ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅಧ್ಯಕ್ಷರಾಗಿ ಪ್ರೊ.ರಂಗಪ್ಪ ಆಯ್ಕೆ 

Team Udayavani, Mar 22, 2018, 12:42 PM IST

m3-bharatiya.jpg

ಮೈಸೂರು: ನಲವತ್ತು ವರ್ಷಗಳ ಕಾಲ ತಾವು ಶೈಕ್ಷಣಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿರುವ ದೇಶದ ವಿಜ್ಞಾನಿಗಳು 105 ವರ್ಷಗಳ ಇತಿಹಾಸವಿರುವ ಭಾರತೀಯ ವಿಜ್ಞಾನ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ತಮ್ಮನ್ನು ಚುನಾಯಿಸಿದ್ದಾರೆ ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ ಹರ್ಷ ವ್ಯಕ್ತಪಡಿಸಿದರು.

ಭಾರತೀಯ ವಿಜ್ಞಾನ ಕಾಂಗ್ರೆಸ್‌ನ ಪರಿಷತ್ತಿನ ಸಭೆಯಲ್ಲಿ ಎಂ.ಎಸ್‌.ಸ್ವಾಮಿನಾಥನ್‌ ಮೊದಲಾದವರು ತಮ್ಮನ್ನು ಅಧ್ಯಕ್ಷರಾಗುವಂತೆ ಪ್ರಸ್ತಾಪಿಸಿದ್ದರು. ಇತ್ತೀಚೆಗೆ ಮಣಿಪುರದ ಇಂಫಾಲದಲ್ಲಿ ನಡೆದ 105ನೇ ವಿಜ್ಞಾನ ಕಾಂಗ್ರೆಸ್‌ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚಲಾವಣೆಯಾದ 59 ಮತಗಳಲ್ಲಿ 2 ಮತಗಳು ತಿರಸ್ಕೃತಗೊಂಡರೆ, ಉಳಿದ 57 ಮತಗಳೂ ತಮಗೇ ಬಂದಿವೆ ಎಂದರು.

ಇದರಿಂದ ಮುಂದಿನ ಮೂರು ವರ್ಷಗಳ ಕಾಲ ಭಾರತೀಯ ವಿಜ್ಞಾನ ಕಾಂಗ್ರೆಸ್‌ನಂತಹ ಅತಿ ದೊಡ್ಡ ಸಂಸ್ಥೆಯನ್ನು ಮುನ್ನಡೆಸುವ ಅವಕಾಶ ದೊರೆತಿದೆ. ಸಿ.ಎನ್‌.ಆರ್‌.ರಾವ್‌, ಕಸ್ತೂರಿ ರಂಗನ್‌, ರಾಜಾರಾಮಣ್ಣ, ಯು.ಆರ್‌.ರಾವ್‌ ಅವರಂತಹ ಕನ್ನಡಿಗ ಹಿರಿಯ ವಿಜ್ಞಾನಿಗಳು ಮುನ್ನಡೆಸಿದ್ದ ಸಂಸ್ಥೆಯ ಅಧ್ಯಕ್ಷ ಸ್ಥಾನ ಮತ್ತೂಮ್ಮೆ ಕರ್ನಾಟಕಕ್ಕೆ ದೊರೆತಿರುವುದು ಹೆಮ್ಮೆಯ ವಿಚಾರ. ಇದಕ್ಕಾಗಿ ವಿಜ್ಞಾನಿಗಳ ಸಮೂಹಕ್ಕೆ ನಾನು ಋಣಿಯಾಗಿದ್ದೇನೆ. ಮುಂದಿನ ಮೂರು ವರ್ಷಗಳ ಕಾಲ ಸಕ್ರಿಯವಾಗಿ ವಿಜ್ಞಾನ ಕ್ಷೇತ್ರದ ವಿಷಯಗಳಲ್ಲಿ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ನಡುವೆ ಸಂಪರ್ಕ ಸೇತುವಾಗಿ ಕೆಲಸ ಮಾಡುವುದಾಗಿ ಹೇಳಿದರು.

ಮೈಸೂರಿನಲ್ಲಿ ನಡೆದ 103ನೇ ಭಾರತೀಯ ವಿಜ್ಞಾನ ಕಾಂಗ್ರೆಸ್‌ನಲ್ಲಿ ಸಾರ್ಕ್‌ ದೇಶಗಳ ವಿಜ್ಞಾನಿಗಳನ್ನು ಒಳಗೊಂಡಿರಲಿಲ್ಲ, ತಮ್ಮ ಅವಧಿಯಲ್ಲಿ ಮತ್ತೂಮ್ಮೆ ಕರ್ನಾಟಕದಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್‌ ನಡೆಸಿ ಈ ದೇಶಗಳ ವಿಜ್ಞಾನಿಗಳನ್ನು ಒಳಗೊಳ್ಳುವ ಆಸೆ ಇದೆ. ತಮ್ಮ ಅವಧಿಯಲ್ಲಿ ಯುವ ಜನಾಂಗವನ್ನು ವಿಜ್ಞಾನ ಕ್ಷೇತ್ರದತ್ತ ಉತ್ತೇಜಿಸುವ ಕೆಲಸ ಮಾಡುವುದಾಗಿ ತಿಳಿಸಿದರು.

ಚಾಮರಾಜ ವಿಧಾನಸಭಾ ಕ್ಷೇತ್ರಗಳಲ್ಲಿ ಕಣದಲ್ಲಿ ಉಳಿಯುವ ಎಲ್ಲರೂ ನನ್ನ ಪ್ರತಿಸ್ಪರ್ಧಿಗಳೆ, ನನ್ನ ವಿರುದ್ಧ ಸ್ಪರ್ಧೆ ಮಾಡುವ ಎಲ್ಲರನ್ನೂ ಸಮಾನವಾಗಿಯೇ ಸ್ವೀಕರಿಸುತ್ತೇನೆ. ಅವರು ಹೆಚ್ಚು, ಇವರು ಹೆಚ್ಚು ಎಂದು ನೋಡಲು ಹೋಗಲ್ಲ. ಒಳ್ಳೆ ಕೆಲಸ ಮಾಡಬೇಕು ಎಂದು ರಾಜಕಾರಣಕ್ಕೆ ಬಂದಿದ್ದೇನೆ. ಆದರೆ, ನನ್ನ ವಿರುದ್ಧ ಇಲ್ಲ ಸಲ್ಲದ್ದನ್ನು ಹೇಳುತ್ತಿದ್ದಾರೆ. ಆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನಗೆ ಒಂದು ಅವಕಾಶ ಕೊಡಿ, ಕೇವಲ ಎರಡು ವರ್ಷಗಳಲ್ಲಿ ಏನೆಲ್ಲಾ ಮಾಡಬಹುದು ಎಂಬುದನ್ನು ತೋರಿಸುತ್ತೇನೆ.
-ಪ್ರೊ.ಕೆ.ಎಸ್‌.ರಂಗಪ್ಪ, ಚಾಮರಾಜ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ

ಟಾಪ್ ನ್ಯೂಸ್

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.