ಪಿರಿಯಾಪಟ್ಟಣ : ಪಟ್ಟಣದಲ್ಲಿ ಪೊಲೀಸ್ ಮತ್ತು ಅರೆಸೇನಾ ಪಡೆಯಿಂದ ಪಥ ಸಂಚಲನ
Team Udayavani, Jun 16, 2022, 7:46 PM IST
ಪಿರಿಯಾಪಟ್ಟಣ: ಪಟ್ಟಣದಲ್ಲಿ ಪೊಲೀಸರು ಹಾಗೂ ಅರೆಸೇನಾ ಪಡೆಯ ಸಿಬ್ಬಂದಿಗಳು ಗುರುವಾರ ಪಥ ಸಂಚಲನ ನಡೆಸಿದರು.
ಪಿರಿಯಾಪಟ್ಟಣ ಟೌನ್ ವ್ಯಾಪ್ತಿಯ ಪ್ರಮುಖ ಬೀದಿಗಳಲ್ಲಿ ಹಾಗೂ ಸೂಕ್ಷ್ಮ .ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆ ಹಾಗೂ ಪೊಲೀಸ್ ಠಾಣೆಯ ಸಿಬ್ಬಂದಿಯವರು ಪಥಸಂಚಲನ ಸಾರ್ವಜನಿಕರನ್ನು ಜಾಗೃತಗೊಳಿಸಿದರು.
ಈ ಸಂದರ್ಭದಲ್ಲಿ ಸಿಪಿಐ ಜಗದೀಶ್ ಮಾತನಾಡಿ ಜನ ಸಾಮಾನ್ಯರ ರಕ್ಷಣೆ ಹಾಗೂ ಜನಸಾಮಾನ್ಯರೊಂದಿಗೆ ಪೊಲೀಸ್ ಇಲಾಖೆ ಯಾವಾಗಲೂ ಜೊತೆಗಿರುತ್ತದೆ. ಚುನಾವಣೆ ಸಂದರ್ಭ ಸಾರ್ವಜನಿಕರಿಗೆ ಧೈರ್ಯ ತುಂಬಿ, ಚುನಾವಣಾ ಜಾಗೃತಿ ಮೂಡಿಸುವ, ಕೆಲವೊಮ್ಮೆ ಸಮಾಜಘಾತುಕ ಶಕ್ತಿಗಳು ಜನತೆಯನ್ನು ಗೊಂದಲಕ್ಕೀಡು ಮಾಡುವ ಹಾಗೂ ಶಾಂತಿಸುವ್ಯವಸ್ಥೆ ಭಂಗ ತರಲು ಯತ್ನಿಸುತ್ತವೆ ಅದಕ್ಕಾಗಿಜನತೆಯಲ್ಲಿ ಜಾಗೃತಿ ಮೂಡಿಸಲು ಇಂಥ ಪಥ ಸಂಚಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಇದನ್ನೂ ಓದಿ : ಕೊಡಗಿನಲ್ಲಿ ಕಳ್ಳರ ಭಯ : ವೃದ್ಧರ ಮನೆಗಳೇ ಟಾರ್ಗೆಟ್ ; ತನಿಖಾ ತಂಡ ರಚನೆ
ಪಟ್ಟಣದ ಬಸವೇಶ್ವರ ವೃತ್ತದಿಂದ ಪ್ರಾರಂಭವಾದ ಪಥ ಸಂಚಲನ ಮುಖ್ಯರಸ್ತೆ ಮಾರ್ಗವಾಗಿ ಪ್ರಮುಖ ರಸ್ತೆಗಳಲ್ಲಿ ಸಾಗಿ ನಂತರ ಪೊಲೀಸ್ ಠಾಣೆಯ ಬಳಿ ಕೊನೆಗೊಂಡಿತು.
ಈ ಸಂದರ್ಭದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ಪುಟ್ಟರಾಜು ಗೋವಿಂದರಾಜು. ಸುರೇಶ್, ಸಿಬ್ಬಂದಿಗಳಾದ ಚಿಕ್ಕನಾಯಕ, ವೀರೇಂದ್ರ ಕುಮಾರ್, ಅನಂತ ಹಾಗೂ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.