Mysore: ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ
Team Udayavani, Jun 11, 2024, 7:59 PM IST
ಮೈಸೂರು: ವಿಶ್ವ ಮನ್ನಣೆ ಗಳಿಸಿರುವ ಸಂಗೀತ ಧ್ರುವತಾರೆ, ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಇಂದು ನಿಧನ ಹೊಂದಿದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಮಾರು 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರಾಜೀವ್ ತಾರಾನಾಥ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮೇರು ಕಲಾವಿದ ರಾಜೀವ್ ತಾರಾನಾಥ್ ಅವರು ಸರೋದ್ ವಾದನದಲ್ಲಿ ಅಪ್ರತಿಮ ವಿದ್ವಾಂಸರು. ಅವರ ಸಂಗೀತ ಸೇವೆಗಾಗಿ ಪದ್ಮಶ್ರೀ, ನಾಡೋಜ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಅರಸಿ ಬಂದಿದೆ.
ಮೈಸೂರಿನ ಕುವೆಂಪುನಗರದ ನಿವಾಸದಲ್ಲಿ ಬುಧವಾರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಿಎಂ ಸಂತಾಪ: ರಾಜೀವ್ ತಾರಾನಾಥ್ ಅವರ ನಿಧನದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
“ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದು:ಖಿತನಾಗಿದ್ದೇನೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ ತುಂಬಲಾರದ ನಷ್ಟ. ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ” ಎಂದು ಸಿಎಂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.