ತಡೆಗೋಡೆ ದುರಸ್ತಿಗಾಗಿ ಪ್ರತಿಭಟನೆ 


Team Udayavani, Nov 21, 2017, 1:08 PM IST

m5-tadegode.jpg

ಹುಣಸೂರು: ಲಕ್ಷ್ಮಣತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ತಡೆಗೋಡೆ ಮುರಿದು ಬಿದ್ದು ಅಪಾಯ ತಂದೊಡ್ಡಿದ್ದರೂ ದುರಸ್ತಿ ಮಾಡದಿರುವುದನ್ನು ಖಂಡಿಸಿ, ತಾಲೂಕಿನ ಕಸಬಾ ಹೋಬಳಿಯ ರಾಮಪಟ್ಟಣ ಗ್ರಾಮದ ಬಳಿ ಹಳ್ಳಿಗರು ಸೇತುವೆ ಮೇಲೆ ಟ್ರ್ಯಾಕ್ಟರ್‌ನಲ್ಲಿ ಮಣ್ಣು ತಂದು ಸುರಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನೇತ್ರಾವತಿ, ತಂಬಾಕು ಬೆಳೆಗಾರರ ಕ್ಷೇಮಾಭಿವದ್ಧಿ ಸಂಘದ ಮಾಜಿ ಅಧ್ಯಕ್ಷ ಉಂಡುವಾಡಿ ಚಂದ್ರೇಗೌಡ ಮಾತನಾಡಿ, ಮಾಜಿ ಸಚಿವ ದಿ.ಎಚ್‌.ಎಲ್‌.ತಿಮ್ಮೇಗೌಡರ ಅವಧಿಯಲ್ಲಿ ಬನ್ನಿಕುಪ್ಪೆ ಗ್ರಾಪಂ ವ್ಯಾಪ್ತಿಯ ಸುಮಾರು 25 ಗ್ರಾಮಗಳ ತಂಬಾಕು ಬೆಳೆಗಾರರಿಗೆ ಕಟ್ಟೆಮಳಲವಾಡಿಯ ತಂಬಾಕು ಹರಾಜು ಮಾರುಕಟ್ಟೆಗೆ ತೆರಳಲು ಸಮೀಪದ ರಸ್ತೆಯಾಗಿ 25 ವರ್ಷಗಳ ಹಿಂದೆ ಈ ಸೇತುವೆಯನ್ನು ನಿರ್ಮಿಸಿದ್ದರು. ಸೇತುವೆಯ ಎರಡೂ ಬದಿಯ ತಡೆಗೋಡೆಗಳು ಬಿದ್ದು ಸಂಚಾರಕ್ಕೆ ತೊಂದರೆಯಾಗಿದೆ.

ಜಿಪಂ ಎಂಜಿನಿಯರಿಂಗ್‌ ವ್ಯಾಪ್ತಿಯ ಈ ಸೇತುವೆಯ  ಮೇಲೆ ತುಂಬಾ ಹಳ್ಳಕೊಳ್ಳವಾಗಿದ್ದಾಗ ಸೇತುವೆ ಮೇಲಿನ ರಸ್ತೆಯನ್ನು ಆರ್ಧ ಭಾಗ ಮಾತ್ರ ಕಾಂಕ್ರಿಟ್‌ರಸ್ತೆ ನಿರ್ಮಿಸಿದ್ದು, ಉಳಿದರ್ಧ ಭಾಗವನ್ನು ಹಾಗೆ ಬಿಟ್ಟಿದ್ದು ಗುಂಡಿ ಬಿದ್ದಿದ್ದು ಒಡಾಡಲಾಗದ ಸ್ಥಿತಿ ತಲುಪಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಬಗ್ಗೆ ಜನಪ್ರತಿನಿಧಿಗಳು-ಅಧಿಕಾರಿಗಳಿಗೆ ತಿಳಿದಿದ್ದರೂ ಯಾವ ಕ್ರಮವಹಿಸುತ್ತಿಲ್ಲಾ, ಈ ಸೇತುವೆ  ದುರಸ್ತಿಗೆ  ಏನಾದರೂ ಅನಾಹುತ ಸಂಭವಿಸಬೇಕೆ ಎಂಬಂತಾಗಿದೆ. ಈಗಲಾದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇತ್ತ ಗಮನಹರಿಸಿ ಸೇತುವೆ ಅಭಿವದ್ಧಿಪಡಿಸಬೇಕು. ಇಲ್ಲದಿದ್ದರೆ ಸುತ್ತಮುತ್ತಲ ಗ್ರಾಮಸ್ಥರೊಡನೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರೈತರಾದ ಜಯಶೀಲೇಗೌಡ, ಪುಟ್ಟನಾಯ್ಕ ಭಾಸ್ಕರ್‌ ರಾಮೇಗೌಡ, ಮಹದೇವ್‌, ಬಸವರಾಜು, ವೆಂಕಟೇಶ್‌, ಶಂಕರೇಗೌಡ ಸೇರಿದಂತೆ ಐವತ್ತಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.