ಶಕಿಧಾಮಕ್ಕೆ ಶಕ್ತಿ ತುಂಬಿದ್ದ ಪುನೀತ್‌ಗೆ ಗೀತ ನಮನ


Team Udayavani, Oct 31, 2021, 12:25 PM IST

ಶಕಿಧಾಮಕ್ಕೆ ಶಕ್ತಿ ತುಂಬಿದ್ದ ಪುನೀತ್‌ಗೆ ಗೀತ ನಮನ

ಮೈಸೂರು: ಗೊಂಬೆ ಹೇಳುತೈತೆ.. ಮತ್ತೆ ಹೇಳುತೈತೆ ನೀನೆ ರಾಜಕುಮಾರ..ಹಾಡನ್ನು ಮೈಸೂರಿನ ಶಕ್ತಿಧಾಮದಲ್ಲಿನ ಮಕ್ಕಳು ಹಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಶೋಕ ಸಾಗರದಲ್ಲಿ ಮುಳುಗಿ ರುವ ಶಕ್ತಿಧಾಮದದಲ್ಲಿ ಶನಿವಾರ ಬೆಳಗ್ಗೆ ಶ್ರದ್ಧಾಂಜಲಿ ಸಭೆ ನಡೆಯಿತು. ಈ ವೇಳೆ ಸಂಸ್ಥೆಯಲ್ಲಿ ಆಶ್ರಯ ಪಡೆ ದಿರುವ 150 ಮಕ್ಕಳು ಕಣ್ಣಾಲಿ ಯಿಂದ ಒತ್ತರಿಸಿ ಬರುತ್ತಿರುವ ದುಃಖವನ್ನು ತಡೆದು ಕೊಂಡು ಗೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೆ ರಾಜ ಕುಮಾರ… ಗೀತೆಯನ್ನು ಹಾಡಿ ತಮ್ಮ ಪ್ರೀತಿಯ ಅಣ್ಣನಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಮೈಸೂರು ಭಾಗಕ್ಕೆ ಬಂದಾಗಲೆಲ್ಲಾ ಶಕ್ತಿಧಾಮಕ್ಕೆ ಭೇಟಿ ನೀಡಿ, ಶಕ್ತಿಧಾಮ ದಲ್ಲಿರುವ ಮಕ್ಕಳ ಕ್ಷೇಮ ವಿಚಾರಿಸಿ, ಏನಾದರೂ ಕೊಟ್ಟು ಹೋಗುತ್ತಿದ್ದರು. ನಮಗೆಲ್ಲ ಅಣ್ಣನ ಪ್ರೀತಿ ತೋರುತ್ತಿ ದ್ದರು. ಸೂಪರ್‌ ಸ್ಟಾರ್‌ ಆಗಿದ್ದರೂ ಸಮಯ ಕೊಟ್ಟಿದ್ದರು. ಎಲ್ಲರೊಂದಿಗೆ ಪ್ರೀತಿಯಿಂದ ಬೆರೆಯುತ್ತಿದ್ದರು ಎಂದು ಮಕ್ಕಳು ಸ್ಮರಿಸಿಕೊಂಡರು. ಶಕ್ತಿಧಾಮದ ಸಂಚಾಲಕ ಜಿ.ಎಸ್‌. ಜಯದೇವ್‌ ಮಾತನಾಡಿ, ಈ ವರ್ಷ ಕೋವಿಡ್‌ಗೆ ಮುನ್ನ ಶಕ್ತಿ ಧಾಮಕ್ಕೆ ಬಂದು ಬಹಳ ಹೊತ್ತು ಮಕ್ಕ ಳೊಂದಿಗೆ ಸಮಯ ಕಳೆದಿದ್ದರು.

ಇದನ್ನೂ ಓದಿ:- ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಕಾರ್ಯಪ್ರವೃತ: ಚಂದ್ರಹಾಸ್‌ ಕೆ. ಶೆಟ್ಟಿ

ಇತ್ತೀಚಿನ ದಿನಗಳಲ್ಲಿ ಪುನೀತ್‌ ಶಿಕ್ಷ ಣದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು. ಶಕ್ತಿಧಾಮಕ್ಕೆ ಬಂದು ಮಕ್ಕಳ ಜೊತೆ ಊಟ ಮಾಡೋದಂದ್ರೆ ಅವರಿಗೆ ಬಲು ಇಷ್ಟ. ಮಕ್ಕಳಿಗೆ ಒಳ್ಳೆಯ ಕಡೆ ಊಟ ತರಿಸಿ ಅವರೂ ಊಟ ಮಾಡು ತ್ತಿದ್ದರು. ಶಿವಣ್ಣ ಅವರೂ ಕೂಡ ಪುನೀತ್‌ ಅವರ ಯೋಜನೆಗಳಿಗೆ ಕೈಜೋಡಿಸಿದ್ದರು. ಶಕ್ತಿಧಾಮದ ಸಲುವಾಗಿ ವಿದೇಶಕ್ಕೆ ಹೋಗಿ ಬರಲು ತಯಾರಿ ಮಾಡುತ್ತಿದ್ದರು. ಕನ್ನಡದ ಬೇರೆ ಬೇರೆ ನಟರ ಸಹಕಾರ ಪಡೆದು ಶಕ್ತಿಧಾಮಕ್ಕೆ ನೆರವಾಗಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದರು. ಪುನೀತ್‌ರ ಅಗಲಿಕೆ ಶಕ್ತಿಧಾಮ ಹಾಗೂ ಇಡೀ ಕನ್ನಡ ನಾಡಿಗೆ ತುಂಬಲಾರದ ನಷ್ಟ ಎಂದು ಸ್ಮರಿಸಿದರು.

