ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ
Team Udayavani, Jul 3, 2018, 12:50 PM IST
ಮೈಸೂರು: ದಿನಗೂಲಿ ನೌಕರರ ಸಂಬಂಧಿಸಿದಂತೆ ಗುತ್ತಿಗೆ ನೌಕರರನ್ನು ಕಾಯಂ ಮಾಡುವುದು, ಸಮಾನ ವೇತನ ಜಾರಿಗೊಳಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ದಿನಗೂಲಿ ನೌಕರರ ಮಹಾ ಮಂಡಲಿ ನೇತೃತ್ವದಲ್ಲಿ ನೂರಾರು ದಿನಗೂಲಿ ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗುತ್ತಿಗೆ ನೌಕರರು, 247ರ ಅನ್ವಯ ದಿನಗೂಲಿಯಿಂದ ಕಾಯಂ ಆಗಿ ಸೇವೆ ಸಲ್ಲಿಸಿದ ನೌಕರರಿಗೆ ಸುಪ್ರೀಂಕೋರ್ಟ್‌ನ ಪ್ರಕಾರ 8 ವರ್ಷಗಳ ದಿನಗೂಲಿ ಸೇವೆಯನ್ನು ಪಿಂಚಣಿಗೆ ಪರಿಗಣಿಸಬೇಕು,
ಕಾಯ್ದೆ ಅನ್ವಯ ನಿವೃತ್ತಿ ಹೊಂದಿದ ನೌಕರರಿಗೆ ಶೇ.100 ತುಟ್ಟಿ ಭತ್ಯೆ ನೀಡಬೇಕು. 30 ದಿನಗಳ ಗಳಿಕೆ ರಜೆಯನ್ನು ನಗದೀಕರಣಗೊಳಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಂಬ ಘೋಷಣಾ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಇದಕ್ಕೂ ಮುನ್ನ ನಗರದ ಪುರಭವನದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಪುರಭವನ, ಕೆ.ಆರ್.ವೃತ್ತ, ದೇವರಾಜ ಅರಸ್ ರಸ್ತೆ, ಮೆಟ್ರೋಪೋಲ್ ವೃತ್ತ, ವಿನೋಬಾ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿ, ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸರ್ಕಾರಿ ದಿನಗೂಲಿ ನೌಕರರ ಮಹಾ ಮಂಡಲಿ ಅಧ್ಯಕ್ಷ ಡಾ.ಕೆ.ಎಸ್.ಶರ್ಮ, ಜಿಲ್ಲಾಧ್ಯಕ್ಷ ಎನ್.ಗಂಗಾಧರ್, ಚಾ.ನಗರ ಜಿಲ್ಲಾಧ್ಯಕ್ಷ ರಮೇಶ್, ಮಂಡ್ಯ ಜಿಲ್ಲಾಧ್ಯಕ್ಷ ಅಪ್ಪಾಜಪ್ಪ, ಕೊಡಗು ಜಿಲ್ಲಾಧ್ಯಕ್ಷ ಜಗದೀಶ್, ಹಾಸನ ಜಿಲ್ಲಾಧ್ಯಕ್ಷ ರಂಗೇಗೌಡ, ಉಡುಪಿ ಹಾಗೂ ಮಂಗಳೂರು ಘಟಕದ ಅಧ್ಯಕ್ಷ ಜಗನ್ನಾಥ್, ಜಯಶಂಕರ್ ಸೇರಿದಂತೆ ವಿವಿಧ ಜಿಲ್ಲೆ ಹಾಗೂ ಇನ್ನಿತರ ಇಲಾಖೆಗಳ ದಿನಗೂಲಿ ನೌಕರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.