ಕಸದ ಸಮಸ್ಯೆ ಇತ್ಯರ್ಥಕ್ಕೆ 20ರೊಳಗೆ ವರದಿ ಕೊಡಿ


Team Udayavani, Nov 3, 2019, 3:00 AM IST

kasada

ಮೈಸೂರು: ಸುಯೇಜ್‌ ಫಾರ್ಮ್ನಲ್ಲಿ ಕೊಳೆತು ನಾರುತ್ತಾ ಈ ಭಾಗದ ಜನರ ನೆಮ್ಮದಿಗೆ ಭಂಗ ತಂದಿರುವ ಕಸದ ರಾಶಿಗೆ ಮುಕ್ತಿ ಕಾಣಿಸುವ ಸಂಬಂಧ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೈಸೂರಿನ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದ್ದು, ಈ ಸಮಿತಿ ದೇಶದಲ್ಲಿ ಎಲ್ಲೆಲ್ಲಿ ಈ ರೀತಿಯ ಕಸದ ಸಮಸ್ಯೆ ಇತ್ತು, ಅದನ್ನು ಹೇಗೆ ಬಗೆಹರಿಸಲಾಗಿದೆ ಎಂಬುದನ್ನು ನ.20ರೊಳಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೂಚಿಸಿದರು.

ಶನಿವಾರ ಸುಯೇಜ್‌ಫಾರ್ಮ್ಗೆ ಭೇಟಿ ನೀಡಿ ಕಸದ ರಾಶಿ ಹಾಗೂ ಘನತ್ಯಾಜ್ಯ ಸಂಸ್ಕರಣ ಘಟಕಗಳನ್ನು ವೀಕ್ಷಿಸಿದ ನಂತರ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಆಲಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ನೇತೃತ್ವದ ಈ ಸಮಿತಿಯಲ್ಲಿ ನಗರ ವ್ಯಾಪ್ತಿಯ ನಾಲ್ವರು ಶಾಸಕರು, ಸಂಸದ ಪ್ರತಾಪ್‌ ಸಿಂಹ, ಮಹಾ ನಗರಪಾಲಿಕೆ ಮೇಯರ್‌, ಉಪ ಮೇಯರ್‌ ಇರಲಿದ್ದು, ಇಂದಿನಿಂದಲೇ ಕಾರ್ಯಾರಂಭ ಮಾಡುವಂತೆ ತಿಳಿಸಿದರು.

ಇಲ್ಲಿನ ಕಸದ ಸಮಸ್ಯೆ ಇತ್ಯರ್ಥಕ್ಕೆ ಎಷ್ಟು ಹಣ ಖರ್ಚಾದರೂ ಮುಖ್ಯಮಂತ್ರಿಯವರನ್ನು ಒಪ್ಪಿಸಿ ಹಣ ಕೊಡಿಸುತ್ತೇನೆ. ಹಾಗೆಂದು ಎಲ್ಲವನ್ನೂ ಒಂದೇ ದಿನದಲ್ಲಿ ಸರಿಪಡಿಸಲಾಗುವುದಿಲ್ಲ. ಹಂತ ಹಂತವಾಗಿ ಮುಂದಿನ 3 ರಿಂದ 6 ತಿಂಗಳಲ್ಲಿ ಈ ಸಮಸ್ಯೆಗೆ ಅಂತ್ಯಕಾಣಿಸಿ, ಕಸ ವಿಲೇವಾರಿಗೆ ಗುರುತಿಸಲಾಗಿರುವ ಕೆಸರೆ ಮತ್ತು ರಾಯನಕೆರೆ ಜಾಗಗಳಿಗೆ ನಾಳೆಯಿಂದಲೇ ಕಸ ವಿಲೇವಾರಿ ಆರಂಭಿಸಿ ಎಂದು ಸೂಚಿಸಿದರಲ್ಲದೆ, ನಾಳೆಯಿಂದಲೇ ಮೂಲದಿಂದಲೇ ಕಸ ವಿಂಗಡಿಸುವ ಕೆಲಸವನ್ನೂ ಪಾಲಿಕೆ ಆರಂಭಿಸಬೇಕು. ಪೌರ ಕಾರ್ಮಿಕರ ಕೊರತೆಯ ಕಾರಣಕ್ಕೆ 300 ರಿಂದ 400 ಜನರನ್ನು ತೆಗೆದುಕೊಳ್ಳುತ್ತಿದ್ದೀರಿ, ಅದಕ್ಕೆ ಸರ್ಕಾರದಿಂದ ಅನುಮತಿ ಕೊಡಿಸುವುದಾಗಿ ಹೇಳಿದರು.

