ಪಡುವಾರಹಳ್ಳಿ ಸರ್ಕಾರಿ ಶಾಲೆಗೆ ಸೌಕರ್ಯ ಕಲ್ಪಿಸಲು ಪ್ರತಿಭಟನೆ
Team Udayavani, Nov 4, 2018, 12:36 PM IST
ಮೈಸೂರು: ಪಡುವಾರಹಳ್ಳಿ ಸರ್ಕಾರಿ ಶಾಲೆಗೆ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಶ್ರೀಗಂಧ ಯುವಕರ ಸಂಘದ ಸದಸ್ಯರು ಪಡುವಾರಹಳ್ಳಿಯಲ್ಲಿರುವ ಶಾಲೆ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಪಡುವಾರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಒಂದರಿಂದ ಹತ್ತನೇ ತರಗತಿಯವರೆಗೆ ಅಂದಾಜು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಕುಡಿಯುವ ನೀರಿನ ಬೋರ್‌ವೆಲ್ ಸಹ ಕೆಟ್ಟುನಿಂತಿದೆ. ಹೀಗಿದ್ದರೂ ಸಂಬಂಧಪಟ್ಟ ಯಾವುದೇ ಅಧಿಕಾರಿಗಳು, ಜನ ಪ್ರತಿನಿಧಿಗಳು ಈ ಬಗ್ಗೆ ಕ್ರಮವಹಿಸಿಲ್ಲ.
ಇದರಿಂದಾಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಪ್ರೋತ್ಸಾಹಕವಾಗಿ ಹಲವು ಯೋಜನೆಗಳನ್ನು ರೂಪಿಸಿದ್ದರೂ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಲಕ್ಷ್ಯದಿಂದ ಈ ಶಾಲೆಯ ಮಕ್ಕಳು ಮೂಲಸೌಕರ್ಯದಿಂದ ವಂಚಿತರಾಗಿದ್ದಾರೆ.
ಕೂಡಲೇ ಶಾಲೆಗೆ ಮೂಲಭೂತ ಸೌಕರ್ಯಗಳಾದ ಕಾಂಪೌಂಡ್ ಹಾಗೂ ಬೋರ್‌ವೆಲ್ ದುರಸ್ತಿಗೊಳಿಸುವ ಜತೆಗೆ ಮಕ್ಕಳಿಗೆ ಅನುಕೂಲವಾದ ವ್ಯವಸ್ಥೆಗಳನ್ನು ಕಲ್ಪಿಸಿಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಕೀಲ ಪಡುವಾರಹಳ್ಳಿ ಎಂ. ರಾಮಕೃಷ್ಣ, ರಾಜು ಮಾರ್ಕೆಟ್, ಎಸ್. ಕಾಂತರಾಜು, ಹಿನಕಲ್ ಚಂದ್ರು, ರವಿಕುಮಾರ್, ಪುರುಷೋತ್ತಮ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.