ಬೇಡಿಕೆ ಈಡೇರಿಕೆಗೆ ಪ್ರತಿಭಟನೆ


Team Udayavani, Jan 18, 2018, 5:06 PM IST

mys.jpg

ಮೈಸೂರು: ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ, ಗೋವಾ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಲ್ಯಾಪ್‌ಟಾಪ್‌ ವಿತರಿಸುವಂತೆ ಮಹಾರಾಜ ಕಾಲೇಜು ಎಸ್ಸಿ/ಎಸ್ಟಿ ವಿದ್ಯಾರ್ಥಿಗಳು ಬುಧವಾರ ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

18 ಸಾವಿರ ವೇತನ ನೀಡಿ: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯ ಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಮಾಸಿಕ 18,000 ರೂ. ವೇತನ ನೀಡಬೇಕು. 

ಮಾಸಿಕ 3,000 ರೂ. ಪಿಂಚಣಿ ಜತೆಗೆ ಸಾಮಾಜಿಕ ಭದ್ರತೆ ನೀಡಬೇಕು, ಕನಿಷ್ಠ ವೇತನ ಜಾರಿಗೆ ಬಜೆಟ್‌ನಲ್ಲಿ ಅನುದಾನ
ಘೋಷಿಸಬೇಕು, ಅಂಗನವಾಡಿ ಮತ್ತು ಬಿಸಿಯೂಟ ಯೋಜನೆಯನ್ನು ಎನ್‌ಜಿಒಗೆ ವಹಿಸುವ ಹುನ್ನಾರ ನಡೆಯುತ್ತಿದ್ದು, ಇದನ್ನು ಕೈಬಿಟ್ಟು ಪ್ರಸ್ತುತ ದುಡಿಯುತ್ತಿರುವವರಿಗೆ ಸೇವಾ ಭದ್ರತೆ ಒದಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇದಕ್ಕೂ ಮುನ್ನ
ರಾಮಸ್ವಾಮಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಎಐಯುಟಿಸಿ ಜಿಲ್ಲಾಧ್ಯಕ್ಷೆ ಪಿ.ಎಸ್‌. ಸಂಧ್ಯಾ, ಸೀಮಾ, ಕೋಮಲ, ಮಂಜುಳಾ, ಗಿರಿಜಾ ಇನ್ನಿತರರು ಪಾಲ್ಗೊಂಡಿದ್ದರು. 

ರಕ್ಷಣಾ ವೇದಿಕೆ ಪ್ರತಿಭಟನೆ: ಕನ್ನಡಿಗರನ್ನು ಹರಾಮಿಗಳು ಎಂದು ಟೀಕಿಸಿದ ಗೋವಾ ಸಚಿವ ವಿನೋದ್‌ ಪಾಲೇಕರ್‌ ವಜಾಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ನಗರದ ನ್ಯಾಯಾಲಯ ಮುಂಭಾಗದ ಗಾಂಧಿ ಪುತ್ಥಳಿ ಎದುರು ಪ್ರತಿಭಟನೆ ನಡೆಸಿದರು. ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವರಿಗೆ ತಕ್ಕ ಪಾಠ ಕಲಿಸಬೇಕು. ನೀರಿನ ವಿಚಾರದಲ್ಲಿ ತಗಾದೆ ತಗೆಯುವ ಜತೆಗೆ, ಕನ್ನಡಿಗರ ಸ್ವಾಭಿಮಾನ ಕೆಣಕಿದವರಿಗೆ ತಕ್ಕ ಪಾಠ ಕಲಿಸಲು ಮುಂದಾಗ
ಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಕೆ.ಮಾದೇಶ್‌, ಪದಾಧಿಕಾರಿಗಳಾದ ಮಂಜುನಾಥ್‌, ಕಿರಣ್‌, ಜಗದೀಶ್‌, ಸೋಮ, ಕುಶಾಲ್‌ ಭಾಗವಹಿಸಿದ್ದರು.

ನಮಗೂ ಲ್ಯಾಪ್‌ಟಾಪ್‌ ನೀಡಿ: ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜಿನ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಿರುವಂತೆ ನಮಗೂ ಲ್ಯಾಪ್‌ಟಾಪ್‌ ನೀಡಬೇಕೆಂದು ಒತ್ತಾಯಿಸಿ ಮಹಾರಾಜ ಕಾಲೇಜಿನ ಎಸ್ಸಿ/ ಎಸ್ಟಿ ವಿದ್ಯಾರ್ಥಿಗಳು ಮೈಸೂರು ವಿವಿಗೆ ಮನವಿ ಪತ್ರ ಸಲ್ಲಿಸಿದರು. ಮಹಾರಾಜ ಕಾಲೇಜು ಮೈಸೂರು ವಿಶ್ವವಿದ್ಯಾಲಯದ ಅಧೀನದಲ್ಲಿದೆ ಎಂಬ ಏಕೈಕ ಕಾರಣಕ್ಕೆ ನಮ್ಮನ್ನು ಸೌಲಭ್ಯದಿಂದ ವಂಚಿತರನ್ನಾಗಿ ಮಾಡಲಾಗಿದ್ದು, ಸರ್ಕಾರದ ಮೇಲೆ ಒತ್ತಡ ಹೇರಿ ಲ್ಯಾಪ್‌ಟಾಪ್‌ ನೀಡಬೇಕೆಂದು
ಒತ್ತಾಯಿಸಿದರು. ವಿದ್ಯಾರ್ಥಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದ ಕುಲಪತಿ ಪ್ರೊ.ಸಿ.ಬಸವರಾಜು, ಈ ಬಗ್ಗೆ ಸರ್ಕಾರಕ್ಕೆ ಪತ್ರಬರೆದು ಲ್ಯಾಪ್‌ಟಾಪ್‌ ಕೊಡುವಂತೆ ಮನವಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.