ವಾಯು ಮಾಲಿನ್ಯ ತಡೆದೆ ಮುಂದಾಗಿ
Team Udayavani, Nov 5, 2017, 11:55 AM IST
ಹುಣಸೂರು: ಪರಿಸರ ಮಾಲಿನ್ಯ ತಡೆಯಲು ಪ್ರತಿಯೊಬ್ಬ ವಾಹನ ಸವಾರರು ಆರು ತಿಂಗಳಿಗೊಮ್ಮೆ ಕಡ್ಡಾಯವಾಗಿ ವಾಹನ ತಪಾಸಣೆಗೊಳಪಡಿಸಿಕೊಳ್ಳಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ.ಪ್ರಭುಸ್ವಾಮಿ ತಿಳಿಸಿದರು.
ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ವಾಯುಮಾಲಿನ್ಯ ತಡೆ ಮಾಸಾಚರಣೆ ಆಂಗವಾಗಿ ಆಯೋಜಿಸಿದ್ದ ಅರಿವು ಜಾಥಾ ಉದ್ಘಾಟಿಸಿ ಮಾತನಾಡಿದರು. ವಾಹನಗಳು ಹೊರಸೂಸುವ ಕಾರ್ಬನ್‌ಯುಕ್ತ ವಿವಿಧ ವಿಷಾ ಅನಿಲಗಳಾದ ಕಾರ್ಬನ್ ಮೋನಾಕ್ಸೈಡ್, ಕಾರ್ಬನ್ ಡೈಯಾಕ್ಸೈಡ್, ಸಲರ್‌ಡೈಯಾಕ್ಸೈಡ್, ಹೈಡ್ರೋಕಾರ್ಬನ್ ಮುಂತಾದವುಗಳು ಹಲವಾರು ದುಷ್ಪರಿಣಾಮಗಳನ್ನು ಉಂಟುಮಾಡುತ್ತವೆ.
ಗರ್ಭಿಣಿಯರಲ್ಲಿ ಗರ್ಭಪಾತಕ್ಕೆ ಕಾರಣವಾಗಬಹುದು. ಹುಟ್ಟುವ ಮಕ್ಕಳಲ್ಲಿ ಬುದ್ಧಿಮಾಂದ್ಯತೆ, ಬೆಳವಣಿಗೆ ಕುಂಠಿತ, ಯುವಕರು ಮತ್ತು ವಯೋವೃದ್ಧರಿಗೆ ಶ್ವಾಸಕೋಶದ ಕ್ಯಾನ್ಸರ್‌ನಂತಹ ಕಾಯಿಲೆಗಳು ಹೆಚ್ಚುತ್ತಿವೆ ಎಂದರು. ಕಚೇರಿ ಅಧೀಕ್ಷಕ ಎಂ.ಎಲ್.ಎನ್.ಪ್ರಸಾದ್, ಇಲಾಖೆ ವತಿಯಿಂದ ಶಾಲಾ ಕಾಲೇಜುಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇಡೀ ತಿಂಗಳು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದೆಂದರು.
ಕಚೇರಿ ಸಿಬ್ಬಂದಿಗಳಾದ ವೆಂಕಟೇಶ್, ಶ್ರೀನಿವಾಸ್, ಶಾರದಾದೇವಿ, ಶರತ್‌ಚಂದ್ರ, ಜಾನಕಿ, ಶಿವಣ್ಣ, ಹರೀಶ್ ಇದ್ದರು. ಇದಕ್ಕೂ ಮುನ್ನ ಮುಖ್ಯ ರಸ್ತೆಗಳಲ್ಲಿ ಜಾಥಾ ನಡೆಸಲಾಯಿತು. ಗೃಹರಕ್ಷಕ ದಳದ ಸಿಬ್ಬಂದಿಗಳು, ಚಾಲನಾ ತರಬೇತಿ ಕೇಂದ್ರಗಳ ಮುಖ್ಯಸ್ಥರು, ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.