ಮುಕ್ತ, ನ್ಯಾಯ ಸಮ್ಮತ ಚುನಾವಣೆಗೆ ಸಿದ್ಧತೆ


Team Udayavani, Nov 23, 2019, 3:00 AM IST

mukta-nyay

ಮೈಸೂರು: ಹುಣಸೂರು ಉಪ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿರುವುದಾಗಿ ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಮೂರು ಪ್ರಮುಖ ಪಕ್ಷಗಳ ವಿರುದ್ಧ ದೂರು ದಾಖಲಿಸಿಕೊಂಡಿದ್ದೇವೆ.

ಚೆಕ್‌ಪೋಸ್ಟ್‌ಗಳ ಸಂಖ್ಯೆ ಹೆಚ್ಚಿಸಿದ್ದು, ಈ ಹಿಂದೆ ಮನುಗನಹಳ್ಳಿ, ವೀರನಹೊಸಹಳ್ಳಿ (ಉಮ್ಮತ್ತೂರು), ಚಿಲ್ಕುಂದ, ಗಾವಡಗೆರೆ (ಚಿಕ್ಕಾಡಗನಹಳ್ಳಿ), ಮುತ್ತುರಾಯನ ಹೊಸಹಳ್ಳಿ, ದೊಡ್ಡೆಕೊಪ್ಪಲು ಗ್ರಾಮಗಳಲ್ಲಿ ಚೆಕ್‌ಪೋಸ್ಟ್‌ ತೆರೆಯಲಾಗಿತ್ತು. ಈಗ ಅವುಗಳ ಜತೆಗೆ ಅಸ್ವಾಳು, ಶಾಂತಿಪುರ ಮತ್ತು ಶಿರೇನಹಳ್ಳಿಗಳಲ್ಲೂ ಚೆಕ್‌ಪೋಸ್ಟ್‌ ತೆರೆಯಲಾಗಿದೆ.

ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟು: ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ಈವರೆಗೆ 6,35,300 ರೂ. ಹಣ ಜಪ್ತಿ ಮಾಡಲಾಗಿದ್ದು, ಇದರಲ್ಲಿ 4ಲಕ್ಷ ರೂ.ಗಳು ಮದುವೆಗಾಗಿ ಬ್ಯಾಂಕ್‌ನಿಂದ ಡ್ರಾ ಮಾಡಿಕೊಂಡು ಬಂದಿದ್ದು, ತಿಳಿದ ನಂತರ ಹಣ ವಾಪಸ್‌ ಮಾಡಲಾಗಿದೆ. ಇನ್ನು ನಿಗದಿತ ಮಾರ್ಗಕ್ಕೆ ಬದಲಾಗಿ ಮೈಸೂರು ಮಾರ್ಗದಲ್ಲಿ ಕೇರಳಕ್ಕೆ ನಾಲ್ಕು ಟ್ಯಾಂಕರ್‌ಗಳಲ್ಲಿ ಸಾಗಿಸುತ್ತಿದ್ದ 77 ಲಕ್ಷ ರೂ. ಮೌಲ್ಯದ ಮದ್ಯ ಮತ್ತು ಸಾಗಣೆಗೆ ಬಳಸಿದ್ದ ನಾಲ್ಕು ಟ್ಯಾಂಕರ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸೀರೆ ದಾಸ್ತಾನು ಮಾಡಿರುವ ಬಗ್ಗೆ ಕಾಂಗ್ರೆಸ್‌ನಿಂದ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಉಪಚುನಾವಣೆ ನಡೆಯುತ್ತಿರುವ ಹುಣಸೂರು ಕ್ಷೇತ್ರದ ಹೊರತಾಗಿ ಮೈಸೂರು ನಗರದಲ್ಲಿ ಸೀರೆ ವಶಪಡಿಸಿಕೊಂಡಿದ್ದು, ಮತ್ತು ಆಗ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿಲ್ಲದ ಕಾರಣ, ತಕ್ಷಣಕ್ಕೆ ಸೀರೆ ದಾಸ್ತಾನು ಮಾಡಲಾಗಿದ್ದ ಗೋದಾಮಿನ ಮಾಲಿಕರ ಮೇಲೆ ಪ್ರಕರಣ ದಾಖಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು.

