ಮಾಜಿ ಸಿಎಂಗಳಿಗೆ ಪ್ರತಿಷ್ಠೆ..!
Team Udayavani, Nov 26, 2021, 11:57 AM IST
ಮೈಸೂರು: ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಇದು ಪ್ರತಿಷ್ಠೆಯ ಪ್ರಶ್ನೆ. ತಾವೇ ನಿಂತು ಟಿಕೆಟ್ ಕೊಡಿಸಿರುವವರನ್ನು ಗೆಲ್ಲಿಸಿಕೊಂಡು ಬರಬೇಕಾದ ಹೊಣೆಗಾರಿಕೆ ಈಗ ಅವರ ಮೇಲೆಯೇ ಬಿದ್ದಿದೆ!. ಹೌದು, ಮೈಸೂರು, ಚಾಮ ರಾಜನಗರ ಜಿಲ್ಲೆ ಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ವಿಚಾರ ದಲ್ಲಿ ಈ ಮಾತು ಅನ್ವಯ ವಾಗುತ್ತದೆ.
ಬಿಜೆಪಿ ಅಭ್ಯರ್ಥಿ ಆರ್.ರಘು ಕೌಟಿಲ್ಯ, ಕಾಂಗ್ರೆ ಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ, ಜೆಡಿಎಸ್ ಉಮೇ ದುವಾರ ಸಿ.ಎನ್. ಮಂಜೇಗೌಡರ ಗೆಲು ವು ಮೂರು ಮಾಜಿ ಮುಖ್ಯಮಂತ್ರಿಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಆಪ್ತರು. ಯಡಿಯೂರಪ್ಪ ಅವರೇ ರಘು ಅವರಿಗೆ ಟಿಕೆಟ್ ಕೊಡಿಸಿದ್ದಾರೆ.
ಸಂಸದ ವಿ. ಶ್ರೀನಿವಾಸಪ್ರಸಾದ್ ಅವರು ಮೈಸೂರು ನಗರಾ ಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿ. ಬಸವೇ ಗೌಡ ಅವರಿಗೆ ಟಿಕೆಟ್ ನೀಡಬೇಕೆಂದು ವರಿಷ್ಠರಿ ಗೆ ಮನವಿ ಮಾಡಿದ್ದರು. ಆದರೆ, ಯಡಿ ಯೂ ರಪ್ಪ ಅವರ ಆಶೀರ್ವಾದದಿಂದ ರಘು ಅವರಿಗೆ ಟಿಕೆಟ್ ದೊರೆತಿದೆ. ಹೀಗಾಗಿ, ರಘು ಅವರ ಗೆಲು ವು ಬಿಎಸ್‌ವೈ ಅವರಿಗೆ ಪ್ರತಿಷ್ಠೆ ಪ್ರಶ್ನೆಯಾಗಿದೆ. ಜೆಡಿಎಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ಮೈಸೂ ರಿಗೇ ಆಗಮಿಸಿ ಸಭೆ ನಡೆಸಿದರು. ವಿಧಾನ ಪರಿಷತ್ ಸದಸ್ಯ ಜೆಡಿಎಸ್‌ನ ಸಂದೇಶ್ ನಾಗರಾಜ್ ಮೊದಲು ಬಿಜೆಪಿ ಟಿಕೆಟ್‌ಗೆ ಪ್ರಯತ್ನಿಸಿ ವಿಫಲ ರಾದರು. ನಂತರ ಜೆಡಿಎಸ್ ಕಡೆಗೆ ಹೊರಳಿ ಕುಮಾರಸ್ವಾಮಿ ಅವರನ್ನು ಭೇಟಿಯಾದರು.
ಇದನ್ನೂ ಓದಿ: ಗೋಲ್ಡನ್ ಗೋವಾ ಸ್ಥಾಪಿಸಲು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತನ್ನಿ: ನಡ್ಡಾ
ಆದರೆ, ಪಕ್ಷದಿಂದ ಈಗಾಗಲೇ ಅಂತರ ಕಾಯ್ದುಕೊಂಡಿರುವ ಸಂದೇಶ್ ನಾಗರಾಜ್ ಅವರಿಗೆ ಟಿಕೆಟ್ ಕೊಡಲು ಕುಮಾರಸ್ವಾಮಿ ಒಪ್ಪಲಿಲ್ಲ. ಅವರೇ ಮುಂದೆ ನಿಂತು ಕಾಂಗ್ರೆಸ್ ನಲ್ಲಿದ್ದ ಸಿ.ಎನ್.ಮಂಜೇಗೌಡ ಅವರನ್ನು ಮರಳಿ ಜೆಡಿಎಸ್‌ಗೆ ಸೇರಿಸಿಕೊಂಡು ಅವರಿಗೆ ಟಿಕೆಟ್ ಘೋಷಿಸಿದರು. ಹೀಗಾಗಿ, ಮಂಜೇಗೌಡರನ್ನು ಗೆಲ್ಲಿಸಲು ಕುಮಾರಸ್ವಾಮಿ ಈಗ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.
