ಬೆಂಕಿ ಹಚ್ಚುವವರನ್ನು ಜನರೇ ಅರೆಸ್ಟ್ ಮಾಡಿ ಮನೆಗೆ ಕಳಿಸ್ತಾರೆ
Team Udayavani, Jan 13, 2018, 6:00 AM IST
ಶ್ರೀರಂಗಪಟ್ಟಣ/ಮೈಸೂರು: ಕೋಮುಭಾವನೆ ಬಿತ್ತಿ, ಸಮಾಜದಲ್ಲಿ ಬೆಂಕಿ ಹಚ್ಚುವ ಬಿಜೆಪಿಯವರನ್ನು ಅರೆಸ್ಟ್ ಮಾಡಲು ಪೊಲೀಸರು ಬೇಕಿಲ್ಲ. ಮುಂದಿನ ಚುನಾವಣೆಯಲ್ಲಿ ಜನರೇ ಅರೆಸ್ಟ್ ಮಾಡಿ ಮನೆಗೆ ಕಳುಹಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಶುಕ್ರವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಆರೆಸ್ಸೆಸ್, ಬಿಜೆಪಿ, ಬಜರಂಗದಳದಲ್ಲಿರುವವರು ಉಗ್ರಗಾಮಿಗಳು ಎಂಬ ತಮ್ಮ ಹೇಳಿಕೆಗೆ ಪ್ರತಿಯಾಗಿ ಬಿಜೆಪಿ ಐಟಿ ಪ್ರಕೋಷ್ಠ ಆರಂಭಿಸಿರುವ ಅರೆಸ್ಟ್ ಮಿ ಸಿದ್ದರಾಮಯ್ಯ ಅಭಿಯಾನ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಜನರ ಮನಸ್ಸಲ್ಲಿ ಕೋಮುಭಾವನೆ ಬಿತ್ತುವವರನ್ನು, ಸಮಾಜದಲ್ಲಿ ಬೆಂಕಿ ಹಚ್ಚುವವರನ್ನು ಜನರೇ ಅರೆಸ್ಟ್ ಮಾಡುತ್ತಾರೆ. ಪೊಲೀಸರು ಬಿಜೆಪಿಯವರನ್ನು ಬಂಧಿಸಬೇಕಾದ ಅಗತ್ಯವೇ ಇಲ್ಲ ಎಂದು ವ್ಯಂಗ್ಯವಾಡಿದರು.
ನಮ್ಮ ವಿರುದ್ಧ ಹೋರಾಡಿ ಸೋತಿರುವ ಅವರು, ಈಗ ಅಮಿತ್ ಶಾ, ಯೋಗಿ ಆದಿತ್ಯನಾಥ ಹಾಗೂ ಇತರರನ್ನು ಕರೆ ತಂದು ಗಿಮಿಕ್ ಮಾಡುತ್ತಿದ್ದಾರೆ. ಸಣ್ಣಪುಟ್ಟ ವಿಚಾರಗಳನ್ನೇ ದೊಡ್ಡದು ಮಾಡಿ ರಾಜಕೀಯ ಲಾಭ ಪಡೆಯುವ ಬಿಜೆಪಿಯವರ ತಂತ್ರ ಕರ್ನಾಟಕದಲ್ಲಿ ಸಫಲವಾಗದು. ಪ್ರಧಾನಿಯವರು ಕಾಂಗ್ರೆಸ್ ವೈಫಲ್ಯ ಹೇಳುವುದಕ್ಕೂ ಮುಂಚೆ ನಾನೇ ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರ ವೈಫಲ್ಯ ಹೇಳುತ್ತೇನೆ. ರಾಜ್ಯ ಸರ್ಕಾರದ ಸಾಧನೆ ಮುಂದಿಟ್ಟು ಬಿಜೆಪಿಯ ಅಮಿತ್ ಶಾ, ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರಂತಹ ನಾಯಕರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದರು.
ನನ್ನನ್ನು ನಂಬಿ ಬಂದವರನ್ನು ರಕ್ಷಿಸುವೆ:
ಬಳಿಕ, ಶ್ರೀರಂಗಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮತನಾಡಿ, “ಜೆಡಿಎಸ್‌ನೊಳಗಿನ ಒತ್ತಡ ತಾಳಲಾರದೆ ಏಳು ಜನ ಶಾಸಕರು ಮನಸ್ಸನ್ನು ಗಟ್ಟಿ ಮಾಡಿಕೊಂಡು ನನ್ನೊಂದಿಗೆ ಬಂದಿದ್ದಾರೆ. ನನ್ನೊಂದಿಗಿರುವ ಜೆಡಿಎಸ್ ಶಾಸಕರಿಗೆ ಸಂಪೂರ್ಣ ರಕ್ಷಣೆ ನೀಡುವೆ. ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿಸಿ ಪಕ್ಷ ಸೇರ್ಪಡೆಗೆ ಒಪ್ಪಿಸಿದ್ದೇನೆ. ಅವರೆಲ್ಲರೂ ಶೀಘ್ರ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಮತದಾರರು ಅವರನ್ನು ಆಶೀರ್ವದಿಸಬೇಕು’ ಎಂದು ಮನವಿ ಮಾಡಿದರು.
