ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ ಸಿದ್ಧತೆಗಳಾಗಲಿ: ಡೀಸಿ


Team Udayavani, Feb 5, 2020, 3:00 AM IST

srikanteshwara

ಮೈಸೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ನಂಜನಗೂಡು ಶ್ರೀ ಕಂಠೇಶ್ವರಸ್ವಾಮಿ ದೊಡ್ಡಜಾತ್ರೆ ಏ.4ರಂದು ನಡೆಯಲಿದ್ದು, ಈ ಸಂಬಂಧ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ಅಧಿಕಾರಿಗಳಿಗೆ ತಿಳಿಸಿದರು.

ನಂಜನಗೂಡು ಶಾಸಕ ಬಿ.ಹರ್ಷವರ್ಧನ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ಕಂಠೇಶ್ವರಸ್ವಾಮಿ ದೊಡ್ಡಜಾತ್ರೆ ಆಚರಣೆ ಕುರಿತ ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ, ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಕಂಠೇಶ್ವರಸ್ವಾಮಿ ದೊಡ್ಡಜಾತ್ರೆ ಆಚರಿಸುತ್ತಿದ್ದು, ಜಾತ್ರೆಯ ಮುಂಚೆ ರಥವನ್ನು ಎಳೆದು ಪರೀಕ್ಷಿಸುವಂತೆ ಹಾಗೂ ರಥವನ್ನು ಎಳೆಯುವ ಹಗ್ಗವನ್ನು ಖರೀದಿಸಿ ಅದನ್ನು ಉಪ್ಪಿನ ನೀರಿನಲ್ಲಿ ನೆನೆಸಿ ನಂತರ ಉಪಯೋಗಿಸುವುದು ಹಾಗೂ ಹಗ್ಗದ ಜೊತೆಯಲ್ಲಿ ಚೈನನ್ನು ಜೋಡಣೆ ಮಾಡಬೇಕು ಎಂದು ತಿಳಿಸಿದರು.

ಜಾತ್ರೆ ಸಂದರ್ಭದಲ್ಲಿ ಮೊದಲು ಸ್ವತ್ಛತೆಗೆ ಆದ್ಯತೆ ನೀಡಿರುವುದರಿಂದ ಕಸದ ಬುಟ್ಟಿಯನ್ನು ನಿಗದಿತ ಸ್ಥಳಗಳಲ್ಲಿ ಇರಿಸಿ ಹೆಚ್ಚಿನ ಕೆಲಸದವರು ಕಾರ್ಯನಿರ್ವಹಿಸುವಂತೆ, ರಥ ಹೊರಡುವ ರಸ್ತೆಯ ಕಾಮಗಾರಿ ಪ್ರಾರಂಭವಾಗಿರುವುದರಿಂದ ಸೂಕ್ತವಾದ ಮರಳಿನ ವ್ಯವಸ್ಥೆ ಮಾಡುವಂತೆ ಹಾಗೂ ಅಲ್ಲಿ ಅಪಘಾತಗಳು ಸಂಭವಿಸದಂತೆ ನೋಡಿಕೊಳ್ಳಲು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುಡಿಯುವ ನೀರಿನ ವ್ಯವಸ್ಥೆ ಸೂಕ್ತ ಸ್ಥಳಗಳಲ್ಲಿ ಅಳವಡಿಸಿ, ಬಟ್ಟೆ ಬದಲಾಯಿಸಿಕೊಳ್ಳಲು ಶೆಡ್‌ ನಿರ್ಮಾಣ ಮಾಡಿ, ದೇಗುಲದ‌ ಸುತ್ತಲು ಆಕರ್ಷಕ ವಿದ್ಯುತ್‌ ದೀಪಗಳನ್ನು ಬಳಸುವಂತೆ ಅವರು ತಿಳಿಸಿದರು. ರಥೋತ್ಸವದ ದಿನ ಸೂಕ್ತ ಬಂದೋಬಸ್ತ್ ಮಾಡಿ ವಾಹನ ನಿಲುಗಡೆಗೆ ಮಾರ್ಗಸೂಚಿಯನ್ನು ಅಳವಡಿಸುವಂತೆ ಹಾಗೂ ರಥೋತ್ಸವದ ಸಂದರ್ಭದಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾಡುವಂತೆ ಪೊಲೀಸ್‌ ಇಲಾಖೆಯವರಿಗೆ ತಿಳಿಸಿದರು.

