ಮೈಸೂರಿನ ಹಳೆ ಗತವೈಭವ ಮರುಕಳಿಸಲು ಯೋಜನೆ
Team Udayavani, Mar 14, 2021, 12:03 PM IST
ಮೈಸೂರು: ಮೈಸೂರಿನ ಹಳೆ ಗತವೈಭವವನ್ನು ನೆನಪಿಸುವಂತಹ ಕಾರ್ಯಕ್ರಮಗಳನ್ನು ರೂಪಿಸುವಂತಹ ಕೆಲಸವಾಗಬೇಕಿದೆ. ಇದಕ್ಕಾಗಿ ಸರ್ಕಾರ ಪ್ರವಾಸೋದ್ಯಮಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅತಿ ಹೆಚ್ಚು ಒತ್ತು ನೀಡಿದೆ ಎಂದು ಪ್ರವಾಸೋದ್ಯಮ ಸಚಿವ ಸಿ .ಪಿ.ಯೋಗೇಶ್ವರ್ ತಿಳಿಸಿದರು.
ಶನಿವಾರ ಮೈಸೂರಿನ ಲಲಿತ ಮಹಲ್ ಪ್ಯಾಲೇಸ್ ಹೋಟೆಲ್ ಸಭಾಂಗಣದಲ್ಲಿ ಹೋಟೆಲ್, ಟ್ರಾವೆಲ್ಸ್, ಗೈಡ್ಸ್ , ಯೋಗ ಕೇಂದ್ರ ನಿಯೋಗದವರ ಜೊತೆ ಸಂವಾದ ನಡೆಸಿ ಮಾತನಾಡಿದರು.
ಬಹಳ ವರ್ಷಗಳ ಹಿಂದೆಯೇ ಕಾವೇರಿ ನದಿಯು ಹರಿಯುವ 5 ಜಿಲ್ಲೆಗಳನ್ನು ಒಟ್ಟುಗೂಡಿಸಿ ಕಾವೇರಿ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯಾಗಿದ್ದು, ಈಗ ಇದನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮೈಸೂರಿಗೆ ಪ್ರವಾಸಕ್ಕೆಂದು ಬರುವ ಪ್ರವಾಸಿಗರ ವಾಹನಕ್ಕೆ ಪಾರ್ಕಿಂಗ್‌ಗಾಗಿ ಒಂದೇ ಬಾರಿ ಹಣ ಪಾವತಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು. ಇದರ ಜೊತೆಗೆ ವಿದೇಶಗಳ ಮಾದರಿಯಲ್ಲೇ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದರು.
ಮೈಸೂರಿಗೆ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರು ಚೆಕ್ ಪೋಸ್ಟ್‌ನಲ್ಲಿಯೇ ತೆರಿಗೆ ಪಾವತಿಸಿ, ದಾಖಲೆಯನ್ನು ತೋರಿಸಿ ಬಂದರೂ ಸಹ ಪ್ರವಾಸಿಗರಿಗೆ ಪೊಲೀಸರು ದಾಖಲೆತೋರಿಸುವಂತೆ ತೊಂದರೆ ನೀಡುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಕಳೆದ ಆರ್ಥಿಕ ಸಾಲಿನಲ್ಲಿ ಬಜೆಟ್ ಮಂಡಿಸುವ ಸಂದರ್ಭದಲ್ಲಿ ದೇಶದಲ್ಲಿ ಪಾರಂಪರಿಕ ವಿಶ್ವವಿದ್ಯಾಲಯ ಸ್ಥಾಪಿಸಲು ಪ್ರಸ್ತಾಪವಾಗಿದ್ದು, ಅದು ಮೈಸೂರಿನಲ್ಲಿಯೇ ಸ್ಥಾಪನೆಯಾಗ ಬೇಕು ಎಂಬ ಪ್ರಸ್ತಾಪ ಪ್ರವಾಸೋದ್ಯಮ ಇಲಾಖೆಯಿಂದಲೇ ಹೋಗಿದೆ. ಇದರಲ್ಲಿ ಮೈಸೂರು ಸ್ಕೂಲ್ ಆಫ್ ಯೋಗ ಎಂಬ ಶಾಲೆ ಸ್ಥಾಪಿಸಿ ಯೋಗವನ್ನು ಬ್ರಾಂಡ್ ಮಾಡಲು ತಿಳಿಸಿದರು.
ಸಭೆಗೂ ಮುನ್ನ ಹೆಲಿಟೂರಿಸಂಗಾಗಿ ಹೆಲಿಪ್ಯಾಡ್ ಮಾಡಲು ಉದ್ದೇಶಿರುವ ಲಲಿತ್ ಮಹಲ್ ಪ್ಯಾಲೇಸ್ ಮೈದಾನ ವನ್ನು ಅಧಿಕಾಗಳೊಂದಿಗೆ ಪರಿಶೀಲಿಸಿದರು. ಈ ವೇಳೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಎ.ಹೇಮಂತ್ ಕುಮಾರ್‌ಗೌಡ, ಪಾರಂಪರಿಕ ಇಲಾಖೆಯ ಉಪನಿರ್ದೇಶಕಿ ನಿರ್ಮಲಾ ಮಠಪತಿ, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಮೋತಿಲಾಲ್, ಮೈಸೂರು ಟ್ರಾವೇಲ್ ಅಸೋಸಿಯೇಷನ್ ಅಧ್ಯಕ್ಷ ಪ್ರಶಾಂತ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.