ಕೆರೆಗಳ ಭರ್ತಿಗೆ ಯೋಜನೆ: ಜಿಟಿಡಿ
Team Udayavani, Feb 9, 2019, 5:48 AM IST
ಮೈಸೂರು: 2019-20ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಮೈಸೂರು ಜಿಲ್ಲೆಗೆ ವಿವಿಧ ಜನೋಪ ಯೋಗಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.
80 ಕೋಟಿ ರೂ. ವೆಚ್ಚದಲ್ಲಿ ಕಬಿನಿ ನದಿ ಯಿಂದ ಕುಡಿಯುವ ನೀರಿಗಾಗಿ ನುಗು ಜಲಾಶಯದ ಮೂಲಕ ನಂಜನಗೂಡು ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವುದು, 40 ಕೋಟಿ ರೂ. ವೆಚ್ಚದಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿನ ಹಾರಂಗಿ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಪಿರಿಯಾಪಟ್ಟಣ ತಾಲೂಕಿನಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಮತ್ತು 50 ಕೋಟಿ ರೂ. ವೆಚ್ಚದಲ್ಲಿ ತಿ.ನರಸೀಪುರ ತಾಲೂಕಿನಲ್ಲಿ ಬೆಟ್ಟಹಳ್ಳಿ ಗ್ರಾಮದ ನೀರಾವರಿ ಯೋಜನೆ ಘೋಷಣೆ.
40 ಕೋಟಿ ರೂ. ವೆಚ್ಚದಲ್ಲಿ ಹಾರಂಗಿ ಬಲದಂಡೆ ನಾಲೆಯ ಕೆ.ಆರ್.ನಗರ ಶಾಖಾನಾಲೆಯ ಲೈನಿಂಗ್ ಕಾಮಗಾರಿ ಗೂ ಹಣ ಬಿಡುಗಡೆ ಮಾಡುವ ಘೋಷಣೆ ಮಾಡಿದ್ದು, ವಿಶ್ವೇಶ್ವರಯ್ಯ ನಾಲಾ ಜಾಲದ 2ನೇ ಹಂತದ 1ನೇ ಘಟ್ಟದ ಆಧುನೀಕರಣಕ್ಕೂ ಯೋಜನೆ ರೂಪಿಸಲಾಗು ತ್ತಿದೆ. ಮೈಸೂರಿನ ಕರಕುಶಲಕರ್ಮಿಗಳಿಗೆ ಅತ್ಯಾಧುನಿಕ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ಜೆಎಸ್‌ಎಸ್ ಸಂಸ್ಥೆಗೆ 5 ಕೋಟಿ ರೂ. ಒದಗಿಸುವುದು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಸ್ವಾಗತಾರ್ಹ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.