ಜನೌಷಧ ಮಳಿಗೆ: ಅನಂತಕುಮಾರ್ಗೆ ಪ್ರತಾಪ್ಸಿಂಹ ಕೃತಜ್ಞತೆ
Team Udayavani, Feb 2, 2018, 11:48 AM IST
ಮೈಸೂರು: ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯಡಿ ಮೈಸೂರಿನಲ್ಲಿ 28 ಜನೌಷಧಿ ಮಳಿಗೆಗೆ ಅವಕಾಶ ನೀಡಿದ ಕೇಂದ್ರ ಸಚಿವ ಅನಂತಕುಮಾರ್ರಿಗೆ ಸಂಸದ ಪ್ರತಾಪ್ ಸಿಂಹ ಕೃತಜ್ಞತೆ ಸಲ್ಲಿಸಿದ್ದಾರೆ.
ಭಾರತದ ಪ್ರತಿ ನಾಗರಿಕನಿಗೆ ಆರೋಗ್ಯ ರಕ್ಷಣೆಯ ಖರ್ಚನ್ನು ಕಡಿಮೆಗೊಳಿಸುವುದಕ್ಕಾಗಿ ಹಾಗೂ ಉತ್ತಮ ಗುಣಮಟ್ಟದ ಔಷಧಿಗಳು ಕಡಿಮೆ ದರದಲ್ಲಿ ಬಡವರಿಗೆ ದೊರೆಯುವಂತೆ ಮಾಡಲು ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದಡಿ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯಡಿ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಿ ಅತ್ಯಂತ ಕಡಿಮೆ ದರದಲ್ಲಿ ಔಷಧಿ ಮತ್ತು ಮಾತ್ರೆ ದೊರೆಯುವಂತೆ ಮಾಡಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಈ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ 28ಕಡೆಗಳಲ್ಲಿ ಹಾಗೂ ಮೈಸೂರು ನಗರದಲ್ಲಿ 16 ಕಡೆಗಳಲ್ಲಿ ಜನೌಷಧಿ ಮಳಿಗೆಗಳನ್ನು ಈಗಾಗಲೇ ತೆರೆಯಲಾಗಿದೆ. ಕರ್ನಾಟಕದ 240 ಸ್ಥಳಗಳಲ್ಲಿ ಜನೌಷಧಿ ಮಳಿಗೆಗಳನ್ನು ತೆರೆಯಲಾಗಿದೆ. ಈ ಮಳಿಗೆಗಳಲ್ಲಿ ಅತ್ಯಂತ ಕಡಿಮೆ ದರದಲ್ಲಿ ಔಷಧಿ ಮತ್ತು ಮಾತ್ರೆಗಳು ದೊರೆಯುತ್ತಿದ್ದು, ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ ಪಡೆಯುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.