ಕಾಂಗ್ರೆಸ್‌ ಪರ ಪ್ರಗತಿಪರ ಸಾಹಿತಿಗಳ ಪ್ರಚಾರ


Team Udayavani, Apr 14, 2018, 12:52 PM IST

m5-congress.jpg

ಮೈಸೂರು: ವಿಧಾನಸಭೆ ಚುನಾವಣಾ ಕಣ ದಿನೇದಿನೇ ರಂಗೇರುತ್ತಿದ್ದು, ಸಾಹಿತಿಗಳು, ಪ್ರಗತಿಪರ ಚಿಂತಕರು ಶುಕ್ರವಾರ ಮೈಸೂರಿನಲ್ಲಿ ಕಾಂಗ್ರೆಸ್‌ ಪರವಾಗಿ ಚುನಾವಣಾ ಪ್ರಚಾರ ಮಾಡಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ರಾಮಕೃಷ್ಣನಗರದ ಆಂದೋಲನ ವೃತ್ತದಲ್ಲಿ ಆಯೋಜಿಸಿದ್ದ ಸಂವಿಧಾನ ಉಳಿವಿಗಾಗಿ, ಕೋಮುವಾದದ ಅಳಿವಿಗಾಗಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ ಎಂಬ ಘೋಷಣೆಯೊಂದಿಗೆ ಜನ-ರಾಜಕಾರಣ ಪ್ರಚಾರಾಂದೋಲನಕ್ಕೆ ಸಾಹಿತಿ ಡಾ.ಕೆ.ಮರುಳಸಿದ್ದಪ್ಪ, ಡಾ.ಎಸ್‌.ಜಿ.ಸಿದ್ದರಾಮಯ್ಯ, ಮುಖ್ಯಮಂತ್ರಿ ಚಂದ್ರು ಸೇರಿದಂತೆ ಇನ್ನಿತರರ ಸಾಹಿತಿಗಳು ಹಾಗೂ ಪ್ರಗತಿಪರ ಚಿಂತಕರು ಚಾಲನೆ ನೀಡಿದರು.

ಅಧೈರ್ಯ, ಆತಂಕವಿದೆ: ಡಾ.ಕೆ.ಮರುಳಸಿದ್ದಪ್ಪ ಮಾತನಾಡಿ, ಕಳೆದ 70 ವರ್ಷಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ ದೇಶದ ಜನತೆ ಜೀವನ ನಡೆಸುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ದುರ್ಬಲರು, ಮಹಿಳೆಯರು, ಶೋಷಿತರು, ಬಡವರಿಗೆ ದಿನದಿಂದ ದಿನಕ್ಕೆ ಅಧೈರ್ಯ, ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ 8 ವರ್ಷದ ಬಾಲಕಿಯ ಮೇಲೆ ಕಿಡಿಗೇಡಿಗಳು ದೇವಸ್ಥಾನದಲ್ಲಿ ಅತ್ಯಾಚಾರವೆಸಗಿ ಆಕೆಯ ಹತ್ಯೆ ಮಾಡಿದ್ದು, ನಿಜಕ್ಕೂ ತಲೆತಗ್ಗಿಸುವ ಸಂಗತಿಯಾಗಿದೆ.

ಇಂತಹ ಕೊಲೆಗಡುಕರ ಪರವಾಗಿ ಬಿಜೆಪಿ ಹೋರಾಟ ಮಾಡುತ್ತಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮತದಾರರು ಸಿದ್ದರಾಮಯ್ಯ ಹಾಗೂ ಬಿ.ಎಸ್‌.ಯಡಿಯೂರಪ್ಪ ಹಾಗೂ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಮಾದರಿಯನ್ನಾಗಿಟ್ಟುಕೊಂಡು ಗಮನಿಸಿದರೆ ಯಾವುದು ಉತ್ತಮ ಸರ್ಕಾರವೆಂಬುದು ತಿಳಿಯಲಿದೆ ಎಂದು ಟೀಕಿಸಿದರು.

ಈ ಚುನಾವಣೆ ನಿರ್ಣಾಯಕ: ದೇಶದ ಯಾವುದೇ ರಾಜ್ಯದಲ್ಲಿ ಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಜೈಲು ಸೇರಿದ ಉದಾಹರಣೆಯೇ ಇಲ್ಲ. ಹೀಗಾಗಿ ರಾಜ್ಯದ ಮತದಾರರು ಈ ಬಗ್ಗೆ ಎಚ್ಚೆತ್ತುಕೊಂಡು, ಚುನಾವಣೆಯಲ್ಲಿ ಮತದಾನ ಮಾಡಬೇಕಿದೆ.

