![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 25, 2022, 12:11 PM IST
ಮೈಸೂರು: ದೆಹಲಿಯಲ್ಲಿ ಬುಧವಾರ ನಡೆಯುವ 73ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದಿಂದ ಪ್ರತಿನಿಧಿಸುತ್ತಿರುವ ಎನ್‌ಸಿಸಿ ತಂಡವನ್ನುಮುನ್ನಡೆಸುವ ಸೌಭಾಗ್ಯ ಮೈಸೂರಿನ ವಿದ್ಯಾರ್ಥಿನಿಗೆ ಒಲಿದು ಬಂದಿದೆ.
ಮೈಸೂರಿನ ಮಹಾರಾಣಿ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಪ್ರಮೀಳಾ ಕುವರ್ ಎನ್‌ಸಿಸಿ ತಂಡದ ನೇತೃತ್ವ ವಹಿಸಲಿದ್ದಾರೆ. ಮೈಸೂರಿನ ವಿವಿ ಮೊಹಲ್ಲಾದ ನಿವಾಸಿಯಾಗಿರುವ ಪ್ರತಾಪ್ ಸಿಂಗ್ ಮತ್ತು
ಪುಷ್ಪಾ ಕುವರ್ ದಂಪತಿಯ ಪುತ್ರಿಯಾಗಿರುವ ಈಕೆ, ಎನ್‌ಸಿಸಿ ಸೀನಿಯರ್ ಅಂಡರ್ ಆಫೀಸರ್ ಆಗಿದ್ದಾರೆ. ಪ್ರಮೀಳಾ ಅವರ ತಂದೆ ನಗರದ ಕಾಳಿದಾಸ ರಸ್ತೆಯಲ್ಲಿ ಟೀ ಅಂಗಡಿ ಇಟ್ಟುಕೊಂಡು ಮಗಳನ್ನು ಓದಿಸುತ್ತಿದ್ದಾರೆ. 2018 ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಎನ್‌ಸಿಸಿ ತಂಡದ ನೇತೃತ್ವ ವಹಿಸಿಕೊಂಡು ಯಶಸ್ವಿಯಾಗಿ ಮುನ್ನಡೆಸಿದ್ದ ಪ್ರಮೀಳಾ ಅವರಿಗೆ 2022ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಎನ್‌ಸಿಸಿ ತಂಡದ ನೇತೃತ್ವ ವಹಿಸಿರುವುದು ಪೋಷಕ ರಲ್ಲಿ ಸಂತಸವನ್ನುಂಟು ಮಾಡಿದೆ.
ಪ್ರಮಿಳಾ ಜೊತೆಗೆ ಮಹಾರಾಣಿ ಕಲಾ ಕಾಲೇಜಿನ ಸುವರ್ಷ ಸೇರಿ ಮೈಸೂರಿ ನಿಂದ ಆರು ವಿದ್ಯಾರ್ಥಿಗಳು ಪರೇಡ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.