ಪಕ್ಷದ ಬಾಗಿಲು ತೆರೆದಿದೆ: ಹೋಗೋರು ಹೋಗಬಹುದು: ಕುಮಾರಸ್ವಾಮಿ
Team Udayavani, Mar 3, 2018, 1:41 PM IST
ಮೈಸೂರು: ಜೆಡಿಎಸ್ ಪಕ್ಷ ಯಾರೊಬ್ಬರ ಮನೆಯ ಆಸ್ತಿಯಲ್ಲ, ಇಷ್ಟವಿದ್ದವರು ಇರಬಹುದು, ಹೋಗುವವರು ಹೋಗಬಹುದು ಎಂದು, ಪಕ್ಷದಲ್ಲಿನ ಬಂಡಾಯ ಮುಖಂಡರ ವಿರುದ್ಧ ಜೆಡಿಎಸ್ ರಾಜಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಬಾ ಚುನಾವಣೆಗೆ ವೈಯಕ್ತಿಕ ವ್ಯಾಮೋಹ ಇಟ್ಟುಕೊಂಡು ಯಾರಿಗೂ ಟಿಕೆಟ್ ನೀಡಿಲ್ಲ.
ಬದಲಿಗೆ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಉದ್ದೇಶದಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಎಂಎಲ್‌ಸಿ ಸಂದೇಶ್ ನಾಗರಾಜ್ ಕುಟುಂಬದವರು ಹಿಂದೊಂದು, ಮುಂದೊಂದು ಮಾತನಾಡುವುದನ್ನು ಬಿಡಬೇಕಿದೆ. ಪಕ್ಷ ಅವರಿಗೆ ಎಲ್ಲವನ್ನೂ ಕೊಟ್ಟಿದ್ದು, ಅವರಿಂದ ಪಕ್ಷಕ್ಕೆ ಏನಾಗಿದೆ ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದರು.
ಜೆಡಿಎಸ್ ಪಕ್ಷ ಯಾರೊಬ್ಬರ ಮನೆಯ ಆಸ್ತಿಯಲ್ಲ. ನಮ್ಮ ಪಕ್ಷದ ಬಾಗಿಲು ಸದಾ ತೆರೆದಿದ್ದು, ಒಳಗಿನವರು ಹೊರ ಹೋಗಬಹುದು, ಹೊರಗಿನವರು ಒಳಗೆ ಬರಬಹುದು ಎಂದು ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂಎಲ್‌ಸಿ ಸಂದೇಶ್ ನಾಗರಾಜ್ ಹೇಳಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪರ್ಸಂಟೇಜ್ ನಿಸ್ಸೀಮರು:
ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿರುವ ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಪರ್ಸೆಂಟೇಜ್‌ನಲ್ಲಿ ನಿಸ್ಸೀಮರಾಗಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ನನ್ನ ಆಡಳಿತದಲ್ಲಿದ್ದ ಪರ್ಸಂಟೇಜ್ ಎಷ್ಟು, ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪರ್ಸಂಟೇಜ್ ಇದೆ ಎಂಬುದು ಎಲ್ಲಾ ಗುತ್ತಿಗೆದಾರರಿಗೆ ತಿಳಿದಿದೆ.
ಸಚಿವ ರಮೇಶ್‌ಕುಮಾರ್ ಸರ್ಕಾರದ ¸Åಷ್ಟಾಚಾರವನ್ನು ವಿಧಾನಸಬೆಯಲ್ಲಿ ಸಮರ್ಥಿಸಿಕೊಳ್ಳುತ್ತಾರೆ. ಇಂತಹ ಸರ್ಕಾರ ಬೇಕಾ? ಪರ್ಸಂಟೇಜ್ ರಹಿತ ಸರ್ಕಾರಬೇಕಾ? ಎಂಬುದನ್ನು ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ತೀರ್ಮಾನಿಸುತ್ತಾರೆ ಎಂದು ಹೇಳಿದರು.
ಸಿದ್ದು ಕೊಡುಗೆ ಏನಿಲ್ಲ:
ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆಯ ಬಗ್ಗೆ ಮಾತನಾಡಿ, ಬೆಂಗಳೂರು ನಗರವನ್ನು ಮೊದಲು ಹಾಳುಮಾಡಿದ್ದು ಬಿಜೆಪಿ. ನಂತರ ಅದಕ್ಕೆ ಸಿದ್ದರಾಮಯ್ಯ ಕೊಡುಗೆ ನೀಡಿದ್ದಾರೆ. ಕಳೆದ ಐದು ವರ್ಷದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ರಾಜ್ಯ ಸರ್ಕಾರ ಏನನ್ನು ನೀಡಿಲ್ಲ.
ಬೆಂಗಳೂರು, ಮೈಸೂರು ಏನಾದರೂ ಅಭಿವೃದ್ಧಿಯಾಗಿದ್ದರೆ ಅದು ನನ್ನ ಅವಧಿಯಲ್ಲಿ. ಹೀಗಿದ್ದರೂ ರಾಜ್ಯ ಸರ್ಕಾರ ಅಭಿವೃದ್ಧಿ ಹೆಸರಿನಲ್ಲಿ ಅವರ ಜೇಬು ತುಂಬಿಸಿಕೊಳ್ಳುತ್ತಿದ್ದು, ಮೈಸೂರಿನ ಅಭಿವೃದ್ಧಿಗೂ ಸಿದ್ದರಾಮಯ್ಯ ಸರ್ಕಾರ ಯಾವುದೇ ಕೊಡುಗೆ ನೀಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಬಹುಮತದ ಸರ್ಕಾರಕ್ಕೆ ಒತ್ತು: ಮುಂದಿನ ಚುನಾವಣೆಯಲ್ಲಿ ನಾನು ಮೈತ್ರಿ ಸರ್ಕಾರಕ್ಕಾಗಿ ಹೋರಾಡುತ್ತಿಲ್ಲ, ಬಹುಮತದ ಸರ್ಕಾರಕ್ಕೆ ಹೋರಾಡುತ್ತಿದ್ದೇನೆ. ಹೀಗಾಗಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ.
ಓವೈಸಿ ಪಕ್ಷದೊಂದಿಗೂ ಮೈತ್ರಿಯ ಬಗ್ಗೆ ಯಾವುದೇ ಮಾತುಕತೆ ನಡೆಸಿಲ್ಲ. ಆದರೆ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾರೊಂದಿಗೆ ಬೇಕಾದರೂ ಮಾತುಕತೆ ನಡೆಸುತ್ತೇನೆ. ರಾಜ್ಯದಲ್ಲಿ ಮುಂದೆ ಅಧಿಕಾರ ಬೇಕಾದರೆ ಹಾಗೂ ತಮ್ಮ ಹಗರಣಗಳನ್ನು ಮುಚ್ಚಿಕೊಳ್ಳಲು ಜೆಡಿಎಸ್ ಕಾಲು ಹಿಡಿಯಬೇಕಾಗುತ್ತದೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.