ಕಪ್ಪು ಬಾವುಟ ಪ್ರದರ್ಶಿಸಿದ ವ್ಯಕ್ತಿಯ ಬಂಧನ
ಶ್ರೀರಂಗಪಟ್ಟಣ: ಶ್ರೀರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಜನರ ಮಧ್ಯದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಕಪ್ಪುಬಾವುಟ ಪ್ರದರ್ಶಿಸಿದ. ತಕ್ಷಣವೇ ಪೊಲೀಸರು ಆತನನ್ನು ಬಂಧಿಸಿದರು. ಈ ಮಧ್ಯೆ, ಮಳವಳ್ಳಿಯಲ್ಲಿ ಮುಖ್ಯಮಂತ್ರಿ ಬರುತ್ತಿದ್ದಂತೆ ಕೈಯ್ಯಲ್ಲಿ ಮನವಿ ಪತ್ರ ಹಿಡಿದು ಪ್ರಾಂತ ಕೃಷಿ ಕೂಲಿಕಾರರ ಸಂಘದವರು ಅವರ ಭೇಟಿಗೆ ಮುಂದಾದರು. ಹೆಲಿಕಾಪ್ಟರ್‌ನಿಂದ ಇಳಿದ ಸಿದ್ದರಾಮಯ್ಯ, ಮನವಿ ಸ್ವೀಕರಿಸಲು ನಿರಾಕರಿಸಿ ಅಲ್ಲಿಂದ ಕಾರು ಹತ್ತಿ ನಿರ್ಗಮಿಸಿದರು. ಸಂಘದ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಚಾರ್ಜ್‌ಶೀಟ್ ನಮ್ಮಲ್ಲೂ ಇದೆ:
ಮಳವಳ್ಳಿಯಲ್ಲಿ ಮಾತನಾಡಿದ ಸಿಎಂ, ರಾಜಕೀಯ ಎದುರಾಳಿಗಳನ್ನು ಹೆದರಿಸಲು ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಛೂ ಬಿಟ್ಟಿರುವ ಕೇಂದ್ರ ಸರ್ಕಾರ, ನನ್ನ ಆಪ್ತರ ಮನೆಗಳ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಿ ಬೆದರಿಸುವ ತಂತ್ರಗಾರಿಕೆ ನಡೆಸುತ್ತಿದೆ. ಇದಕ್ಕೆಲ್ಲಾ ಹೆದರುವುದಿಲ್ಲ ಎಂದರು.
ಬಿಜೆಪಿಯವರಿಂದ ಕಾಂಗ್ರೆಸ್ ಚಾರ್ಜ್‌ಶೀಟ್ ಸಿದ್ಧತೆ ಮಾಡಿಕೊಳ್ಳುತ್ತಿರುವ ಬಗ್ಗೆ ಕೇಳಿದಾಗ, ನಮ್ಮಲ್ಲೂ ಕೇಂದ್ರ ಸರ್ಕಾರದ ಚಾರ್ಜ್‌ಶೀಟ್ ಇದೆ ಎಂದು ಚುಟುಕಾಗಿ ಉತ್ತರಿಸಿದರು.
ಜೆಡಿಎಸ್‌ಗಿಂತ ಹೆಚ್ಚು ಯಡಿಯೂರಪ್ಪ ಹತಾಶರಾಗಿದ್ದಾರೆ. ಏಕೆಂದರೆ, ಬಿಜೆಪಿಗೆ ಸ್ವಂತ ಶಕ್ತಿ ಮೇಲೆ ಚುನಾವಣೆಯಲ್ಲಿ ಗೆಲ್ಲಲಾಗದು ಎಂಬ ಸತ್ಯ ಅವರಿಗೆ ಮನವರಿಕೆಯಾಗಿದೆ. ಅದಕ್ಕಾಗಿ ಯಾವುದೇ ಪಕ್ಷಕ್ಕೂ ಬಹುಮತ ಬರದಿದ್ದರೆ, ಅಲ್ಲಿ ನಮ್ಮ ಆಟ ನಡೆಯಬಹುದೇನೋ ಎಂಬ ಲೆಕ್ಕಾಚಾರದಲ್ಲಿದ್ದಾರೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.