ಸಮಭಾವದಿಂದ ಸೋಲು-ಗೆಲುವು ಸ್ವೀಕರಿಸಿ
Team Udayavani, Nov 10, 2017, 11:29 AM IST
ಮೈಸೂರು: ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನ ಮನೋಭಾವದಿಂದ ಸ್ವೀಕರಿಸಬೇಕಿದ್ದು ಯುವಜನತೆ ಕ್ರೀಡೆಗಳಲ್ಲಿ ತೊಡಗಿದರೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದರು.
ಮೈಸೂರು ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ವಿಭಾಗದಿಂದ ಆಯೋಜಿಸಲಾಗಿದ್ದ 2017-18ನೇ ಸಾಲಿನ ಮೈಸೂರು ವಿಭಾಗ ಮತ್ತು ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿ 14-17 ವರ್ಷದೊಳಗಿನ ಶಾಲಾ ಬಾಲಕ-ಬಾಲಕಿಯರ ಪಂದ್ಯಾವಳಿಯಲ್ಲಿ ಧ್ವಜಾರೋಹಣ ನೆರವೇರಿಸಿ ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಈ ವೇಳೆ ಹದಿನಾರು ಪ್ರೌಢಶಾಲೆಯಲ್ಲಿ ತಾವು ಓದುವಾಗ ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸುತ್ತಿದ್ದೆ ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು. ಹದಿನಾರು ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ತಿರುಮಲೇಶ್, ರಾಜ್ಯ ಮಟ್ಟದ 4 ವಿಭಾಗಗಳಾದ ಮೈಸೂರು, ಬೆಂಗಳೂರು, ಕಲಬುರ್ಗಿ, ಬೆಳಗಾವಿ ತಂಡಗಳ ಲೀಗ್ ಪಂದ್ಯಗಳು ಶುಕ್ರವಾರ ನಡೆಯಲಿವೆ.
ಸೆಮಿಫೈನಲ್ ಮತ್ತು ಫೈನಲ್ ಶನಿವಾರ ನಡೆಯಲಿದೆ. ರಾಜ್ಯಮಟ್ಟದಲ್ಲಿ ಆಯ್ಕೆಯಾದ 14, 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ತಂಡದ 4 ತಂಡಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗುತ್ತವೆ ಎಂದು ತಿಳಿಸಿದರು. ಆಟದ ಮೈದಾನದಲ್ಲಿ ನಾಲ್ಕು ಅಂಕಣ ಸಿದ್ಧಪಡಿಸಿ ಅಂಕಣಗಳಿಗೆ ಝಾನ್ಸಿ, ಇಳ, ಅರ್ಜುನ ಮತ್ತು ಏಕಲವ್ಯ ಹೆಸರು ಇಡಲಾಗಿದೆ.
ಶಾಸಕ ಕಳಲೆ ಕೇಶವಮೂರ್ತಿ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಬಿ.ಸಿದ್ದರಾಜು, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಜಿಲ್ಲಾಧಿಕಾರಿ ಡಿ.ರಂದೀಪ್, ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಮತ್ತಿತರರಿದ್ದರು.
ಮೊದಲ ದಿನ 32 ತಂಡ ಭಾಗಿ: 480 ಕ್ರೀಡಾಪಟುಗಳು, 64 ಕೋಚ್, ವ್ಯವಸ್ಥಾಪಕರು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ. ಬಾಲಕರಿಗೆ ಶಾಲೆಯಲ್ಲಿ ವಸತಿ ಮತ್ತು ಬಾಲಕಿಯರಿಗೆ ಛತ್ರದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.
ಮೊದಲ ದಿನ ಮೈಸೂರು ವಿಭಾಗ ಮಟ್ಟದ ಮೈಸೂರು, ಚಾಮರಾಜನಗರ ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಗಳೂರು ಉಡುಪಿ ಜಿಲ್ಲೆಗಳಿಂದ ಒಟ್ಟು 32 ತಂಡಗಳು ಪಾಲ್ಗೊಂಡಿದ್ದವು. 14 ಮತ್ತು 17 ವರ್ಷದೊಳಗಿನ ಬಾಲಕರ 16 ತಂಡ ಮತ್ತು ಬಾಲಕಿಯರ 16 ತಂಡಗಳು ನಾಕೌಟ್ ಪಂದ್ಯಗಳನ್ನು ಆಡಿ ರಾಜ್ಯ ಮಟ್ಟಕ್ಕೆ 4 ತಂಡ ಆಯ್ಕೆ ಆಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.