ಯುವಜನತೆ ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ


Team Udayavani, Mar 20, 2018, 12:42 PM IST

m4-yuvajanate.jpg

ಮೈಸೂರು: ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಯುವಜನತೆ ಮತದಾನದಿಂದ ದೂರ ಉಳಿಯದೆ, ಚುನಾವಣಾ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ್‌ ಸಿಇಒ ಪಿ.ಶಿವಶಂಕರ್‌ ಹೇಳಿದರು.

ಜಿಲ್ಲೆಯ ಚುನಾವಣಾ ಸಾಕ್ಷರತಾ ಕ್ಲಬ್‌ನಿಂದ ನಗರದ ಬನುಮಯ್ಯ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಚುನಾವಣಾ ನೋಂದಣಿ ಮತ್ತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭಾರತದಲ್ಲಿನ ಚುನಾವಣಾ ವ್ಯವಸ್ಥೆ ವಿಶ್ವದ ಗಮನ ಸೆಳೆದಿದ್ದರೂ ದೇಶದ ಯುವಜನತೆ ಚುನಾವಣೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೆ, ನಿರಾಸಕ್ತಿ ತೋರುತ್ತಿದ್ದಾರೆ. ಆದರೆ, ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಯುವಜನತೆ ಚುನಾವಣಾ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಪಾತ್ರವನ್ನು ನಿರ್ವಹಿಸಬೇಕಿದೆ ಎಂದು ಹೇಳಿದರು.

ಅಪಸ್ವರ ಸರಿಯಲ್ಲ: ದೇಶದಲ್ಲಿ ಪ್ರಸ್ತುತ ನಡೆಯುವ ಚುನಾವಣೆಗಳಿಗೆ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಮತಯಂತ್ರಗಳ ವಿರುದ್ಧ ಅಪಸ್ವರ ಕೇಳಿ ಬರುತ್ತಿದೆ. ವಿದ್ಯುನ್ಮಾನ ಮತಯಂತ್ರದಲ್ಲಿ ಮತದಾನ ಮಾಡಿದರೆ ಒಂದೇ ಅಭ್ಯರ್ಥಿಗೆ ಮತ ಚಲಾವಣೆಯಾಗಲಿದೆ ಎಂಬ ಆರೋಪವಿದೆ.

ಆದರೆ, ಇಂತಹ ಆರೋಪಗಳು ಸುಳ್ಳಾಗಿದ್ದು, ಯಾವುದೇ ಕಾರಣಕ್ಕೂ ವಿದ್ಯುನ್ಮಾನ ಮತಯಂತ್ರವನ್ನು ಹ್ಯಾಕ್‌ ಮಾಡಲು ಸಾಧ್ಯವಿಲ್ಲ. ಅಲ್ಲದೆ ಇವಿಎಂ ಯಂತ್ರವನ್ನು ಅಳವಡಿಸುವ ಮುನ್ನ ಎಲ್ಲಾ ಪಕ್ಷದವರನ್ನು ಆಹ್ವಾನಿಸಿ, ಅಭ್ಯರ್ಥಿಗಳ ಹೆಸರು, ಚಿಹ್ನೆಯನ್ನು ಅಪ್‌ಲೋಡ್‌ ಮಾಡಿ ಪರೀûಾರ್ಥ ಪ್ರಯೋಗವನ್ನು ಮಾಡಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮತಯಂತ್ರದ ಮೇಲೆ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ ಎಂದರು.

ಇದೇ ವೇಳೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕೃಷ್ಣ ಅವರು ವಿದ್ಯಾರ್ಥಿಗಳಿಗೆ ಪ್ರತಿಜಾn ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ವಿ.ಬಿ.ಜಯದೇವ, ಕಾಲೇಜು ಶಿಕ್ಷಣ ಇಲಾಖೆ ವಿಶೇಷಾಧಿಕಾರಿ ಡಾ.ಎಚ್‌.ಎನ್‌. ಪ್ರಮೀಳಾ, ಉಪನ್ಯಾಸಕಿ ಎಚ್‌.ಆರ್‌.ನಾಗರತ್ನ ಇನ್ನಿತರರು ಹಾಜರಿದ್ದರು.

ನಿರ್ಭೀತಿಯಿಂದ ಮತಹಾಕಿ: 18 ವರ್ಷ ತುಂಬಿರುವವರು ಸಂಬಂಧಪಟ್ಟ ಕಚೇರಿಗಳಿಗೆ ತೆರಳಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಬೇಕಿದೆ. ಮತದಾನ ಮಾಡುವ ಸಂದರ್ಭದಲ್ಲಿ ಕಣದಲ್ಲಿರುವ ಯಾವುದೇ ಪಕ್ಷಕ್ಕೆ ಅಥವಾ ವ್ಯಕ್ತಿಗೆ ಮತಹಾಕಲು ಆಸಕ್ತಿ ಇಲ್ಲದಿದ್ದರೆ ನೋಟಾಕ್ಕೆ ಮತ ಹಾಕಬಹುದು. ಈ ಬಾರಿ ಮತದಾನಕ್ಕೆ 1 ಗಂಟೆ ಸಮಯ ಹೆಚ್ಚುವರಿ ನೀಡುವ ಸಾಧ್ಯತೆ ಇದ್ದು, ಹೀಗಾಗಿ ನಿರ್ಭೀತಿಯಿಂದ ಮತದಾನ ಮಾಡಬೇಕಿದೆ ಎಂದು ಜಿಪಂ ಸಿಇಒ ಪಿ.ಶಿವಶಂಕರ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.