 3 ಎಕರೆಯಲ್ಲಿ ದೊಡ್ಡ ಶಿಕ್ಷಣ ಸಂಸ್ಥೆ ತೆರೆಯಲು ಚಿಂತನೆ

ಪುನೀತ್‌ ಶಕ್ತಿಧಾಮಕ್ಕೆ ಬೆನ್ನೆಲುಬಾಗಿದ್ದರು. ಶಕ್ತಿಧಾಮ ಡಾ.ರಾಜ್‌ ಕುಟುಂಬದ ಕನಸಾಗಿದ್ದು, ಅನಾಥ ಹೆಣ್ಣು ಮಕ್ಕಳ ಪುನರ್ವಸತಿಗಾಗಿ ಈ ಸಂಸ್ಥೆ ಸ್ಥಾಪಿಸಿದ್ದರು. ಶಕ್ತಿಧಾಮಕ್ಕೆ ಅಪ್ಪು ಸಂಪೂರ್ಣ ಸಹಕಾರ ನೀಡುತ್ತಿದ್ದರು.

ಕಳೆದ ವರ್ಷ ಕನ್ನಡದ ಕೋಟ್ಯಧಿಪತಿಯಿಂದ ತಮಗೆ ಬಂದಿದ್ದ 18 ಲಕ್ಷ ರೂ. ಸಂಭಾವನೆಯನ್ನು ಶಕ್ತಿಧಾಮಕ್ಕೆ ನೀಡಿದ್ದರು. ಪ್ರತಿ ವರ್ಷ ಮಕ್ಕಳಿಗೆ ಪುಸ್ತಕ ಹಾಗೂ ಇತರ ಅಗತ್ಯತೆಗಳನ್ನು ಪೂರೈಸುತ್ತಿದ್ದರು. ಶಕ್ತಿಧಾಮಕ್ಕೆ ಸೇರಿದ 3 ಎಕರೆ ಜಾಗದಲ್ಲಿ ಹೆಣ್ಣು ಮಕ್ಕಳಿಗಾಗಿ ದೊಡ್ಡ ಶಿಕ್ಷಣ ಸಂಸ್ಥೆ ಆರಂಭಿಸಲು ಯೋಚಿಸಿದ್ದರು. ಸುಮಾರು 8 ಕೋಟಿ ವೆಚ್ಚದ ಯೋಜನೆ ಕೂಡ ರೂಪಿಸಿದ್ದರು ಎಂದು ಶಕ್ತಿಧಾಮದ ಸಂಚಾಲಕ ಜಿ.ಎಸ್‌.ಜಯದೇವ್‌ ಹೇಳಿದರು.

ನಾವು ಏನ್‌ ಕೇಳಿದರೂ ಇಲ್ಲ ಅನ್ನುತ್ತಿರಲಿಲ್ಲ ಅಣ್ಣ

ಅಣ್ಣನ್ನು ಕಳೆದುಕೊಂಡ ದುಃ ಖದಲ್ಲಿದ್ದೇವೆ. ಶಕ್ತಿಧಾಮದಲ್ಲಿರುವ ನೊಂದ ಮಕ್ಕಳ ಕಷ್ಟಗಳನ್ನು ಕೇಳುತ್ತಿದ್ದರು. ನಂಜನಗೂಡು, ಊಟಿಗೆ ಹೋಗುವಾಗ ಮೈಸೂರಿಗೆ ಬಂದಾಗಲೆಲ್ಲಾ ಶಕ್ತಿಧಾಮಕ್ಕೆ ಬಂದೇ ಹೋಗುತ್ತಿದ್ದರು. ರಾಜಕುಮಾರ ಸಿನಿಮಾಕ್ಕೆ ಕರೆದುಕೊಂಡು ಹೋಗಿದ್ದರು. ಅಣ್ಣ ನಮ್ಮನ್ನು ಬಿಟ್ಟು ಹೋಗಿಲ್ಲ ಎಂದು ಶಕ್ತಿಧಾಮದ ಶ್ಯಾಮಲಾ ದುಖದಿಂದ ಹೇಳಿದರು. ಪುನೀತ್‌ ಅವರನ್ನು ನಾವು ಏನ್‌ ಕೇಳಿದರೂ ಇಲ್ಲ ಅನ್ನುತ್ತಿರಲಿಲ್ಲ. ಕುಟುಂಬ ಸಮೇತ ಬಂದು ಸಮಯ ಕಲೆಯುತ್ತಿದ್ದರು. ಪಾರ್ವತಮ್ಮನ ಹುಟ್ಟುಹಬ್ಬದಲ್ಲಿ ನಮಗೆಲ್ಲಾ ಉಡುಗೊರೆ ನೀಡುತ್ತಿದ್ದರು. ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಶಕ್ತಿಧಾಮದ ಮಕ್ಕಳು ಭಾಗವಹಿಸಬೇ ಕೆಂದು ಕನಸು ಕಟ್ಟಿದ್ದೇವು. ಅವರೇ ಇಲ್ಲದ ಕಾರ್ಯಕ್ರಮಕ್ಕೆ ಹೋಗಬೇಕೆ ಎಂದು ಶಕ್ತಿಧಾಮದ ಸುಷ್ಮಾ ಬೇಸರದ ನುಡಿಗಳನ್ನಾಡಿದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.