುಮಾರ್ ಮಾತನಾಡಿ, ಒಂಟಿಕೊಪ್ಪಲ್ ಪಂಚಾಂಗವೂ ದೇಶ, ವಿದೇಶದಲ್ಲಿ ಜನಪ್ರಿಯವಾಗಿರುವುದು ಮೈಸೂರಿನಹಿರಿಮೆಯನ್ನು ಹೆಚ್ಚಿಸಿದೆ. ಧಾರ್ಮಿಕ ಸಂಪ್ರಾದಯವನ್ನು ಪರಿಪಾಲಿಸುವವರು ಪಂಚಾಂಗದ ಮಾಹಿತಿಯನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಕೆ.ರಘುರಾಂ ವಾಜಪೇಯಿ ಮಾತನಾಡಿ, ಸಮಾಜದಲ್ಲಿ ಯಾವುದೇಶುಭಕಾರ್ಯಗಳ ದಿನಾಂಕಗಳು ನಿಗದಿಯಾಗುವುದೇಪಂಚಾಂಗದ ಆಧಾರದ ಮೇಲೆ. ಮಳೆ, ಬೇಸಿಗೆ ಹಾಗೂಚಳಿಗಾಲದ ಸ್ಥಿತಿಗತಿಯ ಸೂಕ್ಷ್ಮವನ್ನು ಮೊದಲೇ ತಿಳಿಯುವ ಶಕ್ತಿ ಪಂಚಾಂಗಕ್ಕಿದೆ ಎಂದರು.
ಶುಭ, ಸಮಾರಂಭದ ಘಳಿಗೆ ಮುಹೂರ್ತ ತಿಳಿಸುವ ಒಂಟಿಕೊಪ್ಪಲ್ ಪಂಚಾಂಗಕ್ಕಾಗಿ ನೂರಾರು ವರ್ಷಗಳಿಂದ ಶ್ರಮಿಸುತ್ತಿರುವ ರಾಮಕೃಷ್ಣ ಶಾಸ್ತ್ರಿ ಹಾಗೂ ಅವರ ಪುತ್ರ ಕುಮಾರ್‌ಶಾಸ್ತ್ರಿ ಅವರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಿದೆ ಎಂದರು.
ಈ ವೇಳೆ ನಗರ ಪಾಲಿಕೆ ಸದಸ್ಯ ಮಾ.ವಿ. ರಾಮ್ ಪ್ರಸಾದ್, ಎಂ.ಸಿ. ರಮೇಶ್, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ಎಂ.ಆರ್. ಬಾಲಕೃಷ್ಣ , ಬ್ರಾಹ್ಮಣ ಯುವ ವೇದಿಕೆ ಪ್ರಧಾನಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ವಿನಯ್ ಕಣಗಾಲ್ ಮತ್ತಿತರರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.