ದಸರಾ ಕ್ರೀಡಾಕೂಟಕ್ಕೆ ಸಂಜೆಯೊಳಗೆ ಪ್ರಚಾರ ನಡೆಸಿ

Team Udayavani, Sep 27, 2019, 5:26 PM IST

mysuru-tdy-2

ಕೆ.ಆರ್‌.ನಗರ: ಗ್ರಾಮೀಣ ದಸರಾ ಕ್ರೀಡಾ ಕೂಟ ಪಟ್ಟಣದ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಸಮಯದ ಅಭಾವ ಇರುವುದರಿಂದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಇಂದು (ಗುರುವಾರ) ಸಂಜೆಯೊಳಗೆ ಪ್ರತಿ ಗ್ರಾಮದಲ್ಲೂ ಈ ವಿಚಾರವಾಗಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಎಂದು ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಗಿರೀಶ್‌ ಆದೇಶಿಸಿದರು.

ತಾಲೂಕು ಪಂಚಾಯ್ತಿ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ಗುರುವಾರ ನಡೆದ ಗ್ರಾಮೀಣ ದಸರಾ ಉಪ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ದಸರಾ ಕ್ರೀಡಾಕೂಟದಲ್ಲಿ 25 ವರ್ಷ ಮೇಲ್ಪಟ್ಟ ಪುರುಷರಿಗೆ ಕೆಸರು ಗದ್ದೆ ಓಟ, ಗೋಣಿಚೀಲದ ಒಳಗೆ ಕಾಲಿಟ್ಟು ಓಡುವುದು, ಗೊಬ್ಬರದ ಮೂಟೆ ಹೊತ್ತು ಓಡುವ ಸ್ಪರ್ಧೆ, ಮೂರು ಕಾಲಿನ ಓಟ ಮತ್ತು ಗುಂಡು ಎತ್ತುವ ಸ್ಪರ್ಧೆ ಆಯೋಜಿಸಲಾಗಿದೆ.

ಜೊತೆಗೆ 25 ವರ್ಷ ಮೇಲ್ಪಟ್ಟ ಮಹಿಳೆಯರಿಗೂ ಚಮಚದಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು ಓಡುವ ಸ್ಪರ್ಧೆ, ನೀರಿನ ಬಿಂದಿಗೆ ಹೊತ್ತು ಓಡುವುದು, ಗೋಣಿ ಚೀಲದ ಓಟ, ನೀರು ತುಂಬಿದ ಮೂರು ಮಡಕೆ ಹೊತ್ತು ಓಡುವುದು ಮತ್ತು ಒಂಟಿ ಕಾಲಿನ ಓಟ ಆಯೋಜಿಸಲಾಗಿದೆ ಎಂದು ತಾಪಂ ಇಒ ಗಿರೀಶ್‌ ತಿಳಿಸಿದರು.

ಗ್ರಾಮೀಣ ಮತ್ತು ರೈತ ದಸರಾ ಉಪ ಸಮಿತಿ ಅಧ್ಯಕ್ಷ ಜಿ.ಎಸ್‌.ರಮೇಶ್‌ಕುಮಾರ್‌ ಮಾತನಾಡಿ, ಗ್ರಾಮೀಣ ದಸರಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ತಾಲೂಕು ಮಟ್ಟದ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು. ಪ್ರತಿಯೊಬ್ಬ ಅಧಿಕಾರಿಯೂ ತಮಗೆ ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದರು.

ನಿರ್ಲಕ್ಷ್ಯ ಸಹಿಸಲ್ಲ: ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಿ ದಸರಾ ಕಾರ್ಯಕ್ರಮಗಳು ಹಳ್ಳಿಯ ಜನರನ್ನು ತಲುಪುವಂತೆ ನೋಡಿಕೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸರ್ಕಾರಿ ನಿಯಮಾನುಸಾರವೇ ಗ್ರಾಮೀಣ ದಸರಾ ಕಾರ್ಯಕ್ರಮಗಳು ನಡೆಯಬೇಕು. ವಿಶಿಷ್ಟ ಮತ್ತು ವಿಭಿನ್ನವಾಗಿ ದಸರಾ ಆಚರಿಸಲು ನಮ್ಮೊಂದಿಗೆ ಸಾರ್ವಜನಿಕರು ತಮ್ಮ ಸಲಹೆ ಮತ್ತು ಸಹಕಾರ ನೀಡಬೇಕು ಎಂದು ಕೋರಿದರು.

