ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

Team Udayavani, Mar 5, 2020, 3:00 AM IST

karmika-

ಮೈಸೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಕಾಯಿದೆಗಳು ಹಾಗೂ ದೇಶದ ಜನರ ಐಕ್ಯತೆಗೆ ಧಕ್ಕೆ ತರುತ್ತಿರುವ ಎನ್‌ಆರ್‌ಸಿ, ಸಿಎಎ, ಎನ್‌ಪಿಆರ್‌ ಹಿಂಪಡೆಯಬೇಕು ಎಂದು ಒತ್ತಾಯಿಸಿ ಎಐಟಿಯುಸಿ ವತಿಯಿಂದ ಪ್ರತಿಭಟಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಸಮಾವೇಶಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಜನವಿರೋಧಿ, ಕಾರ್ಮಿಕ ವಿರೋಧಿ ಬಜೆಟ್‌ ಮಂಡಿಸಿದ್ದು, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತಂದು ಲೇಬರ್‌ ಕೋಡ್‌ಗಳನ್ನು ಬದಲಾಯಿಸುತ್ತಿದೆ.

ಅಲ್ಲದೆ ಸೌಹಾರ್ದತೆ ಹಾಗೂ ದುಡಿಯುವ ಜನರ ಐಕ್ಯತೆಗೆ ಧಕ್ಕೆ ತರುವ ಎನ್‌ಆರ್‌ಸಿ, ಸಿಎಎ, ಎನ್‌ಪಿಆರ್‌ ಕಾಯ್ದೆ ಜಾರಿಗೊಳಿಸಿ ದೇಶದ ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಕಿಡಿಕಾರಿದರು. ಬೆಲೆ ಏರಿಕೆ, ನಿರುದ್ಯೋಗ, ಕೈಗಾರಿಕೆಗಳ ಮುಚ್ಚುವಿಕೆ, ಖಾಯಂ ಹುದ್ದೆಗಳ ಗುತ್ತಿಗೀಕರಣ, ಪುಡಿಗಾಸಿನ ವೇತನದಿಂದ ಕುಸಿಯುತ್ತಿರುವ ಆದಾಯ, ಕೈಗೆಟುಕದಿರುವ ದುಬಾರಿ ಶಿಕ್ಷಣ,

ಆರೋಗ್ಯ ಸೇವೆಗಳು, ರೈತರ ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಕುಸಿತ, ಸಬ್ಸಿಡಿಗಳ ಕಡಿತ ಇತ್ಯಾದಿ ಸಮಸ್ಯೆಗಳಿಗೆ ಕೇಂದ್ರ ಪರಿಹಾರ ನೀಡುತ್ತಿಲ್ಲ. ದಿವಾಳಿಯಾಗುತ್ತಿರುವ ಸಾರ್ವಜನಿಕ ಬ್ಯಾಂಕ್‌ಗಳ ವಿಲಿನೀಕರಣದ ಮೂಲಕ ಕಾರ್ಪೊರೇಟ್‌ ಮಾಲೀಕರಿಗೆ ಇನ್ನಷ್ಟು ಮಣೆ ಹಾಕಲು ಮುಂದಾಗಿದೆ. ಈ ಬಜೆಟ್‌ ಜನರ ಆಶೋತ್ತರಗಳಿಗೆ ಸ್ಪಂದಿಸುವ ಬದಲು ಮಾಲೀಕರಿಗೆ ಮಾತ್ರ ಒಳಿತನ್ನು ಮಾಡಲು ಹೊರಟಿದೆ.

ಇಂತಹ ಜನವಿರೋಧಿ-ಕಾರ್ಮಿಕ ವಿರೋಧಿ ಕೇಂದ್ರದ ಬಜೆಟನ್ನು ದುಡಿಯುವ ಜನರು ತಿರಸ್ಕರಿಸಬೇಕು. ಕೂಡಲೇ ಕಾರ್ಮಿಕರಿಗೆ ಹಾಗೂ ದೇಶದ ಜನರಿಗೆ ವಿರುದ್ಧವಾಗಿರುವ ಕಾಯಿದೆಗಳನ್ನು ಹಿಂಪಡೆಯಬೇಕು. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ ಇತರರಿದ್ದರು.

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.