ರಾಜ್ಯದ ಈ ಚುನಾವಣೆ ನಿರ್ಣಾಯಕವಾಗಿದ್ದು, ಈ ಚುನಾವಣೆಯ ಫ‌ಲಿತಾಂಶ ಮುಂದಿನ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮಬೀರಲಿದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೂಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇಶದ ಜನರೆಲ್ಲರೂ ಒಟ್ಟಾಗಿ ನಿಂತರೂ ಸಂವಿಧಾನ ಉಳಿಯುವುದಿಲ್ಲ. ಈಗಾಗಲೇ ಅದರ ಬಗ್ಗೆ ಅನೇಕರು ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದು, ಇನ್ನೂ ಕೆಲವರು ಪರೋಕ್ಷವಾಗಿ ಇಂತಹ ಹೇಳಿಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದರು.

ಮೋದಿ ಮಾತಿನಲ್ಲಿ ನಿಸ್ಸೀಮ: ಪ್ರಧಾನಿ ನರೇಂದ್ರ ಮೋದಿ ಕೇವಲ ಘೋಷಣೆ ಮತ್ತು ಮಾತಿನಲ್ಲಿ ನಿಸ್ಸೀಮರಾಗಿದ್ದು, ಮೋದಿ ಎಂದರೆ ಅವತಾರಪುರುಷ ಎಂಬ ಕಥೆಯನ್ನು ಜನರ ಮುಂದೆ ಹರಡುತ್ತಿದ್ದು, ಈ ಅವತಾರಪುರುಷ ಕಳೆದ ನಾಲ್ಕು ವರ್ಷದಲ್ಲಿ ಮಾತುಗಳನ್ನು ಬಿಟ್ಟು ಬೇರೇನನ್ನೂ ಕೊಟ್ಟಿಲ್ಲ.

ತಮ್ಮ ಸುತ್ತಲೂ ಸುಳ್ಳಿನ ಕೋಟೆಯನ್ನೇ ಕಟ್ಟಿಕೊಂಡಿದ್ದು, ಇದನ್ನು ಪ್ರಶ್ನಿಸಿದರೆ ಅವರ ವಿರುದ್ಧ ಸುಳ್ಳು ಆರೋಪ, ಹಲ್ಲೆಗಳನ್ನು ಮಾಡುವ ಅಥವಾ ಜೀವಕ್ಕೆ ಅಪಾಯವಿದೆ ಎಂಬುದು ಕಲಬುರ್ಗಿ, ಗೌರಿ ಲಂಕೇಶ್‌ ಹತ್ಯೆಗಳೇ ಬಿಂಬಿಸಿವೆ. ಈ ನಿಟ್ಟಿನಲ್ಲಿ ಕಳೆದ 5 ವರ್ಷದಲ್ಲಿ ಸ್ಥಿರ ಹಾಗೂ ಜನಪರ ಕಾರ್ಯಕ್ರಮಗಳನ್ನು ರೂಪಿಸಿರುವ ಸಿದ್ದರಾಮಯ್ಯ ಅವರ ಸರ್ಕಾರದ ಸಾಧನೆಗಳನ್ನು ಗಮನಿಸಿ ಮತದಾರರು ಮತಹಾಕಬೇಕಿದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ, ಸಾಹಿತಿ ಪೊ›.ಎಚ್‌.ಜಿ.ಸಿದ್ದರಾಮಯ್ಯ, ಚಿಂತಕ ಪೊ›.ಮಹೇಶ್‌ಚಂದ್ರ ಗುರು, ಸಾಹಿತಿಗಳಾದ ಪೊ›.ಅರವಿಂದ ಮಾಲಗತ್ತಿ, ಪೊ›.ಕೆ.ಎಸ್‌.¸‌ಗವಾನ್‌, ಪ್ರಗತಿಪರ ಚಿಂತಕ ಪ.ಮಲ್ಲೇಶ್‌, ರಂಗಾಯಣ ಮಾಜಿ ನಿರ್ದೇಶಕ ಜನಾದ‌ìನ್‌(ಜನ್ನಿ), ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರ ¸‌ೂಪತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್‌.ಶಿವರಾವ…, ಕಾಂಗ್ರೆಸ್‌ ಮುಖಂಡ ಕೆ.ಮರೀಗೌಡ ಇನ್ನಿತರರು ಹಾಜರಿದ್ದರು.