ತಾರ್ಕಿಕ ಅಂತ್ಯ ಕಾಣಿಸಿ: ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ಮೈಸೂರಿನ ಕಸದ ಸಮಸ್ಯೆಗೆ ದಶಕಗಳ ಇತಿಹಾಸವಿದೆ. ನಿತ್ಯ ಒಂದೂವರೆಯಿಂದ ಒಂದೂ ಮುಕ್ಕಾಲು ಲಕ್ಷ ಟನ್‌ ಕಸವನ್ನು ಇಲ್ಲಿ ತಂದು ಸುರಿಯಲಾಗುತ್ತಿದೆ. ಇದರಿಂದಾಗಿ ಇದೊಂದು ರೋಗ ರುಜಿನ ಹರಡುವ ಬೆಟ್ಟವಾಗುತ್ತೆ. ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಿಸಬೇಕಿದೆ ಎಂದು ಮನವಿ ಮಾಡಿದರು.

ಬಯೋ ರೇಡಿಯೇಷನ್‌ ಘಟಕ: ನಗರಪಾಲಿಕೆ ಸದಸ್ಯೆ ಶೋಭಾ ಮಾತನಾಡಿ, ಸುಯೇಜ್‌ಫಾರ್ಮ್ಗೆ ಕಸ ಸಾಗಣೆ ಮಾಡುವ ಲಾರಿಗಳವರು ರಸ್ತೆಗಳಲ್ಲೇ ಚೆಲ್ಲಿಕೊಂಡು ಬರುತ್ತಿದ್ದಾರೆ. ಜೊತೆಗೆ ನಗರಪಾಲಿಕೆಯಲ್ಲಿ ಪೌರಕಾರ್ಮಿಕರ ಕೊರತೆಯೂ ಇದೆ. ಸುಯೇಜ್‌ಫಾರ್ಮ್ನಲ್ಲಿ ಬಯೋ ರೇಡಿಯೇಷನ್‌ ಘಟಕ ಆಗಬೇಕಿದೆ ಎಂದು ಮನವಿ ಮಾಡಿದರು.

ಸುತ್ತಮುತ್ತಲಿನ ನಾಗರಿಕರು ಹಾಗೂ ವಿದ್ಯಾರಣ್ಯಪುರಂ ಡಿಎವಿ ಪಬ್ಲಿಕ್‌ ಶಾಲೆಯ ಮಕ್ಕಳು ಸಚಿವರಿಗೆ ಇಲ್ಲಿನ ಕಸದ ರಾಶಿಯಿಂದ ಉಂಟಾಗುತ್ತಿರುವ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟರು. ಮೇಯರ್‌ ಪುಷ್ಪಲತಾ, ಉಪ ಮೇಯರ್‌ ಶಫೀ ಅಹಮದ್‌, ಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್‌, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ನಗರಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಶೌಚಾಲಯದೊಳಗೆ ಎಂಜಿನಿಯರ್‌ ಕೂಡಿ ಹಾಕಿದ್ದನ್ನು ನೆನಪಿಸಿದ ಸೋಮಣ್ಣ: ರಾಮಕೃಷ್ಣ ಹೆಗ್ಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಶೌಚಾಲಯ ನಿರ್ವಹಣೆ ಸರಿ ಇಲ್ಲ ಎಂಬ ಕಾರಣಕ್ಕೆ ಸಂಬಂಧಪಟ್ಟ ಎಂಜಿನಿಯರ್‌ರನ್ನು ಶೌಚಾಲಯದೊಳಗೆ ಕೂಡಿ ಹಾಕಿದ ಪ್ರಸಂಗವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೂಚ್ಯವಾಗಿ ಹೇಳಿದರು.

