ಶಿಕ್ಷಣದ ಜತೆಗೆ ಸಮಯಪಾಲನೆಗೂ ಆದ್ಯತೆ ನೀಡಿ

Team Udayavani, Jul 21, 2017, 11:35 AM IST

mys3.jpg

ಮೈಸೂರು: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಮಯ ಪಾಲನೆಗೂ ಹೆಚ್ಚಿನ ಆದ್ಯತೆ ನೀಡುವ ಮೂಲಕ ಉತ್ತಮ ಸಮಯ ಪ್ರಜ್ಞೆ ಮೈಗೂಡಿಸಿಕೊಳ್ಳಬೇಕು ಎಂದು ಮೈಸೂರು ವಿವಿ ಭೂಗರ್ಭಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪೊ›.ಎ.ಬಾಲಸುಬ್ರಹ್ಮಣಿಯನ್‌ ಹೇಳಿದರು. ನಗರದ ಮಹಾರಾಣಿ ಮಹಿಳಾ ವಿಜಾnನ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ನೂತನ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಹಾಗೂ ಮಾದಕ ವಸ್ತುಗಳ ಬಳಕೆ ಮತ್ತು ರ್ಯಾಗಿಂಗ್‌ ಪಿಡುಗು ತಡೆಗಟ್ಟಲು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಯಪಾಲನೆ ಮುಖ್ಯ: ಬಹುತೇಕ ಹೊರ ದೇಶಗಳಲ್ಲಿ ಭಾರತೀಯ ಸಮಯ ಪದ್ಧತಿ ಸರಿಯಿಲ್ಲ ಎಂಬ ವಾದವಿದ್ದು, ಭಾರತೀಯರಲ್ಲಿ ಸಮಯ ಪ್ರಜ್ಞೆ ತೀರಾ ಕಡಿಮೆ ಎಂಬ ಮಾತು ಸಹ ಕೇಳಿ ಬರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ನಿರ್ಧರಿಸಬಲ್ಲ ಶಿಕ್ಷಣಕ್ಕೆ ನೀಡುವಷ್ಟೇ ಮಹತ್ವ ಸಮಯ ಪರಿಪಾಲನೆಗೂ ನೀಡಬೇಕಿದ್ದು, ಆ ಮೂಲಕ ಭಾರತೀಯರಿಗೆ ಸಮಯಪ್ರಜ್ಞೆ ಇಲ್ಲವೆಂಬ ನಿಂದನೆಯನ್ನು ಯುವ ಪೀಳಿಗೆ ಹೋಗಲಾಡಿಸಬೇಕು ಎಂದು ಸಲಹೆ ನೀಡಿದರು.

ಸಮಸ್ಯೆಗಳನ್ನು ತಡೆಯಿರಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಳಕಳಿ ಮತ್ತು ಸಾಮಾಜಿಕ ಸೇವೆ ಮನೋಭಾವ ಕಡಿಮೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯಾವಂತರು ಸಾಮಾಜಿಕ ಜವಾಬ್ದಾರಿ ಅರಿತು ಮುನ್ನಡೆಯಬೇಕಿದೆ. ಇದರ ಜತೆಗೆ ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಂಡು, ಆರೋಗ್ಯದ ಬಗ್ಗೆಯೂ ಹೆಚ್ಚಿನ ಆದ್ಯತೆ ನೀಡಿದರೆ ಮುಂದಿನ ದಿನಗಳಲ್ಲಿ ಎದುರಾಗುವ ಹಲವು ಸಮಸ್ಯೆಗಳನ್ನು ತಡೆಯಬಹುದು ಎಂದು ತಿಳಿಸಿದರು.

ರ್ಯಾಗಿಂಗ್‌ ನಿಲ್ಲಲಿ: ಇದಲ್ಲದೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಮೊಬೈಲ್‌, ಇಂಟರ್ನೆಟ್‌ ಹಾಗೂ ಸಾಮಾಜಿಕ ಜಾಲತಾಣಗಳ ದಾಸರಾಗುತ್ತಿದ್ದು, ಇದರಿಂದ ದೂರವಿರುವ ಮೂಲಕ ಇವುಗಳು ನಮ್ಮನ್ನು ಆಕ್ರಮಿಸಿಕೊಳ್ಳದಂತೆ ನೋಡಿಕೊಳ್ಳಬೇಕು. ಕಾಲೇಜುಗಳಲ್ಲಿ ನಡೆಯುವ ರ್ಯಾಗಿಂಗ್‌ ಪಿಡುಗನ್ನು ತಡೆಗಟ್ಟಲು ಸಮಿತಿಯೊಂದು ರಚನೆಯಾಗಿದ್ದು ಅದರ ನಿರ್ದೇಶನದಂತೆ ಪೊಲೀಸ್‌ ಇಲಾಖೆ ಕರ್ತವ್ಯ ನಿರ್ವಹಿಸುತ್ತಿದೆ. ಹೀಗಾಗಿ ರ್ಯಾಗಿಂಗ್‌ ಸಮಸ್ಯೆ ಎದುರಿಸುವ ವಿದ್ಯಾರ್ಥಿಗಳು ಸ್ಥಳೀಯ ಪೊಲೀಸ್‌ ಆಯುಕ್ತರು ಅಥವಾ ಜಿಲ್ಲಾ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದರೆ ಸೂಕ್ತ ಪರಿಹಾರ ಸಿಗಲಿದೆ ಎಂದು ಮಾಹಿತಿ ನೀಡಿದರು.

ಮಹಾರಾಣಿ ಮಹಿಳಾ ವಿಜಾನ ಕಾಲೇಜು ಪ್ರಾಂಶುಪಾಲ ಡಾ.ಎ.ನಾಗರಾಜು, ಸಾಂಸ್ಕೃತಿಕ ಸಮಿತಿ ಅಧ್ಯಾಪಕ ಕಾರ್ಯದರ್ಶಿ ಪೊ›.ಕೆ.ಸಿದ್ದರಾಜು, ಹಿರಿಯ ಪ್ರಾಧ್ಯಾಪಕಿ ರಾಜೇಶ್ವರಿ ಹಾಜರಿದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

“ಎಕ್ಸ್‌ ಖಾತೆಯಲ್ಲಿ ಬಂದ ವಿಡಿಯೋ ಧ್ವನಿ ಯಾರದ್ದು’

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.