ನಮ್ಮ ಹಕ್ಕು ನೀಡದಿದ್ರೆ ಪ್ರತಿಭಟನೆ ತೀವ್ರ: ಎಚ್ಚರಿಕೆ


Team Udayavani, Aug 13, 2017, 11:40 AM IST

mys6.jpg

ಪಿರಿಯಾಪಟ್ಟಣ: ಕಳೆದ 10 ವರ್ಷಗಳಿಂದ ನಮ್ಮ ಅರಣ್ಯ ಭೂಮಿ ಹಕ್ಕಿನಡಿಯಲ್ಲಿ ವೈಯಕ್ತಿಕ ಮತ್ತು ಸಮುದಾಯಿಕ ಹಕ್ಕನ್ನು ನೀಡದೆ ಕಡೆಗಣಿಸಿದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಕರ್ನಾಟಕ ಅರಣ್ಯ ಮೂಲಭೂತ ಸಮುದಾಯ ಪ್ರತಿನಿಧಿ ಶೈಲೇಂದ್ರಕುಮಾರ್‌ ಎಚ್ಚರಿಕೆ ನೀಡಿದರು. ಪಟ್ಟಣದ ತಾಪಂ ಆವರಣದಲ್ಲಿ ರಾಜ್ಯ ಮೂಲ ಬುಡಕಟ್ಟುಗಳ ಒಕ್ಕೂಟದ ವತಿಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಮಾತನಾಡಿದರು.

ಅಷ್ಟೇ ಅಲ್ಲದೆ ತಾಲೂಕಿನ ಕರಡೀಬೊಕ್ಕೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ವಿನಾಕಾರಣ ಕಿರುಕುಳ ನೀಡುತ್ತಿದ್ದು, ಭೂ ಮಾಲೀಕರು ಶುಂಠಿ ಸೇರಿದಂತೆ ಇನ್ನಿತರ ಬೆಳೆಗಳನ್ನು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಬೆಳೆಯುತ್ತಿದ್ದರೂ ಮೌನ ತಾಳಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಗಿರಿಜನರು ತಮ್ಮ ದಿನಬಳಕೆಗಾಗಿ ಗುಡಿಸಲು ಬಳಿ ಬೆಳೆದಿರುವ ಗೆಡ್ಡೆ ಗೆಣಸನ್ನು ನಾಶಪಡಿಸಿ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸದರು.

ಮಲಗನಕೆರೆ ಗಿರಿಜನ ಹಾಡಿಯಲ್ಲಿ ಜೇನುಕುರುಬ ಸಮುದಾಯಕ್ಕೆ ಸೇರಿದ ಗೆಜ್ಜ ಎಂಬ ವ್ಯಕ್ತಿ ಗುಡಿಸಲನ್ನು ನಿರ್ಮಿಸಿಕೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿಗಳು ಅಡ್ಡಿ ಪಡಿಸುತ್ತಿರುವುದರಿಂದ ತನ್ನ ತಂದೆ ಬೆಳೆಸಿದ ಮಾವಿನ ಮರದ ಮೇಲೆ ಜೀವನ ಸಾಗಿಸುತ್ತಿದ್ದಾನೆ. ಇಂತಹ ಹಲವಾರು ರೀತಿಯ ತೊಂದರೆಗಳು ಆಗುತ್ತಿರುವ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತದ ಗಮನಕ್ಕೆ ತರಲಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.

ಆದ್ದರಿಂದ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಮಧ್ಯ ಪ್ರವೇಶಿಸಿ ನಮಗೆ ವೈಯಕ್ತಿಕ ಮತ್ತು ಸಮುದಾಯ ಹಕ್ಕುಪತ್ರಗಳನ್ನು ನೀಡದಿದ್ದರೆ ಜಂಬೂಸವಾರಿಗೆ ತೆರಳುವ ಗಜಪಡೆ ಜಾಥಾ ಕಾರ್ಯಕ್ರಮದಲ್ಲಿ ಮಾವುತರನ್ನು ಒಟ್ಟುಗೂಡಿಸಿ ಮುಖ್ಯಮಂತ್ರಿಗಳ ಎದುರಲ್ಲೇ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಗ್ರಾಪಂ ಸದಸ್ಯೆ ಜಾನಕಮ್ಮ ಮಾತನಾಡಿ, ಕಳೆದ 10 ವರ್ಷಗಳಿಂದ ಗಿರಿಜನರಿಗೆ ಮೂಲಭೂತ ಸೌಕರ್ಯ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಾರತಮ್ಯ ಮಾಡುತ್ತಿದ್ದು ಜನರು ನರಕ ಅನುಭವಿಸುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟವರು ಗಮನ ಹರಿಸಿ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಧರಣಿ ಮುಂದುವರೆಸುವುದಾಗಿ ತಿಳಿಸಿದರು. ಸಮುದಾಯದ ಕಾರ್ಯಕರ್ತರಾದ ಪುಟ್ಟ, ಪರ್ವಯ್ಯ, ಶಿವಣ್ಣ, ಇಂದ್ರಮಣಿ, ಕಿರಣ್‌, ಮಂಜುಳಾ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಉಡುಗೊರೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಉಡುಗೊರೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.