ಇಂದು ಸಿದ್ದರಾಮಯ್ಯ ಸಭೆ:
ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಅವರು ಇದೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಸತತ ಎರಡು ಬಾರಿ ಗೆಲುವು ಸಾಧಿಸಿದ್ದ ಆರ್.ಧರ್ಮಸೇನ ಅವರಿಗೆ ಟಿಕೆಟ್ ನಿರಾಕರಿಸಿ ತಿಮ್ಮಯ್ಯರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಮಾಜಿ ಸಿಎಂ ಸಿದ್ದರಾಮಯ ಪಕ್ಷದ ಸ್ಥಳೀಯ ಶಾಸಕರು, ಪ್ರಮುಖ ನಾಯಕರ ಅಭಿಪ್ರಾಯ ಆಲಿಸಿ ಟಿಕೆಟ್ ಕೊಡಿಸಿದ್ದಾರೆ. ಪಕ್ಷದ ಹೈಕಮಾಂಡ್ ಮೈಸೂರು ಕ್ಷೇತ್ರದ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಕೈಗೊ ಳ್ಳುವ ನಿರ್ಧಾರವೇ ಅಂತಿಮ ಎಂದಿತ್ತು. ಹೀಗಾಗಿ, ಡಾ.ತಿಮ್ಮಯ್ಯ ಅವರ ಗೆಲುವಿನ ಹೊಣೆಗಾರಿಕೆ ಈಗ ಸಿದ್ದರಾಮಯ್ಯ ಅವರ ಮೇಲೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು ಶುಕ್ರವಾರಮೈಸೂರು, ಚಾಮರಾಜನಗರ ಜಿಲ್ಲೆಗಳ ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರ ಸಭೆಯನ್ನು ಖಾಸಗಿ ಹೋಟೆಲ್‌ನಲ್ಲಿ ಕರೆದಿದ್ದಾರೆ. ಅಭ್ಯರ್ಥಿ ಗೆಲುವಿಗೆ ತಂತ್ರಗಳ ಕುರಿತು ಚರ್ಚಿಸಲಿದ್ದಾರೆ.
ಜಿಟಿಡಿ ನಡೆಯೇ ಕುತೂಹಲ
ಬಿಜೆಪಿ ತನ್ನ ಅಭ್ಯರ್ಥಿ ಗೆಲುವಿಗೆ ರಣತಂತ್ರ ರೂಪಿಸುತ್ತಿದೆ. ಜೆಡಿ ಎಸ್‌ನಲ್ಲಿರುವ ಸಂದೇಶ್ ನಾಗರಾಜ್ ರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಎಸ್.ಟಿ.ಸೋಮಶೇಖರ್ ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಜೆಡಿಎಸ್ ಉಮೇದುವಾರ ಮಂಜೇಗೌಡ ಅವರು ಜೆಡಿಎಸ್‌ನಿಂದ ದೂರ ಸರಿದಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ನಿವಾಸಕ್ಕೆ ತೆರಳಿ ಅವರ ಬೆಂಬಲ ಯಾಚಿಸಿದ್ದಾರೆ.
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ತಮ್ಮ ಹಾಗೂ ತಮ್ಮ ಪುತ್ರ ಜಿ.ಡಿ.ಹರೀಶ್‌ಗೌಡ ಇಬ್ಬರಿಗೂ ಕಾಂಗ್ರೆಸ್ ಟಿಕೆಟ್‌ಗೆ ಒಪ್ಪಿದರೆ ಆ ಪಕ್ಷ ಸೇರುವುದಾಗಿ ಈಗಾಗಲೇ ಹೇಳಿದ್ದಾರೆ. ಹೀಗಾಗಿ, ಈ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡ ಅವರು ಯಾರನ್ನು ಬೆಂಬಲಿಸುತ್ತಾರೆಂಬುದು ಕುತೂಹಲ ಮೂಡಿಸಿದೆ.
– ಕೂಡ್ಲಿ ಗುರುರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.