7 ಲಕ್ಷ ರೂ.ಬಿಡುಗಡೆ: ದಸರಾ ಆಚರಣೆಗಾಗಿ ಪ್ರತಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಒಂದು ಲಕ್ಷ ರೂ. ಮತ್ತು ಪುರಸಭೆಗೆ ಒಂದು ಲಕ್ಷ ಸೇರಿದಂತೆ ಕೆ.ಆರ್‌.ನಗರ ತಾಲೂಕಿಗೆ 7 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ ಅಧ್ಯಕ್ಷರು, ಇಂದಿನ ಸಭೆಗೆ ಹಾಜರಾಗದವರ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಲಾಗುತ್ತದೆ ಎಂದು ತಿಳಿಸಿದರು.

30ರಂದು ಗ್ರಾಮೀಣ ದಸರಾ: ತಾಲೂಕು ಕೇಂದ್ರದಲ್ಲಿ ಸೆ.30ರಂದು ಸೋಮವಾರ ಗ್ರಾಮೀಣ ದಸರಾ ನಡೆಯಲಿದ್ದು ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಹೊರ ವಲಯದಲ್ಲಿರುವ ತೋಪಮ್ಮನವರ ದೇವಾಲಯದ ಬಳಿಯಿಂದ ನಾಡದೇವತೆ ಚಾಮುಂಡೇಶ್ವರಿ ಮೆರವಣಿಗೆ ನಡೆಸಲಿದೆ. ಈ ಸಂಧರ್ಭದಲ್ಲಿ 5 ಕಲಾ ತಂಡಗಳು, 5 ಸ್ತಬ್ಧಚಿತ್ರಗಳು ಮತ್ತು ಪೂರ್ಣಕುಂಭದೊಂದಿಗೆ ಬಯಲು ರಂಗ ಮಂದಿರವರೆಗೆ ಮೆರವಣಿಗೆ ನಡೆಸಿ ನಂತರ 11 ಗಂಟೆಗೆ ವೇದಿಕೆ ಕಾರ್ಯ ಕ್ರಮ ನಡೆಸಲಾಗುತ್ತದೆ ಎಂದು ಅವರು ಪ್ರಕಟಿಸಿದರು.

ಮನೆಹಬ್ಬದಂತೆ ಆಚರಿಸಿ: ಸಮಿತಿಯ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್‌ ಮಾತ ನಾಡಿ, ದಸರಾ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಅರ್ಪಣಾ ಮನೋಭಾವದಿಂದ ಪಾಲ್ಗೊಂಡು ಯಾವುದೇ ಸಮಸ್ಯೆಗಳಿದ್ದಲ್ಲಿ ನಮ್ಮ ಗಮನಕ್ಕೆ ತರಬೇಕು. ನಮ್ಮ ಮನೆಯ ಹಬ್ಬದಂತೆ ನಾಡ ಹಬ್ಬವನ್ನು ಆಚರಿಸೋಣ ಎಂದು ಹೇಳಿದರು.

ಸಮಿತಿಯ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್‌, ಉಪ ತಹಸೀಲ್ದಾರ್‌ ಎಂ.ಎಸ್‌. ಯದುಗಿರೀಶ್‌, ಬಿಜೆಪಿ ಮುಖಂಡರಾದ ಕುಪ್ಪೆಪ್ರಕಾಶ್‌, ಕಗ್ಗುಂಡಿಕುಮಾರ್‌, ಮಾರ್ಕಂಡೇಯಸ್ವಾಮಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.