ರೈತರ ಮೇಲಿನ ಗೋಲಿಬಾರ್‌ ಖಂಡಿಸಿ ಪ್ರತಿಭಟನೆ


Team Udayavani, Jun 11, 2017, 12:46 PM IST

mys2.jpg

ಮೈಸೂರು: ಮಧ್ಯಪ್ರದೇಶದಲ್ಲಿ ರೈತರ ಮೇಲೆ ನಡೆದ ಗೋಲಿಬಾರ್‌ ಖಂಡಿಸಿ ಸೋಷಲಿಸ್ಟ್‌ ಯೂನಿಟಿ ಸೆಂಟರ್‌ ಆಫ್ ಇಂಡಿಯಾ(ಎಸ್‌ಯುಸಿಐ) ಹಾಗೂ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ಸೂಕ್ತ ಪರಿಹಾರ ನೀಡಿ: ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಎಸ್‌ಯುಸಿಐ ಕಾರ್ಯಕರ್ತರು, ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್‌ ನಡೆಸಿದ ಮಧ್ಯಪ್ರದೇಶ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ರೈತರು ತಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಂಬಲ ಬೆಲೆ ನೀಡುವಂತೆ ಹಾಗೂ ಸಾಲ ಮನ್ನಾ ಮಾಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್‌ ನಡೆಸಿ, ಆರು ರೈತರ ಹತ್ಯೆ ಮಾಡಿರುವುದು ಖಂಡನೀಯ. ರೈತರ ಮೇಲೆ ನಡೆದ ಗೋಲಿಬಾರ್‌ ಬಿಜೆಪಿ ಸರ್ಕಾರಕ್ಕೆ ರೈತರ ಮೇಲಿನ ಕಾಳಜಿ ತೋರಿಸಲಿದೆ.

ಅಲ್ಲದೆ ದೇಶದ ಆದಾಯವನ್ನು ದ್ವಿಗುಣಗೊಳಿಸಿ, ಕೃಷಿ ಅಭಿವೃದ್ಧಿಯಲ್ಲಿ ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಭರವಸೆ ಮರೆತ್ತಿದ್ದು, ಗೋಲಿಬಾರ್‌ನಲ್ಲಿ ಮೃತಪಟ್ಟಿರುವ ರೈತರ ಕುಟುಂಗಳಿಗೆ ಈ ಕೂಡಲೇ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಬಿ.ರವಿ, ಸದಸ್ಯರಾದ ಎಂ.ಉಮಾದೇವಿ, ಚಂದ್ರಶೇಖರ್‌ ಮೇಟಿ, ವಿ.ಯಶೋಧರ್‌, ಸೀಮಾ, ಸಂಧ್ಯಾ, ಹರೀಶ್‌ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಗೋಲಿಬಾರ್‌ ಖಂಡನೀಯ: ನಗರದ ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಸದಸ್ಯರು ಮಧ್ಯಪ್ರದೇಶದಲ್ಲಿ ರೈತರ ಮೇಲೆ ಗೋಲಿಬಾರ್‌ ನಡೆಸಿದ ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿದರು. ರೈತರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರು.

ಆದರೆ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಾದ ಸರ್ಕಾರ ಹಾಗೂ ಅಲ್ಲಿನ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ರೈತರ ಮೇಲೆ ಗೋಲಿಬಾರ್‌ ನಡೆಸಿರುವುದು ಸರಿಯಲ್ಲ. ಹೀಗಾಗಿ ಘಟನೆಯಲ್ಲಿ ಮೃತಪಟ್ಟಿರುವ ರೈತರ ಕುಟುಂಬಗಳಿಗೆ ಕೂಡಲೇ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಗ್ರಾಮಾಂತರ ಯುವ ಕಾಂಗ್ರೆಸ್‌ ಅಧ್ಯಕ್ಷ ಮೋಸಿನ್‌ ಖಾನ್‌, ನಗರಾಧ್ಯಕ್ಷ ಅಜಯ್‌ರಾವ್‌, ನಗರ ಉಪಾಧ್ಯಕ್ಷ ರಾಜೇಂದ್ರ, ಕಾರ್ಯದರ್ಶಿ ದೀಪಕ್‌ಕುಮಾರ್‌, ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷ ಬೈರೇಗೌಡ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.