ಬಿಜೆಪಿ ಅವರೇ ಭಾರತಬಿಟ್ಟು ತೊಲಗಿ: ಕ್ವಿಟ್‌ ಇಂಡಿಯಾ ಚಳವಳಿಯಲ್ಲಿ ಬ್ರಿಟಿಷರೇ ಭಾರತಬಿಟ್ಟು ತೊಲಗಿ ಎಂದು ಹೋರಾಡಿದರೆ, ಇಂದು ಬಿಜೆಪಿ ಅವರೇ ಅಧಿಕಾರ ಬಿಟ್ಟು ತೊಲಗಿ, ಸಾಧ್ಯವಾದರೆ ದೇಶಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಹೋರಾಡಬೇಕಿದೆ ಎಂದು ಕಾಂಗ್ರೆಸ್‌ ಮುಖಂಡ ಮುಖ್ಯಮಂತ್ರಿ ಚಂದ್ರು ಟೀಕಿಸಿದರು.

ಜನ-ರಾಜಕಾರಣ ಪ್ರಚಾರಾಂದೋಲನದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಬ್ರಿಟಷರು ಏನು ಕೊಳ್ಳೆ ಹೊಡೆದರೋ ಅದನ್ನು ಬಿಜೆಪಿ ಅವರು ಮಾನವೀಯತೆ ದೃಷ್ಟಿಯಲ್ಲಿ ಕೊಳ್ಳೆ ಹೊಡೆಯುತ್ತಿದ್ದಾರೆ. ದೇಶಪ್ರೇಮದ ಹೆಸರಿನಲ್ಲಿ ದೇಶವನ್ನು ಕೊಳ್ಳೆ ಹೊಡೆಯುತ್ತಿರುವ ಬಿಜೆಪಿ ಅವರು ದೇಶಬಿಟ್ಟು ಹೋಗಬೇಕಿದೆ. ಜೆಡಿಎಸ್‌ ವಿರುದ್ಧ ಜಾತಿಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಹೋರಾಡಬೇಕಿದ್ದು,

ಬಿಜೆಪಿ ಇದೆ ಎಚ್ಚರಿಕೆ, ಜೆಡಿಎಸ್‌ ಇದೆ ಎಚ್ಚರಿಕೆ ಎಂಬ ಬೋರ್ಡ್‌ ಹಾಕಬೇಕಿದೆ. ಈ ಬಾರಿಯ ಚುನಾವಣೆ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ಚುನಾವಣೆಯಾಗದೆ, ಮೋದಿ ಮತ್ತು ಸಿದ್ದರಾಮಯ್ಯ ನಡುವಿನ ಚುನಾವಣೆ ಆಗಿದೆ. ಹೀಗಾಗಿ ರಾಜ್ಯದ ವಿಧಾನಸಬಾ ಚುನಾವಣೆ 2019ರ ಲೋಕಸಬಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ರಾಜ್ಯದಲ್ಲಿ ಸಿದ್ದರಾಮಯ್ಯ ಅಥವಾ ಅವರ ಸರ್ಕಾರವನ್ನು ಅಧಿಕಾರಕ್ಕೆ ತರದಿದ್ದರೆ ದೇಶಕ್ಕೆ ಅಪಾಯ ಎಂದರು.

ದೇಶದ ಸಂವಿಧಾನ ಮತ್ತು ಪ್ರಜಾಪ್ರ¸‌ುತ್ವಕ್ಕೆ ಸಂಚಕಾರ ಬಂದಿದ್ದು, ಕೆಲವು ಪಕ್ಷಗಳು ಸಂವಿಧಾನ ಬದಲಿಸುವ ಘೋಷಣೆಯೊಂದಿಗೆ ಆಡಳಿತ ನಡೆಸುತ್ತಿವೆ. ಹೀಗಾಗಿ ಎಲ್ಲರೂ ಒಂದಾಗಿ ಕೋಮುವಾದಿ ಪಕ್ಷಗಳನ್ನು ಅಧಿಕಾರದಿಂದ ಕಿತ್ತೂಗೆಯಬೇಕು.
-ಡಾ.ಯತೀಂದ್ರ ಸಿದ್ದರಾಮಯ್ಯ

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.