ಪ್ರಿಯಾಂಕ ಖರ್ಗೆ ಹೆಸರು ಗಂಡೋ ಹೆಣ್ಣೋ ಎಂಬ ಕ್ಲಾರಿಟಿ ಇಲ್ಲ: ಪ್ರತಾಪ್ ಸಿಂಹ ಟೀಕೆ
Team Udayavani, Nov 14, 2021, 12:40 PM IST
ಮೈಸೂರು: ಪೇಪರ್ ಸಿಂಹ ಅಂದರೆ ನನಗೆ ಬೇಸರ ಇಲ್ಲ. ನಾನು ಪತ್ರಿಕೆ ಮೂಲಕವೇ ಘರ್ಜಿಸಿ ಈ ಸ್ಥಾನಕ್ಕೆ ಬಂದಿದ್ದೇನೆ. ಪ್ರಿಯಾಂಕ ಖರ್ಗೆ ಹೆಸರು ಗಂಡೋ ಹೆಣ್ಣೋ ಎಂಬ ಕ್ಲಾರಿಟಿ ಇಲ್ಲ. ಹೆಸರಿನಲ್ಲೇ ಮರಿ ಖರ್ಗೆಗೆ ಸ್ವಂತಿಕೆ ಇಲ್ಲ. ಅವರು ರಾಜೀವ್‌ಗಾಂಧಿ ಮಗಳ ಹೆಸರನ್ನು ಇಟ್ಟುಕೊಂಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಟೀಕೆ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಿತರ ಹೆಸರು ಹೇಳಿಕೊಂಡು ಮರಿ ಖರ್ಗೆ ಐಷಾರಾಮಿ ಜೀವನ ಮಾಡುತ್ತಿದ್ದಾರೆ. ಮರಿ ಖರ್ಗೆ ಬಾಯಲ್ಲಿ ಭ್ರಷ್ಟಾಚಾರದ ಮಾತು ಕೇಳಿದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಆಗುತ್ತಿದೆ ಎಂದರು.
ರಾಜ್ಯ ಕಾಂಗ್ರೆಸ್‌ನವರೇ ದುಡ್ಡು ಕಳೆದುಕೊಂಡಿದ್ದಾರೆ. ಹೀಗಾಗಿ ಅವರು ಮಾತ್ರ ಮಾತನಾಡುತ್ತಿದ್ದಾರೆ. ನಮ್ಮ ಪಕ್ಷದವರೇ ಈ ಪ್ರಕರಣದಲ್ಲಿ ಇದ್ದಿದ್ದರೆ ಶ್ರೀಕಿಯನ್ನು ನಾವು ಯಾಕೆ ಬಂಧಿಸುತ್ತಿದೆವು ಎಂದು ಪ್ರಿಯಾಂಕ ಖರ್ಗೆಗೆ ತಿರುಗೇಟು ನೀಡಿದರು.
