ಸಿದ್ಧಗಂಗಾ ಶ್ರೀಗೆ ಭಾರತರತ್ನಕ್ಕಾಗಿ ಅಂಚೆ ಚಳವಳಿ
Team Udayavani, Jan 21, 2019, 7:29 AM IST
ಮೈಸೂರು: ಸಿದ್ಧಗಂಗಾ ಮಠದ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿ ಮೈಸೂರು ನಾಯಕರ ಪಡೆ ವತಿಯಿಂದ ಅಂಚೆ ಚಳವಳಿ ನಡೆಸಲಾಯಿತು.
ಶಿವಕುಮಾರ ಸ್ವಾಮೀಜಿಯವರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿ, ನಗರದ ನ್ಯಾಯಾಲಯದ ಎದುರಿನ ಅಂಚೆ ಪೆಟ್ಟಿಗೆಗೆ ಪತ್ರ ಹಾಕಲಾಯಿತು. ಈ ವೇಳೆ ಮಾತನಾಡಿದ ವಕೀಲ ಪಡುವಾರಹಳ್ಳಿ ಎಂ.ರಾಮಕೃಷ್ಣ, ಶಿವಕುಮಾರ ಸ್ವಾಮೀಜಿಯವರು ಕಣ್ಣಿಗೆ ಕಾಣುವ, ನಡೆದಾಡುವ ದೇವರು.
ಏಳೆಂಟು ದಶಕಗಳಿಂದ ತ್ರಿವಿಧ ದಾಸೋಹದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾವಿರಾರು ಮಕ್ಕಳ ಬಾಳಿಗೆ ಬೆಳಕಾಗಿದ್ದಾರೆ. ವಸತಿ, ಶಿಕ್ಷಣದೊಂದಿಗೆ, ಅನ್ನದಾನ ಮಾಡುತ್ತಿದ್ದಾರೆ. ಜಾತಿ, ಮತ ಬೇಧವಿಲ್ಲದೆ ಸರ್ವರನ್ನೂ ಸಮಾನವಾಗಿ ಕಾಣುವ ಮೂಲಕ ಜಾತಿ ವ್ಯವಸ್ಥೆ ತೊಲಗಿಸಲು ಶ್ರಮಿಸಿದ್ದಾರೆ.
ದೇಶಕ್ಕೆ ಅವರ ಸೇವೆ ಅನನ್ಯವಾದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಸ್ವಾಮೀಜಿ ಅವರಿಗೆ ಭಾರತರತ್ನ ನೀಡಬೇಕು ಎಂದು ಆಗ್ರಹಿಸಿದರು. ಚಳವಳಿಯಲ್ಲಿ ಗೋಪಿ, ಶಿವಪ್ರಕಾಶ್, ಮಾರ್ಕೆಟ್ ರಾಜು, ಬದನಗುಪ್ಪೆ ನಾರಾಯಣ, ಟಿ.ಎನ್.ಜಯಕುಮಾರ್, ಶಿವು, ಶಶಿಕಲಾ, ಪಂಕಜಾನಾಯಕ, ಸಿದ್ದರಾಜು, ವಿನೋದ, ತಿಮ್ಮನಾಯಕ, ನಂಜನಗೂಡು ಗುರು, ಪೈ.ಲೋಕೇಶ್ ಜಯಸಿಂಹ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.