ನಗರಪಾಲಿಕೆಯ ಆರೋಗ್ಯಾಧಿಕಾರಿಗಳಾದ ನಾಗರಾಜ್‌ ಮತ್ತು ಜಯಂತ್‌ ಅವರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ನಿಮ್ಮ ಇಚ್ಛಾಶಕ್ತಿ ಕೊರತೆಯಿಂದ ಈ ಸಮಸ್ಯೆ ಉಲ್ಬಣಿಸಿದೆ. ನಾವು ಪರಿಶೀಲನೆಗೆ ಬರುತ್ತೇವೆ ಎಂಬ ಕಾರಣಕ್ಕೆ ಇಂದು ಒಂದಷ್ಟು ಕೆಲಸ ಮಾಡಲು ಹೊರಟಿದ್ದೀರಿ, 200 ಎಕರೆ ಇರುವ ಈ ಘಟಕವನ್ನು ನಿಮ್ಮಿಂದ ನಿರ್ವಹಿಸಲಾಗುತ್ತಿಲ್ಲ. 25 ವರ್ಷದ ಹಿಂದಿನ ವ್ಯವಸ್ಥೆಯಲ್ಲೇ ಇದೆ ಈ ಘಟಕ. ಈ ರೀತಿ ಎಲ್ಲಾ ಸುಳ್ಳು ಮಾಹಿತಿ ಕೊಡಬೇಡಿ ಎಂದು ತರಾಟೆಗೆ ತೆಗೆದುಕೊಂಡರು.

ಪ್ರವಾಸಿಗರಿಗೆ ಮುಜುಗರ ತರಬೇಡಿ: ಸ್ವಚ್ಛ ಭಾರತ ಯೋಜನೆಯಡಿ ತಾತ್ಕಾಲಿಕ ಮತ್ತು ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಕಸದ ಜೊತೆಗೆ ಇಲ್ಲಿಗೆ ಪ್ಲಾಸ್ಟಿಕ್‌ ಬರದಿದ್ದರೆ ಅರ್ಧ ಸಮಸ್ಯೆ ಇತ್ಯರ್ಥವಾಗಲಿದೆ. ಅಧಿಕಾರಿಗಳು ತಪ್ಪು ಮಾಹಿತಿ ಕೊಟ್ಟರೆ ಸಮಸ್ಯೆ ಬಗೆಹರಿಯುವುದಿಲ್ಲ. ಎಲ್ಲರೂ ಮುಖವಾಡ ಹಾಕಿಕೊಂಡಿದ್ದಾರೆ. ಈ ಅವ್ಯವಸ್ಥೆಯನ್ನು ಮೊದಲು ಸರಿಪಡಿಸಿ ಎಂದು ಸಚಿವ ವಿ.ಸೋಮಣ್ಣ ತಾಕೀತು ಮಾಡಿದರು. ವಿಶ್ವದ ಎಲ್ಲೆಡೆಯಿಂದ ಮೈಸೂರಿಗೆ ನಿತ್ಯ ಪ್ರವಾಸಿಗರು ಬರುತ್ತಾರೆ. ದಸರೆಯ ಹತ್ತು ದಿನಗಳಲ್ಲಿ 55 ರಿಂದ 60 ಲಕ್ಷ ಪ್ರವಾಸಿಗರು ಬಂದು ಹೋಗಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ಮೈಸೂರಿಗೆ ಬಂದ ಪ್ರವಾಸಿಗರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ತರಬೇಡಿ ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.