ಪಿಒಪಿ ಬಹಿಷ್ಕರಿಸಿ ಪರಿಸರಸ್ನೇಹಿ ಗಣೇಶ ಕೂರಿಸಿ: ಡಿ.ರಂದೀಪ್‌


Team Udayavani, Aug 18, 2017, 11:51 AM IST

mys4.jpg

ಮೈಸೂರು: ಪರಿಸರ ಸಂರಕ್ಷಣೆ ಮಾಡುವ ಸಲುವಾಗಿ ಸಾರ್ವಜನಿಕರು ಈ ಬಾರಿಯ ಗಣೇಶ ಚತುರ್ಥಿಯ ವೇಳೆ  ಪ್ಲಾಸ್ಟರ್‌ ಆಪ್‌ ಪ್ಯಾರೀಸ್‌(ಪಿಒಪಿ)ನಿಂದ ತಯಾರಿಸಿರುವ ಗಣಪತಿಮೂರ್ತಿಗಳನ್ನು ಬಹಿಷ್ಕರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಡಿ. ರಂದೀಪ್‌ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಪಿಒಪಿ ಮತ್ತು ಬಣ್ಣಲೇಪಿತ ವಿಗ್ರಹಗಳ ನಿಷೇಧದ ಬಗ್ಗೆ ಹಾಗೂ ನಿಷೇಧಿತ ವಿಗ್ರಹಗಳ ಮಾರಾಟ ತಡೆಯುವ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಪರಿಸರ ಸ್ನೇಹಿ ಗಣೇಶಮೂರ್ತಿ ಪ್ರತಿಷ್ಠಾಪನೆ ಕುರಿತಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸಾರ್ವಜನಿಕರು ಸಹಕರಿಸಿ: ಈ ಬಗ್ಗೆ ಅರಿವು ಮೂಡಿಸಲು ಎಲ್ಲಾ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜು, ಸರ್ಕಾರಿ ಕಚೇರಿಯ ನೌಕರರು ಹಾಗೂ ಸಾರ್ವಜನಿಕರು ಸಹಕರಿಸಬೇಕಿದೆ. ಅಲ್ಲದೆ ಈ ಬಗ್ಗೆ ಅರಿವು ಮೂಡಿಸುವ ಜಾಗೃತಿ ಅಭಿಯಾನಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ಪಿಒಪಿ ಗಣೇಶ ಮೂರ್ತಿಗಳ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಪಿಒಪಿ ಗಣೇಶ ವಶ: ಇದಲ್ಲದೆ ಜಿಲ್ಲೆಯ 16 ಕಡೆಗಳಲ್ಲಿ ವಿಶೇಷ ಪೊಲೀಸ್‌ ತಂಡದ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದು, ಪಿಒಪಿ ಗಣೇಶಮೂರ್ತಿಗಳನ್ನು ಮಾರಾಟ ಮಾಡುವುದು ಅಥವಾ ಕೊಂಡೊಯ್ಯುತ್ತಿರುವುದು ಕಂಡು ಬಂದರೆ ಅವುಗಳನ್ನು ವಶಕ್ಕೆ ಪಡೆಯಲಾಗುವುದು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವ ಮೂಲಕ ಪರಿಸರಸ್ನೇಹಿ ಗಣೇಶಮೂರ್ತಿಗಳ ಪ್ರತಿಷ್ಠಾಪನೆ ಮುಂದಾಗಬೇಕಿದ್ದು, ಪರಿಸರಸ್ನೇಹಿ ಗಣೇಶನಮೂರ್ತಿ ಪ್ರತಿಷ್ಠಾಪನೆಯನ್ನು ಪೋ›ತ್ಸಾಹಿಸಲು ಜಿಲ್ಲಾಡಳಿತದಿಂದ ಭಿತ್ತಿಪತ್ರಗಳನ್ನು ಸಹ ಹೊರತರಲಾಗಿದೆ ಎಂದು ತಿಳಿಸಿದರು.

ಜಾಗೃತಿ ಮೂಡಿಸಲಾಗುವುದು: ಪರಿಸರ ನಿಯಂತ್ರಣ ಮಂಡಳಿ ನಗರ ವಿಭಾಗೀಯ ಪರಿಸರಾಧಿಕಾರಿ ಬಿ.ಎಂ. ಪ್ರಕಾಶ್‌ ಮಾತನಾಡಿ, ಪರಿಸರಕ್ಕೆ ಹಾನಿಯುಂಟು ಮಾಡಬಲ್ಲ ಪಿಒಪಿ ಅಥವಾ ಬಣ್ಣಲೇಪಿತ ಗಣೇಶನಮೂರ್ತಿಗಳ ಬಳಕೆಯನ್ನು ತಡೆಯಲು ಶಾಲಾ ಹಂತದಲ್ಲಿ ಮಕ್ಕಳಿಗೆ ಮಣ್ಣಿನ ಗಣಪತಿಮೂರ್ತಿಗಳ ಬಳಕೆಯ ಬಗ್ಗೆ ಅರಿವು ಮೂಡಿಸಬೇಕಿದೆ.

ಈ ಹಿನ್ನೆಲೆ ಪರಿಸರ ನಿಯಂತ್ರಣ ಮಂಡಳಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಜಿಲ್ಲಾಡಳಿತದ ಪ್ರಯತ್ನದಲ್ಲಿ ಕೈಜೋಡಿಸಬೇಕಿದ್ದು, ಶಾಲೆಗಳಿಗೆ ತೆರಳಿ ಭಿತ್ತಿಪತ್ರಗಳನ್ನು ಅಂಟಿಸಿ ಮಕ್ಕಳಿಗೆ ಪಿಒಪಿ ಗಣಪತಿಮೂರ್ತಿ ಬಳಕೆಯಿಂದ ಪರಿಸರದ ಮೇಲಾಗುವ ಹಾನಿಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು. ಇದಕ್ಕೂ ಮುನ್ನ ಪರಿಸರಸ್ನೇಹಿ ಗಣಪತಿಮೂರ್ತಿಗಳನ್ನು ಬಳಕೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹೊರತಂದಿರುವ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಪಾಲಿಕೆ ಆಯುಕ್ತ ಜೆ.ಜಗದೀಶ್‌, ನೆಹರು ಯುವಕೇಂದ್ರದ ಸಮನ್ವಯಾಧಿಕಾರಿ ನಟರಾಜು, ಪರಿಸರ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ಉದಯ್‌ಕುಮಾರ್‌, ಗ್ರಾಮಾಂತರ ಪರಿಸರ ಅಧಿಕಾರಿ ಎಂ.ಜಿ.ಯತೀಶ್‌, ಮೈಸೂರು ಗ್ರಾಹಕರ ಪರಿಷತ್‌ ಕಾರ್ಯದರ್ಶಿ ಎಂ.ಜಿ.ಶೈಣೈ, ಪರಿಸರವಾದಿ ಜಯರಾಮಯ್ಯ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.