ಒಣ ದಿನ ಘೋಷಣೆ: ಚುನಾವಣೆ ಆಯೋಗದ ನಿರ್ದೇಶನದಂತೆ ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚಿನಿಂದ ಮತದಾನ ಮುಕ್ತಾಯದ ದಿನದವರೆಗೆ ಹಾಗೂ ಮತ ಎಣಿಕೆಯ ದಿನದಂದು ಒಣ ದಿವಸಗಳೆಂದು ಘೋಷಣೆ ಮಾಡಲಾಗುವುದು. ಆ ದಿನಗಳಲ್ಲಿ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ಪರವಾನಗಿ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು. ಜತೆಗೆ ಪರವಾನಗಿ ಪಡೆಯದ ಆವರಣದಲ್ಲಿ ಮದ್ಯ ಶೇಖರಣೆಯನ್ನು ನಿಷೇಧಿಸಿದೆ.

ಮತದಾರರ ಸೇರ್ಪಡೆ: ನೀತಿ ಸಂಹಿತೆ ಜಾರಿಗೆ ಬರುವ ದಿನದವರೆಗೆ ಮತದಾರರ ಪಟ್ಟಿಗೆ ಹೆಚ್ಚುವರಿಯಾಗಿ 434 ಪುರುಷ, 618 ಮಹಿಳೆಯರು, ಇಬ್ಬರು ಇತರೆ ಸೇರಿದಂತೆ 1054 ಜನರನ್ನು ಸೇರ್ಪಡೆಮಾಡಲಾಗಿದ್ದು, ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 227974 ಆಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಮಾತನಾಡಿ, ಈ ಹಿಂದೆ ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿದ್ದವರ ಮೇಲೆ ನಿಗಾ ಇಡಲಾಗಿದ್ದು, ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿದ್ದ 186 ರೌಡಿಶೀಟರ್‌ಗಳಿಗೆ ಎಚ್ಚರಿಕೆ ನೀಡಿ, ಅವರ ಮೇಲೆ ನಿಗಾ ಇರಿಸಲಾಗಿದೆ. 24 ಮತ್ತು 25ರಂದು ಸಿಐಎಸ್‌ಎಫ್ನ ನಾಲ್ಕು ಕಂಪನಿಗಳು ಆಗಮಿಸಲಿದ್ದು, ಪ್ರಮುಖ ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜನೆ, ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ಮಾಡಿಸಲಾಗುವುದು ಎಂದರು.

ಚುನಾವಣಾ ವೀಕ್ಷಕ ಅಮರ್‌ ಖುಷ ಮಾತನಾಡಿ, ಎಲ್ಲ ರಾಜಕೀಯ ಪಕ್ಷಗಳವರೊಂದಿಗೆ ಸಭೆ ನಡೆಸಿದ್ದು, ಸೂಕ್ಷ್ಮ ಪ್ರದೇಶಗಳ ಮತಗಟ್ಟೆಗಳ ಮೇಲೆ ನಿಗಾ ಇಟ್ಟಿದ್ದೇವೆ. ಚುನಾವಣಾ ಅಕ್ರಮಗಳ ಬಗ್ಗೆ ನಮಗೆ ಬರುತ್ತಿರುವ ದೂರುಗಳ ಸಂಖ್ಯೆ ಕಡಿಮೆ ಇದೆ. ಸಾರ್ವಜನಿಕರು ಚುನಾವಣಾ ಅಕ್ರಮಗಳು ಕಂಡುಬಂದರೆ ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಚುನಾವಣಾ ಆಯೋಗದ ಸಿ ವಿಜಿಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಅಲ್ಲಿಗೆ ಅಪ್‌ಲೋಡ್‌ ಮಾಡಬಹುದಾಗಿದೆ. ಜೊತೆಗೆ ನಮ್ಮನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ ಎಂದು ತಿಳಿಸಿದರು.

ರಜೆ ಘೋಷಣೆ: ಮತದಾನ ದಿನವಾದ ಡಿ.5ರಂದು ಹುಣಸೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಮತದಾರರಿಗೆ ಮತದಾನ ಮಾಡಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ನೌಕರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

ದೂರು ನೀಡಲು ಸಂಪರ್ಕಿಸಿ: ಸಾಮಾನ್ಯ ವೀಕ್ಷಕ ಅಮರ್‌ ಖುಷ, ಮೊ. 7259813556 ಹಾಗೂ ವೆಚ್ಚ ವೀಕ್ಷಕ ಉಪಿಂದರ್‌ಬಿರ್‌ ಸಿಂಗ್‌,ಮೊ. 7899831135.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.