Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Team Udayavani, Sep 20, 2024, 1:03 PM IST
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ (Mysore Dasara) ಉತ್ಸವಕ್ಕೆ ಕೆಲವೇ ದಿನಗಳಷ್ಟೇ ಬಾಕಿ ಇರುವಂತೆ, ದಸರಾ ಉದ್ಘಾಟಕರ ಹೆಸರು ಅಂತಿಮಗೊಳಿಸಲಾಗಿದೆ. ಹಿರಿಯ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ ಅವರು 2024ರ ದಸರಾ ಉದ್ಘಾಟನೆ ಮಾಡಲಿದ್ದಾರೆ.
ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.
ದಸರಾ ಉದ್ಘಾಟನೆಗೆ ಹಲವರ ಹೆಸರುಗಳು ಚರ್ಚೆಗೆ ಬಂದಿದ್ದವು. ಈ ಎಲ್ಲಾ ಚರ್ಚೆಗಳ ನಡುವೆ ಸಿಎಂ ಸಿದ್ದರಾಮಯ್ಯನವರೇ ನಾಡಿನ ಹಿರಿಯ ಸಾಹಿತಿ ಪ್ರೊ.ಹಂ.ಪ. ನಾಗರಾಜಯ್ಯ ಅವರನ್ನು ಉದ್ಘಾಟಕರಾಗಿ ಕರೆಸಿದರೆ ಹೇಗೆ ಎಂಬ ಪ್ರಸ್ತಾಪ ಮಾಡಿದ್ದರು. ಹಂಪನಾ ಜೈನ ಸಮುದಾಯಕ್ಕೆ ಸೇರಿದವರಾಗಿದ್ದು, ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಾಗೂ ಹಿರಿಯ ತಲೆಮಾರಿನ ಸಾಹಿತಿ ಎನ್ನುವ ದೃಷ್ಟಿಕೋನದಿಂದ ಅವರನ್ನು ಉದ್ಘಾಟಕರಾಗಿ ಆಯ್ಕೆ ಮಾಡಲು ಸಿಎಂ ಸಿದ್ದರಾಮಯ್ಯ ಇಚ್ಛೆ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿತ್ತು. ಈಗ ಅದರಂತೆ ಹಂಪನಾ ಅವರನ್ನೇ ಆಯ್ಕೆ ಮಾಡಲಾಗಿದೆ.
ಯಾರಿವರು ಹಂ.ಪ. ನಾಗರಾಜಯ್ಯ?
ಕನ್ನಡ ಸಾರಸ್ವತ ಲೋಕದಲ್ಲಿ ಹಂಪನಾ ಎಂದೆ ಚಿರ ಪರಿಚಿತರಾಗಿರುವ ಹಂ.ಪ. ನಾಗರಾಜಯ್ಯನವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಂಪಸಂದ್ರ ಎಂಬ ಗ್ರಾಮದಲ್ಲಿ ಅ.7, 1936 ರಲ್ಲಿ ಶಾನುಬೋಗ ಪದ್ಮನಾಭಯ್ಯ – ಪದ್ಮಾವತಮ್ಮ ದಂಪತಿಯ ಪುತ್ರರಾಗಿ ಜನಿಸಿದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿಎ ಆನರ್ಸ್ ಪದವಿ, ಮೈಸೂರು ವಿವಿಯಲ್ಲಿ ಎಂಎ ಪದವಿ ಪಡೆದಿರುವ ಇವರು, ವಡ್ಡಾರಾಧನೆ ಸಮಗ್ರ ಅಧ್ಯಯನಕ್ಕಾಗಿ ಬೆಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. 1959ರಿಂದ ಅಧ್ಯಾಪಕ ವೃತ್ತಿ ಜೀವನ ಆರಂಭಿಸಿದ ಹಂಪನಾ ಅವರು ಮೈಸೂರಿನ ಮಹಾರಾಣಿ ಕಾಲೇಜು, ಶಿವಮೊಗ್ಗದ ಸಹ್ಯಾದ್ರಿ ಕಾಲೇಜು, ಮಂಡ್ಯ, ದಾವಣಗೆರೆ, ಬೆಂಗಳೂರಿನ ಸರ್ಕಾರಿ ಕಾಲೇಜು, ಬೆಂಗಳೂರು ವಿವಿಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇದರ ಜತೆಗೆ ಜೈನ ಸಂಶೋಧನ ಕೇಂದ್ರ, ಜೈನ ಅಧ್ಯಯನ ಸಂಸ್ಥೆ, ಕರ್ನಾಟಕ ಸರ್ಕಾರದ ಕನ್ನಡ ಸಂಸ್ಕೃತಿ ನಿರ್ದೇಶನಾಲಯಗಳ ನಿರ್ದೇಶಕರಾಗಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 14ಕ್ಕೂ ಹೆಚ್ಚು ಕೃತಿಗಳು 10ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದಿರುವ ಇವರು 2024 ದಸರಾ ಉದ್ಘಾಟನೆ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.