ಭೂಮಿ ನೀಡುವಂತೆ ಒತ್ತಾಯಿಸಿ ಮಾಜಿ ಸೈನಿಕರ ಒಕ್ಕೂಟದ ವತಿಯಿಂದ  ಪ್ರತಿಭಟನೆ


Team Udayavani, Sep 7, 2021, 6:05 PM IST

protest at mysore

ಹುಣಸೂರು :ಭೂಮಿ ನೀಡುವಂತೆ ಒತ್ತಾಯಿಸಿ ಮಾಜಿ ಸೈನಿಕರ ಒಕ್ಕೂಟದ ವತಿಯಿಂದ  ಅರಸು ಪುತ್ಥಳಿ ಎದುರು ಹೆದ್ದಾರಿ ತಡೆದು ಪ್ರತಿಭಟನೆ ನಡೆಯಿತು.

ನಗರದ ಹಳೆ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಮಾಜಿ ಸೈನಿಕರು ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಮಾಜಿ ಸೈನಿಕರು  ಅಥವಾ ಅವರ ಅವಲಂಬಿತರಿಗೆ ನೀಡಬೇಕಿರುವ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿದರು.

ಮೈಸೂರು ಮತ್ತು  ಕೊಡಗು ಜಿಲ್ಲೆಗಳಿಂದ ಆಗಮಿಸಿದ್ದ ಮಾಜಿ ಸೈನಿಕರು ದೇವರಾಜ ಅರಸು ಪುತ್ಥಳಿವರೆಗೆ ಮೌನ ಮೆರವಣಿಗೆ ನಡೆಸಿದರು.ಅಲ್ಲಿ ಕೆಲ ಹೊತ್ತು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ ಹೆದ್ದಾರಿ ಬಂದ್ ಆಗಿದ್ದರಿಂದ ಸ್ಥಳಕ್ಕಾಗಮಿಸಿದ ಪೋಲೀಸರು ರಸ್ತೆ ತಡೆ ನಡೆಸುವಂತಿಲ್ಲವೆಂಬ ಹೇಳಿಕೆಯಿಂದ ಕೋಪಗೊಂಡ ಮಾಜಿ ಸೈನಿಕರು ಭೂಮಿ ಮಂಜೂರಾತಿ ಮಾಡುವ ಲಿಖಿತ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಪಟ್ಟು ಹಿಡಿದರು.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಇನ್ಸ್ ಪೆಕ್ಟರ್ ರವಿ. ಎಸ್.ಐ ಲತೇಶ್ ಕುಮಾರ್  ಹೆದ್ದಾರಿಯಲ್ಲಿ ರಸ್ತೆ ತಡೆ ಮಾಡಿದಲ್ಲಿ ತುರ್ತು ಸಂದರ್ಭದಲ್ಲಿ ಹೋಗುವವರಿಗೆ ತೊಂದರೆಯಾಗಲಿದೆ ಎಂದರು.

ಮೊದಲೇ ಅನುಮತಿ ಪಡೆದಿರಬೇಕೆಂಬ ಮಾತಿಗೆ ಮಡಿಕೇರಿಯಲ್ಲೇ ಹೆದ್ದಾರಿ ತಡೆ ಮಾಡುತ್ತೇವೆ ತಾಲೂಕು ಅನುಮತಿ ಏಕೆ ಬೇಕು. ನಮ್ಮನ್ನು ಅರೆಸ್ಟ್ ಬೇಕಾದರೆ ಮಾಡಿರೆಂದು ಪಟ್ಟು ಹಿಡಿದರು.

ಹೆದ್ದಾರಿ ಬಂದ್ ಆಗಿರುವ ಬಗ್ಗೆ ಮಾಹಿತಿ ಪಡೆದ ಡಿವೈಎಸ್ ಪಿ ರವಿಪ್ರಸಾದ್ ಸ್ಥಳಕ್ಕಾಗಮಿಸಿ ಪ್ರತಿಭಟನಾ ನಿರತ ಮಾಜಿ ಸೈನಿಕರನ್ನು ಮನವೊಲಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ:ಇಲಾಖೆಯಲ್ಲಿನ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ಮೊದಲ ಗುರಿ ; ಸಚಿವ ಕೋಟ

ನಂತರ ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿಯವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ನಿಗದಿತ  ಗಡುವಿನೊಳಗೆ ಭೂಮಿ ಮಂಜೂರಾತಿ ಮಾಡಿಕೊಡಬೇಕು ಇಲ್ಲದಿದ್ದಲ್ಲಿ ಅನಿವಾರ್ಯವಾಗಿ ಮತ್ತೆ ಪ್ರತಿಭಟನೆ ಹಾದಿ ಹಿಡಿಯುತ್ತೇವೆಂದರು.

ಮನವಿ ಸ್ವೀಕರಿಸಿದ ಎಸಿ

ಮಾಜಿ ಸೈನಿಕರಿಗೆ ಸಿಗಬೇಕಾದ ಸೌಲಭ್ಯ ಕಲ್ಪಿಸಬೇಕಾಗಿರುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು. ಈ ಬಗ್ಗೆ ಶ್ರೀಘ್ರದಲ್ಲೇ ಉಪ ವಿಭಾಗದ ತಹಸೀಲ್ದಾರ್ ಗಳ ಸಭೆ ನಡೆಸಿ. ವಸ್ತು ಸ್ಥಿತಿಯ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದೆಂಬ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆಯಲ್ಲಿ ಮಾಜಿ ಸೈನಿಕರಾದ ಸತ್ಯ ಪೌಡೇಶನ್ ಅಧ್ಯಕ್ಷ ಸತ್ಯಪ್ಪ ನೇತೃತ್ವದಲ್ಲಿ ಹುಣಸೂರು, ಹೆಚ್.ಡಿ.ಕೋಟೆ, ಪಿರಿಯಾಪಟ್ಟಣ, ಕೊಡಗುಜಿಲ್ಲೆಯ ಕುಶಾಲನಗರ ಮತ್ತಿತರ ಕಡೆಗಳಿಂದ ಆಗಮಿಸಿದ್ದ 150 ಕ್ಕೂ ಹೆಚ್ಚು ಮಾಜಿ ಸೈನಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.