ಎಲ್ಲೇ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ


Team Udayavani, Apr 3, 2019, 3:00 AM IST

elle-hodru

ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಸಿಂಹ ಅವರು ಮಂಗಳವಾರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೋಡ್‌ಶೋ ನಡೆಸಿ ಮತಯಾಚನೆ ಮಾಡಿದರು.

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹಿನಕಲ್‌ ಗ್ರಾಮದ ಶನೇಶ್ವರ ಸ್ವಾಮಿ ಹಾಗೂ ಮಾರಮ್ಮನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪಕ್ಷದ ಮುಖಂಡರೊಂದಿಗೆ ಪ್ರಚಾರ ಆರಂಭಿಸಿದರು. ಗ್ರಾಮದ ಹಲವು ಬಡಾವಣೆಗಳಲ್ಲಿ ಮನೆ ಮನೆಗೆ ತೆರಳಿ ಕರಪತ್ರ ನೀಡುವ ಮೂಲಕ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಪ್ರತಾಪ್‌ಸಿಂಹ, ಕೊಡಗಿನ ಗಡಿಯಿಂದ 15 ದಿನಗಳ ಹಿಂದೆ ಪ್ರಚಾರ ಆರಂಭಿಸಿ ಸಂಪೂರ್ಣ ಮುಗಿಸಿದ್ದೇನೆ. ಇನ್ನೆರಡು ದಿನ ಕಾಲ ಸಾರ್ವಜನಿಕ ಸಮಾವೇಶ ನಡೆದರೆ ನನ್ನ ಪ್ರಚಾರ ಮುಗಿಯಲಿದೆ.

ಹುಣಸೂರು, ಪಿರಿಯಾಪಟ್ಟಣ,ಚಾಮುಂಡೇಶ್ವರಿ ಕ್ಷೇತ್ರಗಳಲ್ಲಿ ಒಂದು ಸುತ್ತಿನ ಪ್ರಚಾರ ಮುಗಿಸಿ,ಈಗ ಎರಡನೇ ಸುತ್ತಿನ ಪ್ರಚಾರ ಆರಂಭಿಸಿದ್ದೇನೆ. ಎಲ್ಲೇ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಬರುತ್ತಿರುವುದರಿಂದ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಸದನಾಗಿ ಐದು ವರ್ಷ ಉತ್ತಮ ಕೆಲಸ ಮಾಡಿದ್ದೇನೆ. ಹಿನಕಲ್‌ ಮೇಲ್ಸೇತುವೆ ನಿರ್ಮಾಣ ಮಾಡಿಸಿದ್ದೇನೆ. ಈ ಭಾಗದ ನಾಯಕ ಸಮುದಾಯದ ಪರ್ಯಾಯ ಪದಗಳಾದ ತಳವಾರ, ಪರಿವಾರವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಧೇಯಕ ಸಂಸತ್‌ನಲ್ಲಿ ಇದೆ. ಮುಂದಿನ ಅಧಿವೇಶನದಲ್ಲಿ ಅಂಗೀಕಾರ ಕೊಡಿಸುವ ಭರವಸೆ ಕೊಡಲಾಗಿದೆ. ಅದರಂತೆ ಪ್ರಧಾನಮಂತ್ರಿಗಳು ಮಾಡಿಕೊಡಲಿದ್ದಾರೆ ಎಂದರು.

ಏ.8ಕ್ಕೆ ಮೋದಿ: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏಪ್ರಿಲ್‌ 8ರಂದು ಬೃಹತ್‌ ರ್ಯಾಲಿ ಆಯೋಜಿಸಿದ್ದು, ಪ್ರಧಾನಿ ನರೇಂದ್ರಮೋದಿ ಅವರು ಅಂದು ಮಧ್ಯಾಹ್ನ 3ಕ್ಕೆ ಬೃಹತ್‌ ರ್ಯಾಲಿಯನ್ನುದ್ದುಶಿಸಿ ಮಾತನಾಡಲಿದ್ದಾರೆ.

ಕಳೆದ ಬಾರಿಯೂ ಏಪ್ರಿಲ್‌ 8ರಂದೇ ಮೈಸೂರಿಗೆ ಚುನಾವಣಾ ಪ್ರಚಾರಜ್ಜೆ ಆಗಮಿಸಿದ್ದ ಅವರು, ಅಂದು ಮೈಸೂರು ಪ್ಯಾರೀಸ್‌ನಂತೆ ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯಬೇಕೆಂದು ಹೇಳಿದ್ದರು, ನಮ್ಮಲ್ಲಿ ಎರಡು ರಾಷ್ಟ್ರೀಯ ಉದ್ಯಾನವನ, ಎರಡು ನದಿಗಳು, ಭಕ್ತಿಗೆ ಒಂದು ಬೆಟ್ಟವಿದೆ. ಆದರೆ, ಸಂಪರ್ಕದ ಸಮಸ್ಯೆಯಿಂದಾಗಿ ಸಾಕಷ್ಟು ಪ್ರವಾಸಿಗರು ಬರುತ್ತಿರಲಿಲ್ಲ.