ಬಿಟ್ ಕಾಯಿನ್ ಕಾಲ್ಪನಿಕ ವಿಚಾರವಾಗಿದೆ. ಜನಸಾಮಾನ್ಯರಲ್ಲಿ ಚರ್ಚೆ ಶುರುವಾಗಿದೆ. ಮರಿ ಖರ್ಗೆ ಸುದ್ದಿಗೋಷ್ಠಿ ನಡೆಸುತ್ತಾರೆ. ಸುರ್ಜೆವಾಲ ಡೆಲ್ಲಿಯಲ್ಲಿ ಕುಳಿತು ಸುದ್ದಿಗೋಷ್ಠಿ ನಡೆಸುವ ಅಗತ್ಯವೇನಿದೆ. ಡಿಕೆಶಿ, ಸಿದ್ದು ಜಗಳ ಬಿಡಿಸಲು ವಿಫಲವಾಗಿ ಡೆಲ್ಲಿಯಲ್ಲೇ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನಾನು ಇನ್ನೂ ಜೀವಂತವಾಗಿದ್ದೇನೆ ಎಂದು ತೋರಿಸಲು ಹೀಗೆ ಮಾಡುತ್ತಿದ್ದಾರೆ. ಗಾಳಿಯಲ್ಲಿ ಗುಂಡು ಹೊಡೆಯುದನ್ನು ಬಿಟ್ಟು, ನೇರವಾಗಿ ಕರ್ನಾಟಕಕ್ಕೆ ಬಂದು ಒಟ್ಟಾಗಿ ಪ್ರೆಸ್ ಮೀಟ್ ಮಾಡಿ. 13 ಬಜೆಟ್ ಮಂಡಿಸಿದ ಸಿದ್ದರಾಮಯ್ಯಗೆ ಬಿಟ್ ಕಾಯಿನ್ ಬಗ್ಗೆ ಗೊತ್ತಿರಬೇಕಲ್ವ. ದಯಮಾಡಿ ಜನಸಾಮಾನ್ಯರಿಗೆ ಬಿಟ್ ಕಾಯಿನ್ ಬಗ್ಗೆ ಹೇಳಿ ಎಂದು ಪ್ರತಾಪ್ ಸಿಂಹ ವ್ಯಂಗ್ಯವಾಡಿದರು.
ಇದನ್ನೂ ಓದಿ:ಸುರ್ಜೇವಾಲಾ ಅಂದೇ ಯಾಕೆ ಕೇಳಲಿಲ್ಲ?: ಆರೋಪಕ್ಕೆ ಸಿಎಂ ತಿರುಗೇಟು
ಶ್ರೀಕಿ ಜೊತೆ ವ್ಯವಹಾರ ನಡೆಸಿರುವದು ನಿಮ್ಮ ನಲಪಾಡ್. ನಿಮ್ಮ ಶಾಸಕರ ಮಕ್ಕಳೇ ಶ್ರೀಕಿ ಜೊತೆ ವ್ಯವಹಾರ ಮಾಡಿರುವುದು. ಅಕೌಂಟ್ ಹ್ಯಾಕ್ ಮಾಡಿದ್ದರೆ ಬಹಿರಂಗ ಪಡಿಸಿ. ನಿಮ್ಮ ಯಾವ ಅಕೌಂಟ್ ಹ್ಯಾಕ್ ಆಗಿದೆ ಬಹಿರಂಗ ಪಡಿಸಿ. ಒಂದೇ ಒಂದು ಅಕೌಂಟ್ ನಂಬರ್ ಕೊಡಿ ಎಂದು ಕಾಂಗ್ರೆಸ್ ಗೆ ಸವಾಲು ಹಾಕಿದರು.
ಒಂದು ಸಾವಿರ ಕಳೆದುಕೊಂಡರೂ ಇವತ್ತು ದೂರು ಕೊಡ್ತಾರೆ. ಏಳು ಸಾವಿರ ಕೋಟಿ ಎಂದರೆ ಯಾಕೆ ದೂರು ಕೊಟ್ಟಿಲ್ಲ. ನಿಮ್ಮ ಧರ್ಮ ಸಂಕಟ ಏನು ಅಂತ ನನಗೆ ಚೆನ್ನಾಗಿ ಗೊತ್ತು. ಮರಿಖರ್ಗೆ, ಬಿಟಿಎಂ ರೆಡ್ಡಿ, ಪಾಟೀಲ, ಜಾರ್ಜ್ ಹೂಡಿರುವ ಅಕೌಂಟ್ ಹ್ಯಾಕ್ ಆಗಿರಬೇಕು. ಹಿಂದೆ ಪರ್ಸೆಂಜೆಟ್ ಪಡೆದಿದ್ದರಿಂದಲೇ 2018 ರಲ್ಲಿ ಹೀನಾಯ ಸೋಲಾಗಿತ್ತು. ಸಿದ್ದರಾಮಯ್ಯನವರದ್ದು ಸ್ಪಿಟ್ ಅಂಡ್ ರನ್. ಯಾವ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದಿಲ್ಲ ಎಂದು ಪ್ರತಾಪ್ ಸಿಂಹ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.