ಸಂತ್ರಸ್ತರಿಗೆ ಶಾಶ್ವತ ಪರಿಹಾರ: ಸಿದ್ದು ಭರವಸೆ
Team Udayavani, Aug 19, 2018, 11:23 AM IST
ನಂಜನಗೂಡು: ಪ್ರವಾಹ ಪೀಡಿತರಿಗೆ ಶಾಶ್ವತ ಪರಿಹಾರ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ಸಂಜೆ ನಂಜನಗೂಡಿನ ನೆರೆ ಪೀಡಿತ ಶ್ರೀಕಂಠೇಶ್ವರನ ಸ್ನಾನಘಟ್ಟ, ತೋಪಿನ ಬೀದಿ, ರಾಷ್ಟ್ರೀಯ ಹೆದ್ದಾರಿ, ಕುರುಬಕೇರಿಗೆ ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ಗಿರಿಜಾ ಕಲ್ಯಾಣ ಮಂದಿರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಯಾವುದೇ ಕಾರಣಕ್ಕೂ ಆತಂಕ ಪಡಬೇಕಾಗಿಲ್ಲ. ನಿಮ್ಮೊಂದಿಗೆ ನಾವಿದ್ದೇವೆ. ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಾವು ಚಿಕ್ಕವರಿದ್ದಾಗ ಈ ರೀತಿ ಪ್ರವಾಹವನ್ನು ನೋಡಿದ್ದೆ. ಬಳಿಕ ಇದೇ ಮೊದಲ ಬಾರಿಗೆ ತರಹದ ನೆರೆ ಉಂಟಾಗಿದೆ. ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಈ ಕುರಿತು ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಈ ವೇಳೆ ಸಂಸದ ಆರ್.ಧ್ರುವನಾರಾಯಣ. ವರುಣಾ ಶಾಸಕ ಡಾ ಯತೀಂದ್ರ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ನಗರಸಭಾ ಅಧ್ಯಕ್ಷೆ ಪುಷ್ಪಲತಾ, ಸದಸ್ಯರಾದ ಚಂದ್ರ, ಚಲವರಾಜು, ಖಾಲೀದ್, ಬಾಬು, ಮಂಜುನಾಥ, ರಾಜೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.