ಜಾತ್ರಾ ದಿನಗಳಲ್ಲಿ ಬರುವ ಭಕ್ತಾದಿಗಳಿಗೆ ಕುಡಿಯುವ ನೀರು ಹಾಗೂ ತಾತ್ಕಾಲಿಕ ಶೌಚಾಲಯವನ್ನು ನಿರ್ಮಿಸುವಂತೆ ಜಿಲ್ಲಾ ಪಂಚಾಯತಿ ಆಧಿಕಾರಿಗಳಿಗೆ ತಿಳಿಸಿ, ಜಾತ್ರೆಯಲ್ಲಿ ಭಕ್ತಾದಿಗಳಿಗೆ ನೀಡುವ ಪ್ರಸಾದದ ಗುಣಮಟ್ಟವನ್ನು ಪರಿಶೀಲಿಸಿ ನಂತರ ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸುವಂತೆ ಹೇಳಿದರು. ರಥೋತ್ಸವ ಮತ್ತು ತೆಪ್ಪೋತ್ಸವ ದಿನದಂದು ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮವನ್ನು ತಗೆದುಕೊಂಡು ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆದು,

ಆ್ಯಂಬುಲೆನ್ಸ್‌ ವಾಹನದೊಂದಿಗೆ ವೈದ್ಯಕೀಯ ಸಿಬ್ಬಂದಿಗಳು ಇರುವಂತೆ ಆರೋಗ್ಯ ಇಲಾಖೆಯವರಿಗೆ ಸೂಚಿಸಿದರು. ರಥೋತ್ಸವಕ್ಕೆ ನಾನಾ ಭಾಗದಿಂದ ಭಕ್ತಾದಿಗಳು ಆಗಮಿಸುವುದರಿಂದ ಬಸ್ಸಿನ ವ್ಯವಸ್ಥೆಯನ್ನು ಹಾಗೂ ರಥೋತ್ಸವ ಮುಗಿಯುವವರೆಗೂ ರಥಗಳ ಜೊತೆಯಲ್ಲಿ ಕ್ರೇನ್‌ ವಾಹನವು ಇರಬೇಕೆಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಹೇಳಿದರು.

ಶಾಸಕ ಹರ್ಷವರ್ಧನ್‌ ಮಾತನಾಡಿ, ಪಂಚ ಮಹಾರಥೋತ್ಸವಕ್ಕೆ ಸಂಬಂಧಿಸಿದಂತೆ 7 ಗ್ರಾಮದ ಗ್ರಾಮಸ್ಥರು ರಥ ಚಕ್ರದ ಮುಂಭಾಗದಲ್ಲಿ ಎದ್ದಿನ ಮರ ಕೊಡುತ್ತಾರೆ ಆದ್ದರಿಂದ ಈ 7 ಗ್ರಾಮದ ದೇವಾಲಯಗಳನ್ನು ದತ್ತು ಪಡೆದು ಅಭಿವೃದ್ಧಿ ಮಾಡುವಂತೆ ತಿಳಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಪಿ.ವಿ.ಸ್ನೇಹಾ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

Prathap-Simha

Waqf Property: ವಕ್ಫ್ ಆಸ್ತಿ ಅಕ್ಬರ್, ಔರಂಗಜೇಬ್‌ ಬಿಟ್ಟುಹೋದ ಆಸ್ತಿಯಾ?: ಪ್ರತಾಪ್‌ ಸಿಂಹ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.