ಅದಕ್ಕಾಗಿಯೇ ಈಗ ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ, ಮೈಸೂರು-ಬೆಂಗಳೂರು ಜೋಡಿ ರೈಲು ಮಾರ್ಗ ಪೂರ್ಣ, ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸಲು ಮೋದಿ ಅವರೇ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.

ಸಂಪರ್ಕ ವ್ಯವಸ್ಥೆ ಅನುಕೂಲ ಮಾಡಿಕೊಟ್ಟಷ್ಟು ಪ್ರವಾಸಿಗರು ಹೆಚ್ಚಾಗಿ ಬರಲಿದ್ದಾರೆ ಎಂದರು. ಹಿನಕಲ್‌ ಮೇಲ್ಸೇತುವೆಗೆ ಒಂದು ಪೈಸೆ ಕೊಡಲಿಲ್ಲ. ಮೂರು ವರ್ಷಗಳ ಕಾಲ ನರ್ಮ್ ಯೋಜನೆ ವಿಸ್ತರಿಸುವ ಜತೆಗೆ ರಿಂಗ್‌ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲಾಯಿತು.

ಚಾಮುಂಡಿಬೆಟ್ಟದ ಅಭಿವೃದ್ಧಿಗೆ ಅನುದಾನ ಕೊಡಿ ಅಂದರೆ ಹುಂಡಿ ಒಡೆಸಿದರು.ನಾನು ಕೇಂದ್ರದ ಪ್ರಸಾದ ಯೋಜನೆಯಿಂದ 100 ಕೋಟಿ ಕೊಡಿಸಿದ್ದೇನೆ ಎಂದರು. ಪಕ್ಷದ ಮುಖಂಡರಾದ ಹೇಮಂತ್‌ ಕುಮಾರಗೌಡ, ಅರುಣಕುಮಾರಗೌಡ, ಬೋಗಾದಿ ನಂದೀಶ್‌ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಚರ್ಚೆಗೆ ಬಂದರೆ ದಾಖಲೆ ಸಹಿತ ಉತ್ತರ ಕೊಡುವೆ: ಮೈಸೂರಿಗೆ ಸಂಸದ ಪ್ರತಾಪ್‌ಸಿಂಹ ಕೊಡುಗೆ ಶೂನ್ಯ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ತೀಕ್ಷ್ಮ ಪ್ರತಿಕ್ರಿಯೆ ನೀಡಿದ ಪ್ರತಾಪ್‌ಸಿಂಹ 1983ರಿಂದ 2008ರವರೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ, ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದೀರಿ,

ಆ ಕ್ಷೇತ್ರದ ಜನರಿಗೆ ಕುಡಿಯಲು ನೀರು ಕೊಡಲು ಸಾಧ್ಯವಾಗಲಿಲ್ಲ. ಬರೀ ಸುಳ್ಳು ಹೇಳಿಕೊಂಡು ಬಂದಿದ್ದಕ್ಕೆ ಜನರು ನಿಮಗೆ ಪಾಠ ಕಲಿಸಿದ್ದಾರೆ. ಅಂಥವರ ಮಾತಿಗೆ ಉತ್ತರ ಕೊಡಲ್ಲ ಎಂದರು. ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವ ಸಿದ್ದರಾಮಯ್ಯ ಅವರಿಗೆ ಉತ್ತರ ಕೊಡಲು ನಾನೊಬ್ಬನೇ ಸಾಕು.

ಸಿದ್ದರಾಮಯ್ಯ ಹಾಗೂ ಅವರ ಪಕ್ಷದ ಅತಿರಥ ಮಹಾರಥರೇ ಚರ್ಚೆಗೆ ಬರಲಿ. ನಾನು ಮತ್ತು ನಮ್ಮ ಕಾರ್ಯಕರ್ತರು ಎಲ್ಲ ಆಧಾರ,ದಾಖಲೆ ಸಮೇತ ಉತ್ತರ ಕೊಡಲು ಸಿದ್ಧರಿದ್ದೇವೆ ಎಂದು ಸವಾಲು ಹಾಕಿದರು.

ನನ್ನ ಪರ ಪ್ರಚಾರಕ್ಕೆ ಜಗದೇಕವೀರ ಪ್ರಧಾನಿ ನರೇಂದ್ರಮೋದಿ ಅವರೇ ಮೈಸೂರಿಗೆ ಬರುತ್ತಿರುವಾಗ ಬೇರೆಯವರು ಬರುವುದು ನನಗೆ ಮುಖ್ಯವಲ್ಲ .
-ಪ್ರತಾಪ್‌ಸಿಂಹ, ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.