ಮಾಜಿ ಸಂಸದ ಎಲ್‌ಆರ್‌ಎಸ್‌ ವಿರುದ್ಧ ಪ್ರತಿಭಟನೆ

Team Udayavani, Feb 25, 2020, 3:00 AM IST

maaji-samsada

ಮೈಸೂರು: ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಜನೆಗಾಗಿ ಬೆಂಗಳೂರಿಗೆ ಬರುವ ಬಲಿಜ ಜನಾಂಗದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಉದ್ದೇಶಕ್ಕಾಗಿ ಊಟ ಮತ್ತು ವಸತಿಯನ್ನು ಉಚಿತವಾಗಿ ಒದಗಿಸುತ್ತಿರುವ ಚಾಮರಾಜಪೇಟೆಯಲ್ಲಿರುವ ಆನೇಕಲ್‌ ತಿಮ್ಮಯ್ಯ ಚಾರಿಟಬಲ್‌ ಟ್ರಸ್ಟ್‌ನ ಕಟ್ಟಡವನ್ನು ಅಕ್ರಮವಾಗಿ ಬಾಡಿಗೆ ಪಡೆದು ಅತಿಕ್ರಮಿಸಿಕೊಂಡು ರಾಯಲ್‌ ಕಾಂಕರ್ಡ್‌ ಎಂಬ ತಮ್ಮ ವಿದ್ಯಾಸಂಸ್ಥೆ ನಡೆಸುತ್ತಿರುವ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಮೈಸೂರಿನ ಬಲಿಜ (ಬಣಜಿಗ) ಸಂಘ ಒತ್ತಾಯಿಸಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಯವರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿ, ಬಲಿಜ(ಬಣಜಿಗ) ಸಮುದಾಯದ ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿರುವ ಎಲ್‌.ಆರ್‌.ಶಿವರಾಮೇಗೌಡರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

2017ರ ಮೇ 26ರಂದು ಟ್ರಸ್ಟ್‌ನ ಕಟ್ಟಡವನ್ನು ಅಕ್ರಮವಾಗಿ ಬಾಡಿಗೆಗೆ ಪಡೆದು ನೋಂದಾಯಿಸಿಕೊಂಡಿದ್ದಾರೆ. ಅಂದಿನಿಂದ ಈವರೆಗೂ ಒಂದು ರೂಪಾಯಿಯನ್ನೂ ಕಟ್ಟಡ ಬಾಡಿಗೆ ನೀಡಿದೆ ಸುಮಾರು 7.5 ಕೋಟಿ ರೂಪಾಯಿಯಷ್ಟು ಬಾಡಿಗೆ ಬಾಕಿ ಉಳಿಸಿಕೊಂಡು ಕಾನೂನು ಬಾಹಿರವಾಗಿ ಮುಂದುವರಿಯುತ್ತಿದ್ದಾರೆ. 2018ರಲ್ಲಿ ಹೊಸದಾಗಿ ಚುನಾಯಿಸಲ್ಪಟ್ಟ ಟ್ರಸ್ಟಿಗಳು ಬಾಡಿಗೆ ಬಾಕಿ ಉಳಿಸಿಕೊಂಡಿರುವ ಎಲ್‌.ಆರ್‌.ಶಿವರಾಮೇಗೌಡರ ವಿರುದ್ಧ ಕಾನೂನು ಕ್ರಮ ಜರುಗಿಸಲು ತೀರ್ಮಾನಿಸಿ ವಕೀಲರ ಮೂಲಕ ನೋಟಿಸ್‌ ಜಾರಿಗೊಳಿಸಿದ್ದಾರೆ.

ಆದರೆ, ಶಿವರಾಮೇಗೌಡ ಟ್ರಸ್ಟ್‌ನ ಪದಾಧಿಕಾರಿಯೊಬ್ಬರ ವಿರುದ್ಧ ಪೊಲೀಸರಿಗೆ ಸುಳ್ಳು ದೂರು ನೀಡಿ, ಬಲಿಜ ಸಮುದಾಯದವರ ಸ್ವಾಭಿಮಾನಕ್ಕೆ ಧಕ್ಕೆ ತಂದು, ಟ್ರಸ್ಟ್‌ನ ಕಟ್ಟಡಕ್ಕೆ ಯಾವುದೇ ಬಾಡಿಗೆ ನೀಡದೆ ಅಕ್ರಮವಾಗಿ ಮುಂದುವರಿದಿದ್ದಾರೆ. ಜತೆಗೆ ಟ್ರಸ್ಟ್‌ನ ಉಳಿದ ಜಾಗವನ್ನೂ ಅತಿಕ್ರಮಿಸಿಕೊಂಡು ಅನಧಿಕೃತವಾಗಿ ವಿಸ್ತರಿಸಿರುವ ಎಲ್‌.ಆರ್‌.ಶಿವರಾಮೇಗೌಡರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಸಂಘದ ಗೌರವಾಧ್ಯಕ್ಷ ಎಚ್‌.ಎ.ವೆಂಕಟೇಶ್‌, ಕಾರ್ಯದರ್ಶಿ ಎಚ್‌.ಆರ್‌.ಗೋಪಾಲಕೃಷ್ಣ, ಖಜಾಂಚಿ ಡಿ.ನಾಗರಾಜು, ನಿರ್ದೇಶಕರಾದ ಡಿ.ಕೆ.ಸುರೇಶ್‌, ಡಿ.ಬಿ.ಚಂದ್ರಶೇಖರಯ್ಯ, ಕೆ.ಚಂದ್ರಶೇಖರ್‌, ಗುರುಮೂರ್ತಿ, ಮಹದೇವಪ್ಪ, ನಾಗರಾಜಯ್ಯ, ಎಚ್‌.ಪಿ.ಮೋಹನ್‌, ನರಸಿಂಹರಾಜು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.