ಪಠ್ಯಪುಸ್ತಕದಲ್ಲಿ ಸಂವಿಧಾನದ ತತ್ವಗಳನ್ನು ಮುದ್ರಿಸಿ


Team Udayavani, Sep 18, 2017, 12:58 PM IST

mys3.jpg

ಮೈಸೂರು: ಮಕ್ಕಳಿಗೆ ಶಾಲಾ ಹಂತದಲ್ಲೇ ಸಂವಿಧಾನದ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಪಠ್ಯದಲ್ಲಿ ಕಡ್ಡಾಯವಾಗಿ ಸಂವಿಧಾನದ ಮೂಲಭೂತ ತತ್ವಗಳನ್ನು ಮುದ್ರಿಸಬೇಕಿದೆ ಎಂದು ಪ್ರಗತಿಪರ ಚಿಂತಕಿ ಪ್ರೊ.ಚ.ಸರ್ವಮಂಗಳ ಹೇಳಿದರು.

ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಹಾಗೂ ವಿಸ್ತರಣ ಕೇಂದ್ರ, ದಸಂಸ, ರಾಜ್ಯ ರೈತಸಂಘ ಹಾಗೂ ಯುವ ಪ್ರಗತಿಪರ ಚಿಂತಕರ ಸಂಘದಿಂದ ಮಾನಸಗಂಗೋತ್ರಿ ರಾಣಿ ಬಹದ್ದೂರ್‌ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್‌ ನೆನಪಿನಲ್ಲಿ ಬಹುಸಂಸ್ಕೃತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಮೂಲಭೂತವಾದದ ಕ್ರೌರ್ಯ: ನಮ್ಮ ಮುಂದಿನ ಸವಾಲು ಮತ್ತು ಸಾಧ್ಯತೆಗಳು ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಾವು ಏನನ್ನು ಹೇಳುತ್ತೇವೆ ಅದನ್ನು ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಂವಿಧಾನದ ಕೆಲವು ಮೂಲಭೂತ ತತ್ವಗಳನ್ನು ಸರಳವಾದ ಸೂಕ್ತಿ ಅಥವಾ ಮಂತ್ರರೂಪದಲ್ಲಿ ವಿದ್ಯಾರ್ಥಿಗಳಿಗೆ ತಿಳಿಸಬೇಕಿದೆ ಎಂದು ಹೇಳಿದರು.

ಗೌರಿ ಲಂಕೇಶ್‌ ಬಹುಸಂಸ್ಕೃತಿ ಪ್ರತೀಕವಾಗಿದ್ದು, ಸಮಾಜದಲ್ಲಿ ರೈತರು, ಮಹಿಳೆಯರು, ಮಕ್ಕಳು, ನಕ್ಸಲರು ಸೇರಿದಂತೆ ಎಲ್ಲಾ ವರ್ಗದ ಜನರ ದನಿಯಾಗಿದ್ದರು. ಆಕೆ ಸಾವಿನ ವಿರುದ್ಧವಾಗಿ ನಡೆದ ಹೋರಾಟದಲ್ಲಿ ಸ್ವಯಂಪ್ರೇರಿತವಾಗಿ ಸಾಗರೋಪಾದಿಯಲ್ಲಿ ಬಂದಿದ್ದ ಅಪಾರ ಸಂಖ್ಯೆ ಜನರೇ ಸಾಕ್ಷಿಯಾಗಿದ್ದಾರೆಂದರು.

ಸಂಸ್ಕೃತಿ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್‌ ವಿಚಾರ ಮಂಡನೆ ಮಾಡಿದರು. ಶಾಸಕ ಹಾಗೂ ರೈತ ಮುಖಂಡ ಕೆ.ಎಸ್‌.ಪುಟ್ಟಣ್ಣಯ್ಯ, ಅಂಬೇಡ್ಕರ್‌ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿ ಡಾ.ಎಸ್‌.ನರೇಂದ್ರಕುಮಾರ್‌,

ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್‌ ಕೆರಗೋಡು, ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್‌, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಹೊಸಕೋಟೆ ಬಸವರಾಜು, ಯುವ ಪ್ರಗತಿಪರ ಚಿಂತಕರ ಸಂಘದ ಅಧ್ಯಕ್ಷ ಬಿ.ಶಿವಶಂಕರ್‌, ನಿವೃತ್ತ ಪ್ರಾಂಶುಪಾಲ ಪ್ರೊ.ಹುಲ್ಕೆರೆ ಮಹಾದೇವ್‌ ಇದ್ದರು.

ಟಾಪ್ ನ್ಯೂಸ್

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.