ಅತ್ಯಾಚಾರ ಖಂಡಿಸಿ ಬನ್ನೂರಿನಲ್ಲಿ ಪ್ರತಿಭಟನೆ
Team Udayavani, Apr 21, 2018, 12:37 PM IST
ಬನ್ನೂರು: ಕಾಶ್ಮೀರದಲ್ಲಿ ಬಾಲಕಿ ಮೇಲಿನ ಅತ್ಯಾಚಾರವೆಸಗಿ ಕೊಲೆಗೈದಿರುವವರಿಗೆ ಕೇಂದ್ರ ಸರ್ಕಾರ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಬನ್ನೂರಿನಲ್ಲಿ ಹಿಂದೂ ಹಾಗೂ ಮುಸ್ಲಿಂ ಸಂಘಟನೆಗಳು ಕಾವೇರಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಸದಸ್ಯ ಪದ್ಮನಾಭ್, ಅಪ್ರಾಪೆ¤ ಮೇಲೆ ನಿರಂತರ 3 ದಿನಗಳ ಕಾಲ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಕೃತ್ಯ ಖಂಡನೀಯ. ಅಪರಾಧಿಗಳಿಗೆ ವಿಧಿಸುವ ಶಿಕ್ಷೆಯಿಂದ ಮುಂದೆ ಯಾರೂ ಯಾವ ಹೆಣ್ಣುಮಕ್ಕಳ ಮೇಲೂ ಅತ್ಯಾಚಾರ ಮಾಡಲು ಮುಂದಾಗಬಾರದು.
ಅಂತಹ ಶಿಕ್ಷೆ ವಿಧಿಸಬೇಕೆಂದರು. ದೇಶದಲ್ಲಿ ಮುಸ್ಲಿಂ ಹಾಗೂ ಹಿಂದೂಗಳು ಅಣ್ಣ ತಮ್ಮಂದಿರ ಹಾಗೇ ಬದುಕುತ್ತಿದ್ದೇವೆ. ಯಾವ ಮಕ್ಕಳಿಗೆ ಅನ್ಯಾಯವೆಸಗಿದರೂ ಸುಮ್ಮನೆ ಬಿಡಲ್ಲವೆಂದು ಎಚ್ಚರಿಸಿದರು.
ಪುರಸಭೆಯ ಮಾಜಿ ಸದಸ್ಯ ಡಾ. ಬಿ.ಕೆ.ಜ್ಞಾನಪ್ರಕಾಶ್ ಮಾತನಾಡಿ, ಬಾಲಕಿ ಮೇಲೆ ಅತ್ಯಾಚಾರ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಅತ್ಯಾಚಾರ ಎಸಗಿದ ಯಾರೇ ಆದರೂ ಅವರಿಗೆ ಗಂಭೀರ ಶಿಕ್ಷೆ ವಿಧಿಸಬೇಕು. ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡುವುದು ಬೇಡ. ನರೇಂದ್ರ ಮೋದಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದರು.
ಪುರಸಭೆ ನಾಮ ನಿರ್ದೇಶಿತ ಸದಸ್ಯ ಸೈಯದ್ ಯಾಹಿಯಾ ಮಾತನಾಡಿ, ಹೆಣ್ಣುಮಕ್ಕಳ ಭದ್ರತೆ ವ್ಯವಸ್ಥೆ ಹೇಗೆ ಎನ್ನುವುದು ಪೋಷಕರಿಗೆ ಬಲು ದೊಡ್ಡ ಸಮಸ್ಯೆಯಾಗಿದೆ. ಇದು ಕೊನೆಯಾಗಬೇಕಾದರೆ ಅತ್ಯಾಚಾರವೆಸಗಿದ ಆರೋಪಿಗಳಿಗೆ ಗಲ್ಲುಶಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿದರು.
ಸ್ಥಳಕಾಗಮಿಸಿದ ನಾಡ ಕಚೇರಿ ಉಪ ತಹಶೀಲ್ದಾರ್ ರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಮುನಾವರ್ ಪಾಷಾ, ಅಜೀಜುಲ್ಲಾ, ಸಲೀಂ, ಪುರಸಭೆ ಉಪಾಧ್ಯಕ್ಷ ರಾಮಲಿಂಗು, ಆರೀಫ್, ಡಿ. ಪದ್ಮನಾಭ್, ಡಾ. ಬಿ.ಕೆ.ಜ್ಞಾನಪ್ರಕಾಶ್, ಮಾಕನಹಳ್ಳಿ ಚೆನ್ನಮಾಯೀಗೌಡ, ಯುವ ಮುಖಂಡ ಶಿವು, ನಯಾಜ್ ಉಲ್ಲಾ, ಕೊಡಗಹಳ್ಳಿ ಧನಂಜಯ್, ಸತೀಶ್ ನಾಯ್ಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.