ಜೀವನದ ಪರೀಕ್ಷೆಯಲ್ಲಿ ಪಾಸಾಗುವುದು ಮುಖ್ಯ
Team Udayavani, May 20, 2017, 12:45 PM IST
ಮೈಸೂರು: ಜೀವನದಲ್ಲಿ ಎಸ್ಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದೇ ಮುಖ್ಯವಲ್ಲ. ಅದರಾಚೆಗೂ ಜೀವನದ ಪರೀಕ್ಷೆಗಳಿವೆ ಎಂದು ಕರ್ನಾಟಕ ಪೊಲೀಸ್ ಅಕಾಡೆಮಿ ಉಪನಿರ್ದೇಶಕಿ ಧರಣಿದೇವಿ ಮಾಲಗತ್ತಿ ಹೇಳಿದರು.
ಅಖೀಲ ಭಾರತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಹಿತರಕ್ಷಣಾ ವೇದಿಕೆ ಶುಕ್ರವಾರ ಏರ್ಪಡಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ಬೋಧನಾ ತರಗತಿಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಸ್ಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗುವುದೇ ಜೀವನದಲ್ಲಿ ಮುಖ್ಯ ಎಂದು ಭಾವಿಸಬಾರದು. ಜೀವನದ ಪರೀಕ್ಷೆಗಳಲ್ಲಿ ಪಾಸಾಗುವುದೇ ಮುಖ್ಯ ಹಾಗೂ ಪರಮೋತ್ಛ. ಹದಿಹರೆಯದ ಮನಸ್ಸನ್ನು ನಿಯಂತಣದಲ್ಲಿರಿಸಿಕೊಂಡು ಓದಿನ ಕಡೆಗೆ ಗಮನಹರಿಸಿದರೆ ಆಗದಿರುವ ಕೆಲಸವೆನಿಲ್ಲಾ ಮನಸ್ಸಿನಿಂದ ಮಾಡಬಹುದಾದ ಕೆಲಸಗಳು ಯಾವಾಗಲೂ ದಾರಿದೀಪವಾಗಲಿದೆ ಎಂದರು.
ಏಕಾಗ್ರತೆ ಇಲ್ಲದಿರುವುದು ಕೂಡ ಅನುತ್ತೀರ್ಣರಾಗಲು ಪ್ರಮುಖ ಕಾರಣಗಳಲ್ಲಿ ಒಂದು. ಪಿಯುಸಿ ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಬೇರೆಡೆ ಹರಿಬಿಡದೆ ಶ್ರಮಪಟ್ಟು ಓದಬೇಕು. ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಎದೆಗುಂದುವ ಅವಶ್ಯಕತೆ ಇಲ್ಲ. ನಿಮಗಾಗಿಯೇ ಆಯೋಜಿಸಿರುವ ವಿಶೇಷ ತರಗತಿಗಳ ಪ್ರಯೋಜನ ಪಡೆದುಕೊಂಡು ಉತ್ತೀರ್ಣರಾಗಿ ಉನ್ನತ ಶಿಕ್ಷಣ ಪಡೆಯುವ ಮೂಲಕ ಸಾಧನೆ ಮಾಡಿ ಎಂದು ಸಲಹೆ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಪ್ರಕಾಶ್, ಸಂಘದ ರಾಜಾÂಧ್ಯಕ್ಷ ಕಾಟ್ನೂರು ಶಿವೇಗೌಡ, ಕಾರ್ಯದರ್ಶಿ ಎಂ.ಎಂ.ಮಹದೇವ, ಪ್ರಾಂಶುಪಾಲರಾದ ಆರ್.ವೈದ್ಯರಾಣಿ ಇನ್ನಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.