ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
Team Udayavani, Jun 14, 2017, 1:10 PM IST
ಮೈಸೂರು: ಪೋಷಕರಿಂದ ಹೆಚ್ಚಿನ ಶುಲ್ಕ ಪಡೆಯುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ವಜನಾಂಗ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಹುತೇಕ ಖಾಸಗಿ ಶಾಲೆಗಳು ಪೋಷಕರಿಂದ ಸಾಕಷ್ಟು ಶುಲ್ಕ ಸಂಗ್ರಹಿಸುವ ಮೂಲಕ ಸುಲಿಗೆ ಮಾಡುತ್ತಿವೆ. ಇದರಿಂದಾಗಿ ಇಂದು ಶಿಕ್ಷಣ ವ್ಯಾಪಾರೀಕರಣವಾಗಿದ್ದು, ಸಮವಸ್ತ್ರ, ಪಠ್ಯ ಮತ್ತು ಪಠ್ಯೇತರ ವಸ್ತುಗಳ ಖರೀದಿಯಲ್ಲಿ ಪೋಷಕರಿಗೆ ಭಾರೀ ಹೊಡೆತ ಬಿದ್ದಿದೆ. ಹೀಗಾಗಿ ಪೋಷಕರನ್ನು ವಂಚಿಸಿ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ತಪ್ಪಿತಸ್ಥ ಶಾಲೆಗಳು ಮತ್ತು ಶಿಕ್ಷಣಾಧಿಕಾರಿಗಳ ವಿರುದ್ಧ ಸಿಐಡಿ ಅಥವಾ ಎಸಿಬಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಅಲ್ಲದೆ ಸರ್ಕಾರ ಖಾಸಗಿ ಶಾಲೆಗಳ ಉಪಟಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಖಾಸಗಿ ಶಾಲಾ ಕಾಲೇಜುಗಳಲ್ಲಿ, ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಪೈಪೋಟಿ ಹಾಗೂ ಇತರೆ ಶುಲ್ಕ ಪಡೆಯುವುದನ್ನು, ಪಠ್ಯ ಪುಸ್ತಕಗಳ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವೇ ಸಿಇಟಿ ಮಾದರಿಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಂದ ಬ್ಯಾಂಕ್ ಮೂಲಕ ಹಣ ಕಟ್ಟಿಸಿಕೊಂಡು ನಂತರ ಸಂಬಂಧಿಸಿದ ಶಾಲಾ, ಕಾಲೇಜುಗಳಿಗೆ ಹಣ ವರ್ಗಾಯಿಸಬೇಕು.
ಅಲ್ಲದೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಉಪ ನಿರ್ದೇಶಕರ ಆದೇಶದಂತೆ ಸರ್ಕಾರಿ, ಸರ್ಕಾರಿ ಅನುದಾನಿತ, ಸರ್ಕಾರಿ ಅನುದಾನ ರಹಿತ, ಸಿಬಿಎಸ್ಸಿ ಶಾಲೆಗಳಲ್ಲಿ ನಾಲ್ಕು ಬಗೆಯ ಬಣ್ಣದ ಸಮವಸ್ತ್ರಗಳು ಎಲ್ಲಾ ಕಡೆಗಳಲ್ಲೂ ಸಿಗುವಂತೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವೇದಿಕೆ ರಾಜಾಧ್ಯಕ್ಷ ವೇಣುಗೋಪಾಲ್, ಎಲ್.ಮಹದೇವಪ್ಪ, ಪಿ.ಮಹದೇವ್, ಅಕ್ರಂಪಾಷ, ಮದೀನ್ ವುಲ್ಲಾ ಷರೀಫ್, ಸೋಮೇಗೌಡ, ಹೊನ್ನೇಗೌಡ, ಎಚ್.ವಿ.ಪರಮೇಶ್ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.